Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

5 ವರ್ಷ ನಮ್ಮ ಸರ್ಕಾರ ಸುಭದ್ರವಾಗಿರುತ್ತದೆ : ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

---Advertisement---

ಚಿತ್ರದುರ್ಗ : ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಪಕ್ಷ ಸರ್ಕಾರ ನಡೆಸುತ್ತಿದೆ. 135 ಸೀಟುಗಳ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಆಗಾಗ ಕಾಂಗ್ರೆಸ್ ನಲ್ಲಿ ಭಿನ್ನಮತ, ಸಿಎಂ ಖುರ್ಚಿಗೆ ಕಂಟಕ ಎಂಬ ವಿಚಾರಗಳು ಸದ್ದು ಮಾಡುತ್ತಿರುತ್ತವೆ. ಆ ಬಗ್ಗೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಒಗ್ಗಟಾಗಿದೆ, ಸುಭದ್ರವಾಗಿದೆ ನಾವು 5 ವರ್ಷ ಸುಭದ್ರವಾಗಿ ಆಡಳಿತ ನಡೆಸುತ್ತೇವೆ ಎಂದಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2028ಕ್ಕೆ ಮತ್ತೆ ನಾವು ಅಧಿಕಾರಕ್ಕೆ ಬರುತ್ತಿವೆ. ಬಿಜೆಪಿಯಲ್ಲಿ ಮೂರು ಗುಂಪುಗಳಿವೆ. ಆದರೆ ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಬಿಜೆಪಿಯಲ್ಲಿ ವರ್ಟಿಕಲ್ ಡಿವಿಜನ್ ಇದೆ. ಕಚ್ಚಾಡುತ್ತಾರೆ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

 

ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯ ಕರ್ನಾಟಕ ಮೊದಲ ಜಲಾಶಯ ಇದಾಗಿದ್ದು,115 ವರ್ಷ ಇತಿಹಾಸ ಇದೆ. ಈ ಅಣೆಕಟ್ಟು ಇತಿಹಾಸದಲ್ಲೇ ಮೂರನೇ ಬಾರಿಗೆ ಕೋಡಿ ಬಿದ್ದಿದ್ದೆ. ಒಳ್ಳೆಯ ಮಳೆ ಆದ್ರೆ ಜಲಾಶಯ ತುಂಬತ್ತೆ, ಒಳ್ಳೆಯ ಬೆಳೆ ಬರುತ್ತೆ. ಈ ಭಾಗದ ರೈತರಿಗೆ ನೀರಿನ ಅನುಕೂಲವಾಗುವ ನಿಟ್ಟಿನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ತಾಯಿ ಕೆಂಪನಂಜಮ್ಮಣ್ಣಿ ಅವರು ವೇದಾವತಿ ನದಿಗೆ ಅಡ್ಡಲಾಗಿ ವಿವಿ ಸಾಗರ ಡ್ಯಾಂ ಕಟ್ಟಿಸಿದ್ದಾರೆ. ತನ್ನ ಒಡೆವೆಗಳನ್ನು ಮಾರಿ ಸುಮಾರು 45 ಲಕ್ಷ ರೂಪಾಯಿ ವೆಚ್ಚದಲ್ಲಿ ಜಲಾಶಯ ಕಾಮಗಾರಿ ಪ್ರಾರಂಭಿಸಿ (1898) 1907 ರಲ್ಲಿ ಕಾಮಗಾರಿ ಪೂರ್ಣಗೊಳಿಸಿದರು. ಸುಮಾರು 30 ಟಿಎಂಸಿ ಸಾಮರ್ಥ್ಯ ಹೊಂದಿದ್ದು, 30 ಸಾವಿರ ಎಕರೆ ಪ್ರದೇಶಕ್ಕೆ ನೀರೊದಗಿಸುತ್ತದೆ. ಈ ಜಲಾಶಯದ ಭಾಗದಲ್ಲಿ ಉತ್ತಮ ಮಳೆ ಬೆಳೆ ಆಗಿ ಪ್ರತೀ ವರ್ಷ ಕೋಡಿ ಬೀಳುವಂತೆ ನೀರು ಬರಲಿ ಅಂತಾ ದೇವರಲ್ಲಿ ಪ್ರಾರ್ಥನೆ ಮಾಡಲಾಗುತ್ತದೆ. ಹಾಗಾಗಿ ಇಂದು ನಾನು‌ಮತ್ತು ಡಿಕೆಶಿ ಗಂಗಾ ಪೂಜೆ ನೆರವೇರಿಸಿ, ಬಾಗಿನ ಅರ್ಪಿಸಲಾಯಿತು. ಪ್ರತೀ ವರ್ಷ ಅಣೆಕಟ್ಟು ತುಂಬಿ, ರೈತರಿಗೆ ಅನುಕೂಲ ಆಗ್ಲಿ ಅಂತಾ ಪ್ರಾರ್ಥಿಸುತ್ತೇನೆ ಎಂದರು.

ಅಪ್ಪರ್ ಭದ್ರಾ ಯೋಜನೆಗೆ ಕೇಂದ್ರ ಸರ್ಕಾರದಿಂದ ನಿರ್ಮಲಾ ಸೀತಾರಾಮನ್ 5300 ಕೋಟಿ ಘೋಷಣೆ ಮಾಡಿದ್ದರು. ಬಸವರಾಜ ಮೊಮ್ಮಾಯಿ ರಾಷ್ಟ್ರೀಯ ಯೋಜನೆ‌ ಮಾಡ್ತೀನಿ ಅಂದರು. ನಾವು ಅನೇಕ ಬಾರಿ ಸಭೆ ನಡೆಸಿ, ಪ್ರಧಾನಿಗಳನ್ನು ಭೇಟಿ ಮಾಡಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು ಅನುದಾನ ಬಿಡುಗಡೆ ಮಾಡಲಿಲ್ಲ. ಈಗ ಹಿರಿಯ ನಾಯಕರ ಭೇಟಿ ಮಾಡ್ಬೇಕು ಅಂತಾರೆ. ನೀವೇ ಒಪ್ಪಿಕೊಂಡಂತೆ ಕೇಂದ್ರದಿಂದ 5300 ಕೋಟಿ ಕೊಡಿ, ಈಗಲೂ‌ ನಾವು ಪತ್ರ ಬರೀತಿದಿನಿ, ಕೇಂದ್ರದ ಮೇಲೆ ಒತ್ತಾಯ ಹಾಕ್ತಿದೀನಿ. ಭದ್ರಾ ಕಾಮಗಾರಿ ಯಾವ ಪ್ರಮಾಣದಲ್ಲಿ ಆಗಬೇಕಿತ್ತು ಆಗಿಲ್ಲ. ಈ ವರ್ಷವೇ ರಾಜ್ಯದಿಂದ 800 ಕೋಟಿ ಹಣ ಬಿಡುಗಡೆ ಮಾಡುತ್ತವೆ. ಈಗಲಾದರೂ ಕೇಂದ್ರ ಬಜೆಟ್ ನಲ್ಲಿ ಆ ಹಣ ಬಿಡುಗಡೆ ಮಾಡ್ಲಿ ಅಂತಾ ಒತ್ತಾಯ ಮಾಡ್ತೀನಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment