ಮಾ.02ರಂದು ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ

ಚಿತ್ರದುರ್ಗ, (ಫೆಬ್ರವರಿ.28) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಿರಿಯೂರು ಸಾರ್ವಜನಿಕ ಆಸ್ಪತ್ರೆ ಹಾಗೂ ಅಭ್ಯುದಯ ಮತ್ತು ಡಿಜಿಟಿ ಸಂಸ್ಥೆಯ ಇವರುಗಳ ಸಂಯುಕ್ತಾಶ್ರಯದಲ್ಲಿ ಪಿಎಸ್‍ಎ ವೈದ್ಯಕೀಯ ಆಕ್ಸಿಜನ್ ಪ್ಲಾಂಟ್-250 ಎಲ್‍ಪಿಎಂ ಉದ್ಘಾಟನಾ ಸಮಾರಂಭವನ್ನು ಮಾರ್ಚ್ 02 ರಂದು ಬೆಳಿಗ್ಗೆ 10.30ಕ್ಕೆ ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಘನ ಉಪಸ್ಥಿತಿವಹಿಸುವರು. ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಉದ್ಘಾಟನೆ ನೆರವೇರಿಸುವರು. ಹಿರಿಯೂರು ಶಾಸಕಿ ಪೂರ್ಣಿಮಾ ಕೆ.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷರು ಹಾಗೂ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ರಾಜ್ಯ ಖನಿಜ ನಿಗಮ ಅಧ್ಯಕ್ಷ ಎಸ್.ಲಿಂಗಮೂರ್ತಿ, ಹಿರಿಯೂರು ನಗರಸಭೆ ಅಧ್ಯಕ್ಷೆ ಶಂಶುನ್ನಿಸಾ, ಉಪಾಧ್ಯಕ್ಷ ಬಿ.ಎನ್.ಪ್ರಕಾಶ್ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಅಖಿಲ ಭಾರತೀಯ ಸೇವಾ ಪ್ರಮುಖ್ ಪರಾಗ್ ಅಭ್ಯಂಕರ್, ಕೇಶವಕೃಪ ಸಂವರ್ಧನ ಸಮಿತಿ ಅಧ್ಯಕ್ಷ ತಿಪ್ಪೇಸ್ವಾಮಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 

suddionenews

Recent Posts

ರತನ್ ಟಾಟಾ ಉಯಿಲ್ ನಲ್ಲಿ ಮೋಹಿನಿಗೆ 500 ಕೋಟಿ : ಹುಡುಕಾಟ ಶುರು..!

ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…

5 minutes ago

ಬಗರ್‍ಹುಕುಂ ಅರ್ಜಿಗಳನ್ನು ಮರು ಪರಿಶೀಲಿಸಿ : ಕುಮಾರ್ ಸಮತಳ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…

11 minutes ago

ಹೈಕೋರ್ಟ್ ತೀರ್ಪು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಭ್ರಮಾಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

15 minutes ago

ದಾವಣಗೆರೆ ವಿಶ್ವವಿದ್ಯಾನಿಲಯ : ಹೊಳಲ್ಕೆರೆ ವಿದ್ಯಾರ್ಥಿನಿ ಗಂಗಮ್ಮ ಪ್ರಥಮ ರ‌್ಯಾಂಕ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

18 minutes ago

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

24 minutes ago

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…

37 minutes ago