ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಜನವರಿ.19): ಜಿಲ್ಲೆಯ ಗ್ರಾಮೀಣ ಭಾಗದ ಜನರ ಆರೋಗ್ಯದ ಬಗ್ಗೆ ಕಾಳಜಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ಮುಂದಾಗಿದ್ದಾರೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸ್ವಚ್ಛ ಭಾರತ್ ಮಿಷನ್ ಮತ್ತು ಜಲ ಜೀವನ್ ಮಿಷನ್ ಯೋಜನೆಗಳಡಿ ಈಗ ನಮ್ಮ ಗ್ರಾಮ ಸ್ವಚ್ಛ ಗ್ರಾಮ-ಗ್ರಾಮದ ನಡೆ ಸ್ವಚ್ಛತೆ ಕಡೆ ಎನ್ನುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಪ್ರತಿ ಶನಿವಾರ ಹಮ್ಮಿಕೊಳ್ಳಲಾಗುತ್ತಿದೆ.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಜಾನುವಾರು ತೊಟ್ಟಿಗಳು, ಶುದ್ಧ ಕುಡಿಯುವ ನೀರಿನ ಘಟಕಗಳು, ಮಿನಿ ಟ್ಯಾಂಕ್‍ಗಳು, ಓವರ್ ಹೆಡ್ ಟ್ಯಾಂಕ್‍ಗಳ ಹತ್ತಿರ ಸ್ವಚ್ಛಗೊಳಿಸುವ ಸ್ವಚ್ಛತಾ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದ್ದು, ಗ್ರಾಮದ ಜನತೆಗೆ ಶುದ್ಧ ನೀರು ಸೇವನೆಯಿಂದ ಮತ್ತು ಉತ್ತಮ ಆರೋಗ್ಯ ಪಡೆಯಲು, ಸ್ವಚ್ಛತೆಯಿಂದ ರೋಗ-ರುಜಿನಿ ತಡೆಗಟ್ಟಲು ಸಹಕರಿಯಾಗಲಿದೆ.
ಗ್ರಾಮಗಳಲ್ಲಿ ನೀರು ಮತ್ತು ನೈರ್ಮಲ್ಯದ ಮಹತ್ವದ ಕುರಿತು ಜನರಲ್ಲಿ ವ್ಯಾಪಕವಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ನೀರು ಮತ್ತು ನೈರ್ಮಲ್ಯದ ಬಗ್ಗೆ ಪ್ರತಿಯೊಬ್ಬ ನಾಗರಿಕರು ಆರೋಗ್ಯಕರ ಗೌರವಯುತ ಜೀವನ ನಡೆಸಲು ಸ್ವಚ್ಛ ಪರಿಸರ, ಶುದ್ಧ ನೀರು, ಶುದ್ಧ ಗಾಳಿ, ಶುದ್ಧ ಆಹಾರ ಹಾಗೂ ಉತ್ತಮ ನೀರು ಮತ್ತು ನೈರ್ಮಲ್ಯ ಅಭ್ಯಾಸಗಳು ಪರಿಸರ ಅತ್ಯವಶ್ಯಕವಾಗಿದೆ. ಹೀಗಾಗಿ ನೀರು ಮತ್ತು ನೈರ್ಮಲ್ಯ ಎನ್ನುವುದು ಕೇವಲ ಒಂದು ದಿನದ ಕೆಲಸವಲ್ಲ.
ಅದೊಂದು ನಿರಂತರ ಪ್ರಕ್ರಿಯೆ ಹಾಗೂ ಸಾಮಾಜಿಕ ಸಹಭಾಗಿತ್ವದ ಆಂದೋಲನವಾಗಬೇಕಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಸ್.ದಿವಾಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.