ಹೌದು ಕಳೆದ ವರ್ಷವಷ್ಟೇ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದ ಗೌತಮ್ ಗಂಭೀರ್ ತಲೆ ಮೇಲೆ ತೂಗುಗತ್ತಿ ನೇತಾಡುತ್ತಿದೆ. ತಮ್ಮ ಸ್ಥಾನ ಉಳಿಸಿಕೊಳ್ಳಲು 68 ಗಂಟೆಗಳ ಸಮಯವಿದೆ. ಅವರ ನಾಯಕತ್ವದ ವಿಚಾರಕ್ಕೆ ಟೀಂ ಇಂಡಿಯಾದಲ್ಲಿ ಭಿನ್ನಾಭಿಪ್ರಾಯಗಳು ಕೇಳಿ ಬಂದಿವೆ.
ಆಸ್ಟ್ರೇಲಿಯಾದಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ 184 ರನ್ ಗಳ ಹೀನಾಯ ಸೋಲು ಕಂಡಿದೆ. ಮೆಲ್ಬೋರ್ನ್ ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ನಲ್ಲಿ ಸೋಲಿನಲ್ಲಿ ಟೀಂ ಇಂಡಿಯಾದ ಕಳಪೆ ಪ್ರದರ್ಶನಕ್ಕೆ ಗೌತಮ್ ಗಂಭೀರ್ ಕೋಪಗೊಂಡಿದ್ದಾರೆ. ಇದರಿಂದ ಆಟಗಾರರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದಾರೆ ಎನ್ನಲಾಗಿದೆ. ತನ್ನ ಯೋಜನೆಯಂತೆ ಆಡದೆ ಹೋದಲ್ಲಿ ಆ ಆಟಗಾರರನ್ನು ಹೊರ ಹಾಕುವುದಾಗಿ ಡ್ರೆಸ್ಸಿಂಗ್ ರೂಮಿನಲ್ಲಿ ಹೇಳಿದ್ದಾರೆ ಎನ್ನಲಾಗಿದೆ.
ಸಿಡ್ನಿ ಟ್ರೋಫಿಯನ್ನು ಹೊರತುಪಡಿಸಿ, ಟೀಂ ಇಂಡಿಯಾ ಚಾಂಪಿಯನ್ ಟ್ರೋಫಿಯನ್ನು ಆಡಬೇಕಾಗಿದೆ. ಈ ಟೂರ್ನಿಯಲ್ಲಿ ಟೀಂ ಇಂಡಿಯಾದ ಸುಧಾರಣೆ ಕಂಡು ಬರದೆ ಇದ್ದರೆ, ಗಂಭೀರ್ ಅವರ ಸ್ಥಾನಕ್ಕೆ ಕುತ್ತು ಎದುರಾಗಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಮಂಡಳಿಯ ಅಧ್ಯಕ್ಷ ರೋಜರ್ ಬಿನ್ನಿ ಇದೀಗ ಯಾವುದೇ ರೀತಿಯಲ್ಲಿಯೂ ನೇರವಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಿಲ್ಲ. ಜೈ ಶಾ ನಿರ್ಗಮನದ ನಂತರ ಹಂಗಾಮಿ ಕಾರ್ಯದರ್ಶಿ ಮಾತ್ರ ಮಂಡಳಿಯ ಕಾರ್ಯವನ್ನು ನಿರ್ವಹಣೆ ಮಾಡುತ್ತಿದ್ದಾರೆ. ಶೀಘ್ರದಲ್ಲೇ ಮಂಡಳಿಗೆ ಖಾಯಂ ಕಾರ್ಯದರ್ಶಿ ಸಿಗಲಿದ್ದು, ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡದ ಪ್ರದರ್ಶನ ಸುಧಾರಿಸದಿದ್ದರೆ ಗಂಭೀರ್ ಹುದ್ದೆಗೆ ಕತ್ತರಿ ಬೀಳಬಹುದು ಎನ್ನಲಾಗಿದೆ. ಇನ್ನು ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಪ್ರಾರಂಭವಾಗಲಿದ್ದು, ಮಾರ್ಚ್ 9 ರವರೆಗೆ ನಡೆಯಲಿದೆ.