ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಸದ್ಯ ಗ್ಯಾರಂಟಿಗಳ ಘೋಷಣೆಯಾಗಿದೆ. ತಾವೂ ಕೊಟ್ಟ ಮಾತಿನಂತೆ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ. ಅದರಲ್ಲಿ ವಿದ್ಯುತ್ ಉಚಿತ ಕೂಡ ಒಂದು ಯೋಜನೆ. ಆದರೆ ಇದ್ದಕ್ಕಿದ್ದ ಹಾಗೇ ವಿದ್ಯುತ್ ದರ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಇದು ಜನಾಕ್ರೋಶಕ್ಕೆ ಕಾರಣವಾಗಿದೆ. ಇದೀಗ ಈ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಇದ್ದಕ್ಕಿದ್ದ ಹಾಗೇ ವಿದ್ಯುತ್ ದರ ಏರಿಕೆಯಾಗಿದೆ. ಆದರೆ ಬಿಜೆಪಿ ಪಕ್ಷ ಈ ವಿದ್ಯುತ್ ದರವನ್ನು ಏರಿಕೆ ಮಾಡಿಲ್ಲ. ನಮ್ಮ ಸರ್ಕಾರವಿದ್ದಾಗ ಏರಿಕೆಯಾಗಿರುವುದಲ್ಲ ಇದು. ವಿದ್ಯುತ್ ದರ ಏರಿಕೆಯ ವರದಿಯನ್ನು ನಮ್ಮ ಸರ್ಕಾರ ಒಪ್ಪಿರಲಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ವಿದ್ಯುತ್ ದರ ಏರಿಕೆಯ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದೆ. ಇದರಿಂದಾಗಿಯೇ ದರ ಜಾಸ್ತಿಯಾಗಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಹತ್ತಿರ ಒಂದು ತಿಂಗಳಾಗಿದೆ. ಕಾಂಗ್ರೆಸ್ ಸರ್ಕಾರ ಜವಬ್ದಾರಿ ಇಲ್ಲದ ಸರ್ಕಾರ
ರಾಜ್ಯದಲ್ಲಿ ಮುಂಗಾರು ಮಳೆ ತಡವಾಗಿದೆ. ಮೋಡ ಬಿತ್ತನೆಯೂ ತಡವಾಗುತ್ತಿದೆ. ಮಾನ್ಸೂನ್ ಮಳೆ ಸರಿಯಾದ ಸಮಯಕ್ಕೆ ಬಾರದೆ ಇದ್ದಲ್ಲಿ ರೈತರಿಗೆ ಮಷ್ಟವಾಗುತ್ತದೆ ಎಂದಿದ್ದಾರೆ.