Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಪರೇಷನ್ ಸಿಂಧೂರ ; ಹುಬ್ಬಳ್ಳಿ, ಧಾರವಾಡ ಸೇರಿದಂತೆ ಹಲವೆಡೆ ಸಂಭ್ರಮ

---Advertisement---

ಬೆಂಗಳೂರು; ಪೆಹಲ್ಗಾಮ್ ದಾಳಿಯಲ್ಲಿ ಹಿಂದೂಗಳನ್ನ ಗುರಿಯಾಗಿಸಿಕೊಂಡು ಕೊಂದ ಉಗ್ರರ ಹುಟ್ಟಡಗಿಸುವುದಕ್ಕೆ ಪಾಕಿಗಳಿಗೆ ಭಾರತ ಇಂದು ಸರಿಯಾದ ಉತ್ತರವನ್ನೇ ನೀಡಿದೆ. ಮಧ್ಯರಾತ್ರಿಯಿಂದಾನೇ ಪ್ರತಿಕಾರದ ದಾಳಿ ಶುರುವಾಗಿದೆ. ಆಪರೇಷನ್ ಸಿಂಧೂರ ಎಂಬ ಯೋಜನೆ ಮೂಲಕ ಪಾಕಿಸ್ತಾನದ ಮೇಲೆ ನಡೆಸಿದ ದಾಳಿಯಲ್ಲಿ ಪಾಕಿಗಳು ಸತ್ತಿದ್ದಾರೆ. ಈ ಸಂಭ್ರಮವನ್ನ ದೇಶವೇ ಆಚರಿಸುತ್ತಿದೆ. ನಮ್ಮ ಕರ್ನಾಟಕ ರಾಜ್ಯದಲ್ಲೂ ಸಂಭ್ರಮಾಚರಣೆ ಆರಂಭವಾಗಿದೆ.

 

ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬೆಂಗಳೂರು ಸೇರಿದಂತೆ ಎಲ್ಲೆಡೆ ಸಂಭ್ರಮಾಚರಣೆ ಶುರುವಾಗಿದೆ. ಪಟಾಕಿ ಸಿಡಿಸಿ, ಸಿಹಿ ಹಂಚಿಕೊಂಡಿದ್ದಾರೆ. ಕೇಸರಿ ಬಾವುಟಗಳನ್ನ ಹಾರಿಸಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಆಪರೇಷನ್ ಸಿಂಧೂರ್ ಹಾಗೂ ಇಂಡಿಯಾ ಆರ್ಮಿ ಹ್ಯಾಶ್ ಟ್ಯಾಗ್ ಗಳು ಟ್ರೆಂಡಿಂಗ್ ನಲ್ಲಿವೆ. ಈ ಆಪರೇಷನ್ ಸಿಂಧೂರ್ ಬಗ್ಗೆ ರಾಜಕೀಯ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗಾಗಲೇ ಬಿಜೆಪಿಯಿಂದ ಉಚ್ಛಾಟನೆಯಾಗಿದ್ದಾರೆ. ಆದರೆ ಮೋದಿಯವರ ಆಪರೇಷನ್ ಸಿಂಧೂರ್ ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತೀಯ ಸೇನೆ, ನೌಕಾ ಪಡೆ ಹಾಗೂ ವಾಯು ಪಡೆ ಉಗ್ರರ ನೆಲೆಯ ಮೇಲೆ ದಾಳಿ ಮಾಡಿ ಉಗ್ರರ ನೆಲೆಯ ಮೇಲೆ ದಾಳಿ ಮಾಡಿ ಪೆಹಲ್ಗಾಮ್ ನಲ್ಲಿ ನಡೆದ ಅಮಾಯಕ ಪ್ರವಾಸಿಗರ ಹತ್ಯೆಯ ಪ್ರತೀಕಾರ ತೆಗೆದುಕೊಂಡಿದ್ದಾರೆ. ಇದು ಪ್ರಾರಂಭವಷ್ಟೇ, ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ. ಸಮಸ್ತ ಭಾರತೀಯರ ಪರವಾಗಿ ಈ ದಾಳಿಯನ್ನ ಸ್ವಾಗತಿಸುತ್ತೇನೆ. ಸೇನೆ ಮತ್ತು ಸರ್ಕಾರದ ಜೊತೆಗೆ ನಾವೆಲ್ಲರೂ ನಿಲ್ಲೋಣಾ ಎಂದು ಇಂದಿನ ಆಪರೇಷನ್ ಸಿಂಧೂರ್ ಬಗ್ಗೆ ಮಾತನಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...