Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಡುಗೆ ಮಾಡುವ ಹೆಣ್ಣುಮಗಳು ಮಂತ್ರಿಯಾಗಲು ಬಿಜೆಪಿಯಲ್ಲಿ ಮಾತ್ರ ಅವಕಾಶ: ಶಶಿಕಲಾ ಜೊಲ್ಲೆ

Facebook
Twitter
Telegram
WhatsApp

ಸಿಂಧಗಿ : ಮನೆಯಲ್ಲಿ ಅಡುಗೆ ಮಾಡುವ ಹೆಣ್ಣು ಮಗಳು ರಾಜ್ಯದ ಮಂತ್ರಿಯಾಗಲು ಬಿಜೆಪಿ ಯಲ್ಲಿ ಮಾತ್ರ ಸಾಧ್ಯ ಎಂದು ಸಚಿವರಾದ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ. ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಕಡಣಿಯಲ್ಲಿ ಮತ ಯಾಚನೆ ವೇಳೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಮಹಿಳೆಯರಿಗೆ ಸಾಕಷ್ಟು ಸ್ವಾಂತಂತ್ರ್ಯ ಇದೆ. ದೇಶದ ಜನಸಂಖ್ಯೆಯ ಅರ್ಧದಷ್ಟು ಮಹಿಳೆಯರಿದ್ದೇವೆ. ಮೊದಲು ತವರು ಮಹಿಳೆಯರು ತವರು ಮನೆಯಲ್ಲಿ ಅಪ್ಪ, ಅಣ್ಣ ಹೇಳಿದಂತೆ ಮದುವೆಯಾದ ಮೇಲೆ ಗಂಡ ಹೇಳಿದಂತೆ ಮತ ಚಲಾಯಿಸುತ್ತ ಬಂದಿದ್ದೇವೆ ಎಂದರು.

ಇನ್ನೂ ನಮ್ಮ ಬೇಡಿಕೆ ಏನು ಎಂದು ಯಾರಿಗೂ ಕೇಳೋಲ್ಲ. ಆದರೆ, ಕೇಂದ್ರದಲ್ಲಿ ನಮ್ಮ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರಿಗೆ ಅಡುಗೆ ಮನೆಯಲ್ಲಿ ಕಟ್ಟಿಗೆಯಿಂದ ಅಡುಗೆ ಮಾಡುವ ತೊಂದರೆ ತಪ್ಪಿಸಲು ಉಜ್ವಲ ಯೋಜನೆ ಜಾರಿಗೆ ತಂದು ದೇಶಾದ್ಯಂತೆ ಸುಮಾರು 8 ಕೋಟಿ ಮನೆಗಳಿಗೆ ಅಡಿಗೆ ಅನಿಲ್ ಗ್ಯಾಸ್ ನೀಡುವ ಮೂಲಕ ಮಹಿಳೆಯರ ಕಣ್ಣೀರು ವರೆಸುವ ಕೆಲಸ ಮಾಡಿದ್ದಾರೆ. ಹೆಣ್ಣು ಮಕ್ಕಳ ರಕ್ಷಣೆಗೆ ಭೇಟಿ ಪಡಾವೊ ಭೇಟಿ ಪಡಾವೊ ಯೋಜನೆ ಜಾರಿಗೆ ತಂದಿದ್ದರೆ ಎಂದು ಹೇಳಿದರು.

ರಾಜ್ಯದ ಯಡಿಯೂರಪ್ಪ ನೇತೃತ್ಬದ ಸರ್ಕಾರ ರಾಜ್ಯದಲ್ಲಿ ಹುಟ್ಟಿದ ಪ್ರತಿಯೊಂದು ಹೆಣ್ಣು ಮಗುವನ್ನು ಭಾಗ್ಯಲಕ್ಷ್ಮಿ ಎಂದು ಕರೆದು ಹುಟ್ಟಿದ ಹೆಣ್ಣು ಮಗುವಿಗೆ ಭಾಗ್ಯಲಕ್ಷ್ಮೀ ಬಾಂಡ್ ನೀಡುವ ಯೋಜನೆ ಜಾರಿಗೆ ತಂದಿದ್ದಾರೆ. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತರ ಮಕ್ಕಳು ಉನ್ನತ ಶಿಕ್ಷಣ ಕಲಿಯಲು ಅನುಕೂಲವಾಗಲೆಂದು ವಿಧ್ಯಾನಿಧಿ ಯೋಜನೆ ಜಾರಿಗೆ ತಂದಿದ್ದಾರೆ.

ರೈತರಿಗೂ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕಿಸಾನ್ ಸಮ್ಮಾನ ಯೋಜನೆ ಮೂಲಕ ಪ್ರತಿಯೊಬ್ಬರ ರೈತರ ಖಾತೆಗಳಿಗೆ ನೇರವಾಗಿ ಹಣ ಬಿಡುತ್ತಾರೆ. ನಮ್ಮ ಮಾಜಿ ಯಡಿಯೂರಪ್ಪ ಅವರು ಅದಕ್ಕೆ 400 ರೂ. ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಸಿಂದಗಿಯಲ್ಲಿ ರಮೇಶ್ ಭೂಸನೂರು ಅವರನ್ನು ಈ ಚುನಾವಣೆಯಲ್ಲಿ ಆಯ್ಕೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶಕ್ತಿ ಬಲಪಡಿಸುವಂತೆ ಸಚಿವರು ಮನವಿ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು.

error: Content is protected !!