Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಲ್ಲಾ ವರ್ಗದವರಿಗೂ ಸಾಮಾಜಿಕ ನ್ಯಾಯ ಸಿಗುವುದು ಬಿಜೆಪಿಯಿಂದ ಮಾತ್ರ : ಜಿ.ಹೆಚ್.ತಿಪ್ಪಾರೆಡ್ಡಿ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, ಸುದ್ದಿಒನ್ ನ್ಯೂಸ್, (ಏ.20) : ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ  ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿರವರು ಗುರುವಾರ ನಾಮಪತ್ರ ಸಲ್ಲಿಕೆ ವೇಳೆಯಲ್ಲಿ ದಾವಣಗೆರೆ ರಸ್ತೆಯಲ್ಲಿರುವ ಅವರ ನಿವಾಸದಿಂದ ಹೊರಟ ಮೆರವಣಿಗೆಯಲ್ಲಿ ಚಿತ್ರದುರ್ಗದ ರಾಜಕೀಯ ಇತಿಹಾಸದಲ್ಲಿಯೇ ಕಂಡರಿಯದಷ್ಟು ಜನ ಜಮಾವಣೆಯಾಗಿತ್ತು.

ಬೆಳಿಗ್ಗೆಯೇ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ನಿವಾಸದಿಂದ ಹೊರಟ ಮೆರವಣಿಗೆಯಲ್ಲಿ ತಾಲ್ಲೂಕು ಕಚೇರಿವರೆಗೂ ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ನೆರೆದು ರಾಜಕೀಯ ಚಾಣಾಕ್ಷ ಜಿ.ಹೆಚ್.ತಿಪ್ಪಾರೆಡ್ಡಿ ಪರ ಜೈಕಾರಗಳನ್ನು ಕೂಗುತ್ತ ಬೆಂಬಲ ಸೂಚಿಸಿದರು. ರಸ್ತೆಯ ಮಧ್ಯೆ ಅಲ್ಲಲ್ಲಿ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಲಾಯಿತು.

ಕೈಯಲ್ಲಿ ಬಿಜೆಪಿ ಬಾವುಟ ಹಾಗೂ ಕೊರಳಲ್ಲಿ ಶಾಲು, ಕಮಲದ ಚಿನ್ಹೆಯುಳ್ಳ ಟೋಪಿಯನ್ನು ತಲೆಗೆ ಧರಿಸಿದ್ದ ಮಹಿಳೆಯರು ಸುಡು ಬಿಸಿಲಿಗೂ ಜಗ್ಗದೆ ಮೆರವಣಿಗೆಯಲ್ಲಿ ಸಾಗಿದರು. ಡೊಳ್ಳು, ತಮಟೆ, ಉರುಮೆ ಸದ್ದಿಗೆ ನೆರೆದಿದ್ದ ಜನ ಹೆಜ್ಜೆ ಹಾಕಿ ಖುಷಿಪಟ್ಟರು.

ಅಭಿಮಾನಿಗಳು ಹಾಗೂ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿ ಗುಜರಾತ್‍ನಲ್ಲಿ ಎಪ್ಪತ್ತೈದು ವರ್ಷವಾಗಿರುವ ಇಬ್ಬರಿಗೆ ಕರ್ನಾಟಕದಲ್ಲಿ ನನಗೆ ಮತ್ತೊಮ್ಮೆ ಸ್ಪರ್ಧಿಸಲು ಕೇಂದ್ರ ನಾಯಕರುಗಳು ಟಿಕೆಟ್ ನೀಡಿದ್ದಾರೆ.

2018 ರ ಚುನಾವಣೆಯಲ್ಲಿ ಜಿಲ್ಲೆಯ ಆರು ಕ್ಷೇತ್ರಗಳ ಪೈಕಿ ಐದರಲ್ಲಿ ಬಿಜೆಪಿ. ಗೆದ್ದಿತು. ಈ ಬಾರಿಯ ಚುನಾವಣೆಯಲ್ಲಿ ಆರಕ್ಕೆ ಆರು ಸ್ಥಾನ ಬಿಜೆಪಿ.ಪಾಲಾಗಬೇಕು. ದೇಶದ ಪ್ರಧಾನಿ ಮೋದಿ, ಅಮಿತ್‍ಷಾ, ಜೆ.ಪಿ.ನಡ್ಡಾ, ರಾಜ್ಯದ ರೈತ ನಾಯಕ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಹಾಗೂ ಜಿಲ್ಲಾಧ್ಯಕ್ಷರು ನನಗೆ ಟಿಕೇಟ್ ಸಿಗಲು ಸಾಕಷ್ಟು ಶ್ರಮಿಸಿದ್ದಾರೆ.

ಕೊರೋನಾ ಸಂದರ್ಭದಲ್ಲಿ ನಮ್ಮ ದೇಶದ ಪ್ರಧಾನಿ ಮೋದಿರವರು ಬಡವರಿಗೆ ಹತ್ತು ಕೆ.ಜಿ. ಅಕ್ಕಿ ಗೋಧಿ ಹಾಗೂ ಉಚಿತ ಲಸಿಕೆ ನೀಡಿ ಎಲ್ಲರನ್ನು ಕಾಪಾಡಿದ್ದಾರೆ. ಈಗ ನನ್ನ ವಿರುದ್ದ ಚುನಾವಣೆಗೆ ನಿಂತಿರುವ ಅಭ್ಯರ್ಥಿ ಅಂತಹ ಕಷ್ಟ ಕಾಲದಲ್ಲಿ ಎಲ್ಲಿ ಹೋಗಿದ್ದಪ್ಪ ಎಂದು ಹೆಸರೇಳದೆ ವಾಗ್ದಾಳಿ ನಡೆಸಿದರು.

ರೈತ ಮಕ್ಕಳು, ಕೂಲಿ ಕಾರ್ಮಿಕರು, ಚಾಲಕರ ಮಕ್ಕಳ ಶಿಕ್ಷಣಕ್ಕಾಗಿ ಪ್ರಧಾನಿ ಮೋದಿರವರು ವಿದ್ಯಾರ್ಥಿ ವೇತನ ನೀಡುತ್ತಿದ್ದಾರೆ. ಎಲ್ಲಾ ವರ್ಗದವರಿಗೂ ಸಾಮಾಜಿಕ ನ್ಯಾಯ ಸಿಗುವುದು ಬಿಜೆಪಿ.ಯಿಂದ ಮಾತ್ರ. ರಾಜ್ಯದಲ್ಲಿ ನೂರ ನಲವತ್ತು ಸೀಟುಗಳನ್ನು ಗೆಲ್ಲಬೇಕೆಂಬ ಗುರಿಯಿಟ್ಟುಕೊಂಡಿದ್ದು, ಜನ ಪೂರ್ಣ ಪ್ರಮಾಣದ ಬಹುಮತ ನೀಡಿದ್ದೇ ಆದಲ್ಲಿ ಮತ್ತೊಮ್ಮೆ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ. ನನ್ನ ಕ್ಷೇತ್ರದಲ್ಲಿ ಎಲ್ಲಾ ಅಭಿವೃದ್ದಿಯಾಗಿದೆ. ಅಪ್ಪರ್ ಭದ್ರಾ ಯೋಜನೆಗೆ ನರೇಂದ್ರಮೋದಿರವರು ಹಣ ಬಿಡುಗಡೆಗೊಳಿಸಿದ್ದಾರೆ. ಮೆಡಿಕಲ್ ಕಾಲೇಜಿಗೆ ಭೂಮಿಪೂಜೆಯಾಗಿದೆ.

ನಗರ ಬಿಟ್ಟು 183 ಹಳ್ಳಿಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಶುದ್ದ ಕುಡಿಯುವ ನೀರು ಕೊಡುವುದಕ್ಕಾಗಿ ಪೈಪ್‍ಲೈನ್ ಅಳವಡಿಕೆ ಕೆಲಸವಾಗುತ್ತಿದೆ. ಮುಂದಿನ ತಿಂಗಳ ಹತ್ತರಂದು ನಡೆಯುವ ಚುನಾವಣೆಯಲ್ಲಿ ಐವತ್ತು ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿದರು.

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್, ಮಾಜಿ ಸಂಸದ ಜನಾರ್ಧನಸ್ವಾಮಿ, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಜಿಲ್ಲಾ ಚುನಾವಣಾ ಸಂಚಾಲಕ ಸಂಪತ್‍ಕುಮಾರ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್‍ಸಿದ್ದಾಪುರ, ಮರ್ಚೆಂಟ್ ಸೌಹಾರ್ಧ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಸ್.ಆರ್.ಲಕ್ಷ್ಮಿಕಾಂತರೆಡ್ಡಿ, ಡಾ.ಸಿದ್ದಾರ್ಥ, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಚುನಾವಣಾ ಪ್ರಭಾರಿ ಗೀತ ಧನಂಜಯ್, ಜಿಲ್ಲಾ ಕಾರ್ಯದರ್ಶಿ ಎ.ರೇಖ, ವೀರಶೈವ ಸಮಾಜದ ಮುಖಂಡ ಕಂಟ್ರಾಕ್ಟರ್ ಜಯಣ್ಣ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಸದಸ್ಯರುಗಳಾದ ಶ್ರೀನಿವಾಸ್, ಹರೀಶ್, ಅನುರಾಧ ರವಿಕುಮಾರ್, ತಾರಕೇಶ್ವರಿ, ವಕ್ತಾರ ನಾಗರಾಜ್ ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ನಗರ ಪ್ರಧಾನ ಕಾರ್ಯದರ್ಶಿಗಳಾದ ವೀರೇಶ್, ಕಿರಣ್ ಇನ್ನು ಅನೇಕರು ಮೆರವಣಿಗೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!