Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮ ಸರ್ಕಾರ ಜನಪರವಾದ ಕಾರ್ಯವನ್ನು ಮಾಡುತ್ತಿದೆ : ಕೃಷಿ ಸಚಿವ ಚಲುವರಾಯಸ್ವಾಮಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ, (ಆ.29) :  ಕಾಂಗ್ರೆಸ್ ಪಕ್ಷ ಚುನಾವಣಾ ಸಮಯದಲ್ಲಿ ನೀಡಿದಂತಹ ಐದು ಗ್ಯಾರೆಂಟಿಗಳಲ್ಲಿ ಈಗಾಗಲೇ ಮೂರು ಗ್ಯಾರೆಂಟಿಗಳನ್ನು ಪೂರ್ಣ ಮಾಡಿದ್ದು ಅ. 30 ರಂದು ಗೃಹ ಲಕ್ಷ್ಮೀ ನೀಡಲಿದ್ದು ಡಿಸೆಂಬರ್ ಅಥವಾ ಜನವರಿ ವೇಳೆಗೆ ಉಳಿದ ಒಂದು ಗ್ಯಾರೆಂಟಿಯಾದ ಯುವನಿಧಿ ಗ್ಯಾರೆಂಟಿಯನ್ನು ನೀಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ನಗರಕ್ಕೆ ಭೇಟಿ ನೀಡಿದ ಅವರು ಕಾಂಗ್ರೆಸ್ ಕಚೇರಿಗೆ ಬೇಟಿ ನೀಡಿ ನೆರದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಈಗಾಗಲೇ ಗೃಹ ಶಕ್ತಿ, ಅನ್ನಬಾಗ್ಯ ಯೋಜನೆ, ಗೃಹ ಜ್ಯೋತಿ ಗ್ಯಾರೆಂಟಿ ಯೋಜನೆ ಜಾರಿಯಾಗಿದೆ. ಆಗಸ್ಟ್ 30 ರಂದು ರಾಜ್ಯದ 1.10 ಕೋಟಿ ಜನರ ಆಗಸ್ಟ್ ತಿಂಗಳ ಖಾತೆಗಳಿಗೆ ಗೃಹಲಕ್ಷ್ಮೀ ಯೋಜನೆಯಡಿ ಹಣವನ್ನು ಹಾಕಲಾಗುವುದು ಕೆಲವರಿಗೆ ನಾಳೆಯ ಬರಲಿದೆ. ಮತ್ತೇ ಕೆಲವರಿಗೆ ನಾಡುದ್ದು ಬರುತ್ತದೆ. ಇದರ ಬಗ್ಗೆ ಆತಂಕ ಪಡುವುದು ಬೇಡ ಇದರ ಬಗ್ಗೆ ಸರಿಯಾದ ರೀತಿಯಲ್ಲಿ ಜನರಿಗೆ ಮಾಹಿತಿಯನ್ನು ನೀಡುವಂತೆ ತಿಳಿಸಿದರು.

ಇದ್ದಲ್ಲದೆ 5 ಲಕ್ಷದವರಗೂ ಬಡ್ಡಿರಹಿತ ಸಾಲ 15 ಲಕ್ಷವರೆಗೂ ರೂ.3ರಂತೆ ಬಡ್ಡಿಯೊಂದಿಗೆ ಸಾಲವನ್ನು ನೀಡುವ ಯೋಜನೆಗೆ ಸರ್ಕಾರ ಶೀಘ್ರವಾಗಿ ಚಾಲನೆ ನೀಡಲಿದೆ. ಕಳೆದ 5 ವರ್ಷ ಬಿಜೆಪಿಯವರು ಆಡಳಿತ ಮಾಡಿದ ಅದಕ್ಕೆ ತದ್ವವಿರುದ್ದವಾಗಿ ನಮ್ಮ ಸರ್ಕಾರ ಆಡಳಿತವನ್ನು ಮಾಡುವುದರ ಮೂಲಕ ಜನಪರವಾದ ಕಾರ್ಯವನ್ನು ಮಾಡುತ್ತಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲಿಕ್ಕೆ ಪಕ್ಷದ ಕಾರ್ಯಕರ್ತರು ಕಾರಣರಾಗಿದ್ದಾರೆ. ಮತದಾರರಿಗೆ ಪೂರಕವಾಗಿ ಕೆಲಸ ಮಾಡುವ ಜವಾಬ್ದಾರಿ ಇದೆ ಮಾಡುತ್ತೇವೆ. ಚಿತ್ರದುರ್ಗ ಜಿಲ್ಲೆಯಲ್ಲಿ ಎಲ್ಲಾ ಶಾಸಕರು ಮಂತ್ರಿಗಳು ಒಟ್ಟಾಗಿ ಸರ್ಕಾರದ ಕಾರ್ಯಕ್ರಮಗಳ ಜೊತೆಗೆ ಪಕ್ಷದ ಸಂಘಟನೆಯನ್ನು ಮಾಡುತ್ತಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸದಿಂದ ನೋಡುತ್ತಿದ್ದಾರೆ ಎಂದರು.

ಮುಂಬರುವ ಸ್ಥಳೀಯ ಮತ್ತು ಲೋಕಸಭಾ ಚುನಾವಣೆಯಲ್ಲಿ ಇದೇ ರೀತಿಯಲ್ಲಿ ಫಲಿತಾಂಶವನ್ನು ತರುವ ಕಾರ್ಯವನ್ನು ಮಾಡಬೇಕಿದೆ. ಜಿಲ್ಲೆಯ ಕೆಲವೆಡೆ ಬೇಟಿ ಮಾಡುವುದರ ಮೂಲಕ ಜಿಲ್ಲೆಯಲ್ಲಿ ಕೃಷಿಯ ವಿಷಯವನ್ನು ತಿಳಿಯಲಾಗುವುದು, ತದ ನಂತರ ಜಿ.ಪಂ.ಸಭಾಂಗಣದಲ್ಲಿ ಸಚಿವರು ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸುವುದರ ಮೂಲಕ ಜಿಲ್ಲೆಯ ಕೃಷಿಯ ಬಗ್ಗೆ ತೆಗೆದುಕೊಳ್ಳುವ ತೀರ್ಮಾನವನ್ನು ಮಾಡಲಾಗುವುದು.

ರಾಜ್ಯದಲ್ಲಿ ಹಾವೇರಿ ಮತ್ತು ಚಿತ್ರದುರ್ಗದಲ್ಲಿ ಹೆಚ್ಚು ಬಿತ್ತನೆಯಾಗಿದೆ ಆದರೂ ಸಹಾ ಸಕಾಲಕ್ಕೆ ಮಳೆ ಬಾರದ ಹಿನ್ನಲೆಯಲ್ಲಿ ಬೆಳೆ ಕೈಸೇರುವ ಲಕ್ಷಣಗಳು ಕಾಣುತ್ತಿಲ್ಲ ಈ ಹಿನ್ನಲೆಯಲ್ಲಿ ಇದರ ಬಗ್ಗೆ ಶೀಘ್ರವಾಗಿ ತಿರ್ಮಾನ ಮಾಡಲಾಗುವುದು ಜಿಲ್ಲೆಯಲ್ಲಿ 82 ಸಾವಿರ ಜನ ವಿಮೆಯನ್ನು ಮಾಡಿಸಿದ್ದಾರೆ.

ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿಯ ಬಗ್ಗೆ ವರದಿಯನ್ನು ತರಿಸಿಕೊಂಡು ತದ ನಂತರ ಬರದ ಬಗ್ಗೆ ತಿಳಿಸಲಾಗುವುದು ಎಂದು ಚಲುವರಾಯಸ್ವಾಮಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ./ಸುಧಾಕರ್, ಶಾಸಕರಾದ ರಘುಮೂರ್ತಿ, ಕೆ.ಸಿ.ವೀರೇಂದ್ರ, ಜಿಲ್ಲಾ ಡಿಸಿಸಿ ಅಧ್ಯಕ್ಷರಾದ ತಾಜ್‍ಪೀರ್, ಸಂಪತ್ ಕುಮಾರ್, ಮೈಲಾರಪ್ಪ, ನರಸಿಂಹಮೂರ್ತಿ, ವೆಂಟಕೇಶ್, ಲಕ್ಷಂಕಾಂತ್, ಮುದಾಸಿರ್ ನವಾಜ್, ಕೃಷ್ಣಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!