ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್ : ಅಡಿಕೆ ಹಾಗೂ ಅಡಿಕೆ ಹಾಳೆ ತಟ್ಟೆಗಳು ಕ್ಯಾನ್ಸರ್‌ಕಾರಕ ಎಂಬ ಅಪಪ್ರಚಾರಕ್ಕೆ ತೆರೆ ಎಳೆಯಲು ಸರ್ಕಾರ ಕೈಗೊಂಡಿರುವ ವೈಜ್ಞಾನಿಕ ಸಂಶೋಧನೆಗಳಿಂದ ಪ್ರಾಥಮಿಕ ಹಂತದಲ್ಲೇ ಮಹತ್ವದ ಮಾಹಿತಿ ಹೊರಬಂದಿದ್ದು, ಅಡಿಕೆ ಬೆಳೆಗಾರರಿಗೆ ನೆಮ್ಮದಿ ದೊರೆತಿದೆ.
ತಂಬಾಕು ಬೆರೆಸದೇ ಅಲ್ಪ ಪ್ರಮಾಣದಲ್ಲಿ ಅಡಿಕೆ ಸೇವಿಸುವುದರಿಂದ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಉಂಟಾಗುವುದಿಲ್ಲ ಎಂಬುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅಡಿಕೆಗೆ ಅಂಟಿಕೊಂಡಿದ್ದ ನಕಾರಾತ್ಮಕ ಭಾವನೆಗಳನ್ನು ದೂರ ಮಾಡುವತ್ತ ಸರ್ಕಾರ ಮುಂದಾಗಿದೆ.
ರಾಜ್ಯ ತೋಟಗಾರಿಕೆ ಇಲಾಖೆ, ಬೆಂಗಳೂರಿನ M. S. Ramaiah Universityಗೆ ವಿಶೇಷ ಅಧ್ಯಯನದ ಜವಾಬ್ದಾರಿ ವಹಿಸಿತ್ತು. ಸುಮಾರು ₹31.80 ಲಕ್ಷ ವೆಚ್ಚದಲ್ಲಿ ಅಡಿಕೆಯಲ್ಲಿನ ಪೈಟೊಕೆಮಿಕಲ್ ಅಂಶಗಳು, ಕೀಟನಾಶಕ ಅವಶೇಷಗಳು ಹಾಗೂ ಆರೋಗ್ಯದ ಮೇಲೆ ಬೀರುವ ಪರಿಣಾಮಗಳ ಕುರಿತು ಸಮಗ್ರ ಅಧ್ಯಯನ ಕೈಗೊಳ್ಳಲಾಗಿದೆ. ಪಾನ್ ಅಥವಾ ಪಾನ್ ಮಸಾಲೆಯಲ್ಲಿ ಅಡಿಕೆಯನ್ನು ಕೇವಲ ಒಂದು ಅಂಶವಾಗಿ, ತಂಬಾಕು ಸೇರಿಸದೇ ಅಲ್ಪ ಪ್ರಮಾಣದಲ್ಲಿ ಸೇವಿಸಿದರೆ ಅದು ಹಾನಿಕಾರಕವಲ್ಲ ಎಂದು ಅಧ್ಯಯನ ವರದಿ ತಿಳಿಸಿದೆ.
ಇನ್ನೊಂದೆಡೆ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ದೇಶದ ಹಲವು ಪ್ರತಿಷ್ಠಿತ ಸಂಸ್ಥೆಗಳು ಭಾಗವಹಿಸಿರುವ ಬೃಹತ್ ಸಂಶೋಧನಾ ಯೋಜನೆ ರೂಪಿಸಲಾಗಿದೆ. AIIMS, CSIR, NIMHANS, CFTRI, Kasturba Medical College ಹಾಗೂ CPCRI ಸೇರಿದಂತೆ ಹಲವು ಸಂಸ್ಥೆಗಳು ಈ ಅಧ್ಯಯನದಲ್ಲಿ ಭಾಗವಹಿಸಿವೆ.
ನರಜೈವಿಕ ಅಧ್ಯಯನಗಳ ಪ್ರಕಾರ, ಅಡಿಕೆ ಸಾರವು ಮಾನವನ ಸ್ಮರಣಾಶಕ್ತಿ ಮತ್ತು ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವ ಸಾಧ್ಯತೆಗಳಿವೆ ಎಂಬುದೂ ಬೆಳಕಿಗೆ ಬಂದಿದೆ. ದಕ್ಷಿಣ ಭಾರತದಲ್ಲಿ ಅಡಿಕೆ ಸೇವನೆ ಮತ್ತು ಬಾಯಿ ಆರೋಗ್ಯದ ನಡುವಿನ ಸಂಬಂಧ ಕುರಿತು 15 ಸಾವಿರಕ್ಕೂ ಹೆಚ್ಚು ಜನರನ್ನು ಒಳಗೊಂಡ ಸಮೀಕ್ಷೆಯೂ ನಡೆಯುತ್ತಿದೆ.
ಅಡಿಕೆ ಕುರಿತು ಅಂತರರಾಷ್ಟ್ರೀಯ ಮಟ್ಟದಲ್ಲಿ ಇರುವ ನಕಾರಾತ್ಮಕ ಧೋರಣೆಯನ್ನು ಬದಲಾಯಿಸಲು ಸರ್ಕಾರ ವ್ಯವಸ್ಥಿತ ಕ್ರಮ ಕೈಗೊಂಡಿದ್ದು, ಮೆಟಾಬೊಲೈಟ್ ಪ್ರೊಫೈಲಿಂಗ್, ಕ್ಲಿನಿಕಲ್ ಎಪಿಡೆಮಿಯಾಲಜಿ, ಕ್ಯಾನ್ಸರ್ ಸಂಬಂಧಿತ ಅಧ್ಯಯನಗಳು ಹಾಗೂ ನರ-ಮಾನಸಿಕ ವಿಶ್ಲೇಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಂಶೋಧನೆ ಮುಂದುವರಿಯುತ್ತಿದೆ.ಈ ಎಲ್ಲಾ ಸಂಸ್ಥೆಗಳ ಅಂತಿಮ ವರದಿ ಸಿದ್ಧವಾದ ನಂತರ, ಅಡಿಕೆ ಹಾನಿಕಾರಕವಲ್ಲ ಎಂಬ ವೈಜ್ಞಾನಿಕ ಸತ್ಯವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡುವುದಾಗಿ ಸರ್ಕಾರ ಭರವಸೆ ನೀಡಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್