ಚುನಾವಣಾ ಕರ್ತವ್ಯಕ್ಕಾಗಿ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ :ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಸುದ್ದಿಗೋಷ್ಟಿ

ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿ ನಡೆಸಲಾಗಿದೆ. ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ. 543 ರಾಜ್ಯಗಳ ಲೋಕಸಭಾ ಚುನಾವಣೆಯ ದಿನಾಂಕ ಇಂದೇ ಘೋಷಣೆಯಾಗಲಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವ ಸನ್ನದ್ಧವಾಗಿದೆ. ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಚುನಾವಣಾ ಕರ್ತವ್ಯಕ್ಕಾಗಿ ಒಂದೂವರೆ ಕೋಟಿ ಸಿಬ್ಬಂದು ಬಳಕೆ ಮಾಡಿಕೊಳ್ಳಲಾಗುತ್ತಿದೆ.

 

ದೇಶದಲ್ಲಿ 97 ಕೋಟಿ ಮತದಾರರಿದ್ದಾರೆ. ಮತದಾನಕ್ಕೆ 55 ಲಕ್ಷ ಇವಿಎಂ ಗಳ ವ್ಯವಸ್ಥೆ ಮಾಡಲಾಗಿದೆ. 10 ಲಕ್ಷದ 5 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 1.8 ಕೋಟಿ ಮತದಾರರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. ಮುಕ್ತ , ನ್ಯಾಯಸಮ್ಮತ, ಪಾರದರ್ಶ‌ ಚುನಾವಣೆಯೇ ನಮ್ಮ ಉದ್ದೇಶವಾಗಿದೆ.

 

85 ವರ್ಷ ಮೇಲ್ಪಟ್ಟವರಲ್ಲಿ 85 ಸಾವಿರ ಮತದಾರರಿದ್ದಾರೆ. 19.74 ಕೋಟಿಯಷ್ಟು ಯುವ ಮತದಾರರು ಈ ಬಾರಿ ಮತಚಲಾಯಿಸಲಿದ್ದಾರೆ. 12 ರಾಜ್ಯಗಳಲ್ಲಿ ಮಹಿಳಾ ಮತದಾರರು ಹೆಚ್ಚಾಗಿದ್ದಾರೆ. ಪುರುಷ ಮತದಾರರಿಗಿಂದ ಮಹಿಳಾ ಮತದಾರರು ಹೆಚ್ಚಾಗಿದ್ದಾರೆ. 85 ಸಾವಿರ ತೃತೀಯ ಲಿಂಗಿಗಳು ಮತ ಚಲಾಯಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *