Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ಲಂ ಸಮಸ್ಯೆಗಳ ಪರಿಹಾರಕ್ಕೆ ಸಂಘಟಿತ ಹೋರಾಟ ಅಗತ್ಯ: ಸರ್ಕಾರದ ವಿರುದ್ಧ ಆಕ್ರೋಶ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28  : ಸ್ಲಂ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಸಂಘಟಿತರಾಗಿ ಹೋರಾಡಿದಾಗ ಮಾತ್ರ ಬದುಕು ಸುಧಾರಣೆಯಾಗಲಿದೆ ಎಂದು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ಕರೆ ನೀಡಿದರು.

ಸ್ಲಂ ಜನಾಂದೋಲನ ಕರ್ನಾಟಕ, ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯಿಂದ ಪ್ರವಾಸಿ ಮಂದಿರದಲ್ಲಿ ನಡೆದ ಸಮಾಲೋಚನಾ ಸಭೆ ಉದ್ಘಾಟಿಸಿ ಮಾತನಾಡಿದರು.
ಚಿತ್ರದುರ್ಗದ 12 ಆಯ್ದ ಸ್ಲಂಗಳಲ್ಲಿ 1580 ಕುಟುಂಬಗಳ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಿದ್ದು, ಇನ್ನು ಒಂದು ವರ್ಷದಲ್ಲಿ ಕನಿಷ್ಟ ಹತ್ತು ಸ್ಲಂಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದೆಂದರು.
ಸಾಮಾಜಿಕ ವ್ಯವಸ್ಥೆಯಲ್ಲಿ ಸ್ಲಂ ಜನರ ಸಮಸ್ಯೆಗಳನ್ನು ಸಮಾಜದ ಕಳಂಕವೆನ್ನುವಂತೆ ಬಿಂಬಿಸಲಾಗುತ್ತಿದೆ. ಕಳೆದ ಹದಿನೈದು ವರ್ಷಗಳಲ್ಲಿ ರಾಜ್ಯದ 20 ಜಿಲ್ಲೆಗಳಲ್ಲಿ ಸ್ಲಂ ಜನರ ಸಂವಿಧಾನಬದ್ದ ಹಕ್ಕುಗಳ ಖಾತ್ರಿಗಾಗಿ ಕೆಲಸ ಮಾಡುತ್ತ ಸರ್ಕಾರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಮಾಡಿದೆ. ಇನ್ನು ಮುಂದೆ ಸಮುದಾಯದ ಸಮಸ್ಯೆಗಳ ಜೊತೆ ವೈಯಕ್ತಿಕ ಸಮಸ್ಯೆಗಳತ್ತ ಗಮನ ಹರಿಸಲಿದೆ ಎಂದು ಹೇಳಿದರು.
2023 ರ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಭರವಸೆಗಳನ್ನು ಈಡೇರಿಸಿಲ್ಲ. ಉಚಿತ ಗ್ಯಾರೆಂಟಿಗಳ ಮೂಲಕ ಯಾಮಾರಿಸುತ್ತಿದೆ. ಸಮಸ್ಯೆಗಳಿಂದ ಹೊರ ಬರಬೇಕಾದರೆ ಮೊದಲು ಸಂಘಟಿತರಾಗುವಂತೆ ಸ್ಲಂ ನಿವಾಸಿಗಳನ್ನು ಎಚ್ಚರಿಸಿದರು.
ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಕೆ.ರಾಜಣ್ಣ, ಜಿಲ್ಲಾ ಸಂಚಾಲಕಿ ಸುಧಾ ಡಿ. ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆಯ ಅಧ್ಯಕ್ಷರು, ಉಪಾಧ್ಯಕ್ಷರು
ಸಮಿತಿ ಸದಸ್ಯರುಗಳು ಸಭೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...