ಬೆಳಗಾವಿ: ಜಿಲ್ಲೆಯ ಮುದೇನೂರು ಗ್ರಾಮದಲ್ಲಿನ ಕುಡಿಯುವ ನೀರಿನ ಪೈಪ್ ಒಡೆದು, ಅದಕ್ಕೆ ಚರಂಡಿ ನೀರು ಸೇರ್ಪಡೆಯಾಗಿದೆ. ಈ ನೀರನ್ನು ಕುಡಿದ ಊರಿನ ಮಂದಿ ಅಸ್ವಸ್ಥರಾಗಿದ್ದಾರೆ. ಒಬ್ಬ ವ್ಯಕ್ತಿ ಇದರಿಂದಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ವರ್ಷದ ಶಿವಪ್ಪ ಎಂಬಾತ ಕಲುಷಿತ ನೀರು ಕುಡಿದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಶಿವಪ್ಪ ಕುಟುಂಬಕ್ಕೆ 10 ಲಕ್ಷ ರೂಪಾಯಿ ಹಣ ನೀಡಿದೆ. ಇನ್ನು ಕೇವಲ 4 ದಿನಗಳ ಅಂತರದಲ್ಲಿ 94 ಜನರು ಅಸ್ವಸ್ಥರಾಗಿದ್ದಾರೆ. 44 ಪುರುಷರು, 30 ಮಹಿಳೆಯರು, 12 ಬಾಲಕರು ಹಾಗೂ 8 ಬಾಲಕಿಯರು ಸೇರಿದಂತೆ 94 ಜನ ಅಸ್ವಸ್ಥರಾಗಿದ್ದಾರೆ.
ಆಸ್ಪತ್ರೆಗೆ ದಾಖಲಾದ ಬಹುತೇಕರಲ್ಲಿ ವಾಂತಿ, ಬೇಧಿ ಸಮಸ್ಯೆ ಕಾಡಿದೆ. ಪರಿಸ್ಥಿತಿ ಗಂಭೀರವಾದವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲಿನ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಇನ್ನು ಮೃತ ಶಿವಪ್ಪ ಕುಟುಂಬಕ್ಕೆ ಸರ್ಕಾರ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…