Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅಹಿತಕರ ಘಟನೆ ನಡೆದ್ರೆ ನಮ್ಮ ಇಲಾಖೆ ಜವಬ್ದಾರಿಯಲ್ಲ : ಹಾಸನ ಡಿಸಿಗೆ ಪತ್ರ ಬರೆದ ಎಸ್ಪಿ

---Advertisement---

ಹಾಸನ: ಹಾಸನಾಂಬೆಯನ್ನು ನೋಡಲು ಇಷ್ಟು ದಿನ ಬಂದ ಜನವೇ ಬೇರೆ ಇನ್ಮೇಲೆ ಬರುವ ಜನರೇ ಬೇರೆ‌. ಯಾಕಂದ್ರೆ ಮೂರು ದಿನಗಳ ಕಾಲ ದೀಪಾವಳಿ ರಜೆ ಇದೆ. ಹೀಗಾಗಿ ದೇವಸ್ಥಾನಕ್ಕೆ ಹೋಗುವವರ ಸಂಖ್ಯೆ ಜಾಸ್ತಿಯಾಗುತ್ತೆ. ಹೀಗಾಗಿ ಸರಿಯಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಲತಾ ಕುನಾರಿಗೆ, ಎಸ್ಪಿ ಮೊಹಮ್ಮದ್ ಸುಜೀತಾ ಪತ್ರ ಬರೆದಿದ್ದಾರೆ.

ರಾಜ್ಯ, ಹೊರ ರಾಜ್ಯಗಳಿಂದ ಭಕ್ತರು ಹಾಸನಾಂಬೆ ದರ್ಶನಕ್ಕೆ ಬರುತ್ತಿದ್ದಾರೆ. ರಸ್ತೆಯವರೆಗೂ ಭಕ್ತರ ಸರತಿ ಸಾಲು ಬಂದು ನಿಂತಿದೆ. ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಸ್ಥಳವಕಾಶ ಕಡಿಮೆ ಇದೆ. ದೀಪಾವಳಿ ಹಬ್ಬದ ರಜೆ ಇರುವ ಹಿನ್ನೆಲೆ ಭಕ್ತರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ. ಹೆಚ್ಚಿನ ಸಂಖ್ಯೆಯ ಭಕ್ತರು ಬಂದು ನೂಕು ನುಗ್ಗಲು ಉಂಟಾಗಿ ಅಹಿತಕರ ಘಟನೆ ಸಂಭವಿಸಬಹುದು. ಭಕ್ತರನ್ನು ನಿಯಂತ್ರಿಸಲು ಕ್ರಮ ವಹಿಸದೇ ಇದ್ದಲ್ಲಿ ಅಹಿತಕರ ಘಟನೆ ಸಂಭವಿಸಿದರೆ ಪೊಲೀಸ್ ಇಲಾಖೆ ಜವಾಬ್ದಾರಿಯಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇಂದು ಹಾಸನಾಂಬೆಯ ದರ್ಶನ ಪಡೆಯಲು ಸಾವಿರಾರು ಮಂದಿ ಬಂದಿದ್ದಾರಡ. ಈ ಬಾರಿ ವಿಐಪಿ, ವಿವಿಐಪಿ ಪದ್ಧತಿಯನ್ನ ಕೈಬಿಡಲಾಗಿದೆ. ಬದಲಿಗೆ ಸಾವಿರ ರೂಪಾಯಿಯ ಕ್ಯೂ ಇದೆ. ಅದರಲ್ಲಿಯೇ ಸಾಕಷ್ಟು ಜನ ಹೋಗ್ತಾ ಇದಾರೆ. ಅದರಲ್ಲೂ ರಜೆ ಇರುವ ಕಾರಣ ಸಂಖ್ಯೆ ಹೆಚ್ಚಾಗಿದೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕೊಡುವ ಹಾಸನಾಂಬೆ ತಾಯಿಯನ್ನು ನೋಡಲು ಬೇರೆ ಬೇರೆ ರಾಜ್ಯದಿಂದಾನೂ ಜನ ಬರ್ತಾರೆ. ಹಾಸನಾಂಬೆಯ ಸನ್ನಿಧಾನದಲ್ಲಿ ಹಬ್ಬದ ವಾತಾವರಣವೇ ಮನೆ ಮಾಡಿದೆ. ಪೊಲೀಸರು ಕೂಡ ಇಷ್ಟು ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿದ್ದಾರೆ. ಆದರೆ ಇನ್ಮೇಲೆ ಇನ್ನಷ್ಟು ಸೌಲಭ್ಯ ಬೇಕಾಗಿರುವ ಕಾರಣ ಪತ್ರ ಬರೆದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now