ಚಿತ್ರದುರ್ಗ, (ಅ.16) : ನಗರದ ಬಾಪೂಜಿ ಸಮೂಹ ಸಂಸ್ಥೆಗಳ ಸಭಾಂಗಣದಲ್ಲಿ ಅ. 17 ರಂದು ಬೆಳಿಗ್ಗೆ 10.30ಕ್ಕೆ ಬಾದರದಿನ್ನಿ ಆಟ್ರ್ಸ್ ಆಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಬಿ.ಇಡಿ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ರಂಗಕಲೆ ಕುರಿತು ಒಂದು ದಿನದ ಕಾರ್ಯಗಾರ ಆಯೋಜಿಸಲಾಗಿದೆ.
ಕಾರ್ಯಗಾರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯ ನಿರ್ದೇಶಕ ಮಲ್ಲಿಕಾರ್ಜುನ್ ಉದ್ಘಾಟಿಸುವರು. ಡಯಟ್‍ನ ಉಪನ್ಯಾಸಕರಾದ ರಾಘವೇಂದ್ರ .ಎನ್ ರವರು ಶಿಕ್ಷಣದಲ್ಲಿ ರಂಗಕಲೆ ಕುರಿತು ಉಪನ್ಯಾಸ ನೀಡುವರು. ನಿನಾಸಂ ಕಲಾವಿದ ಕೆ.ಪಿ.ಎಂ ಗಣೇಶಯ್ಯ, ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ, ಕೆ.ಎಂ.ವೀರೇಶ್, ಬಾಪೂಜಿ ಸಮೂಹ ಸಂಸ್ಥೆಗಳ ನಿರ್ದೇಶಕ ಕೆ.ಎಂ.ಚೇತನ್, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಜಯಲಕ್ಷ್ಮೀ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಬಾದರದಿನ್ನಿ ಆಟ್ರ್ಸ್ ಆಕಾಡೆಮಿಯ ಕಾರ್ಯದರ್ಶಿ ಪ್ರಕಾಶ್ ಬಾದರದಿನ್ನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.