Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಗತ್ತಿನ ಅತ್ಯಂತ ಉತ್ಕೃಷ್ಟ ಸಂವಿಧಾನ ನಮ್ಮದು: ನ್ಯಾಯಾಧೀಶ ಶಮೀರ್ ಪಿ. ನಂದ್ಯಾಲ್

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್.26 : ಜಗತ್ತಿನಲ್ಲಿಯ ಅತ್ಯಂತ ಉತ್ಕøಷ್ಟವಾದ ಸಂವಿಧಾನ ನಮ್ಮದು. ಹಾಗಾಗಿ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‍ಗೆ ಪ್ರತಿಯೊಬ್ಬರು ಗೌರವಸಲ್ಲಿಸಬೇಕಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಮೀರ್ ಪಿ. ನಂದ್ಯಾಲ್ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಜಟ್‍ಪಟ್ ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಸಂವಿಧಾನ ದಿನಾಚರಣೆ ಮತ್ತು ಸುರಕ್ಷಿತ ಬಾಲ್ಯ ಅಭಿಯಾನ ಉದ್ಘಾಟಿಸಿ ಮಾತನಾಡಿದರು.
ನವೆಂಬರ್-26-1949 ರಂದು ಸಂವಿಧಾನ ಅಂಗೀಕಾರವಾದ ದಿನ. 6 ರಿಂದ 14 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಸಂವಿಧಾನದ ಪ್ರಕಾರ ಕಡ್ಡಾಯವಾಗಿ ಶಿಕ್ಷಣ ಸಿಗಬೇಕು. ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಯಾರಾದರೂ ಲೈಂಗಿಕ ಕಿರುಕುಳ ನೀಡಿದರೆ ಹೆದರಬೇಡಿ ಗುರು ಹಿರಿಯರು ಪೋಷಕರುಗಳ ಬಳಿ ತಿಳಿಸಿ ರಕ್ಷಣೆ ಪಡೆದುಕೊಳ್ಳಿ ಎಂದು ಮಕ್ಕಳಲ್ಲಿ ಮನವಿ ಮಾಡಿದರು.

ಚಳ್ಳಕೆರೆ,ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಬಾಲ್ಯವಿವಾಹ ಹೆಚ್ಚಾಗಿರುವುದು ಗಮನಕ್ಕೆ ಬಂದಿದೆ. ಎಲ್ಲಿಯಾದರೂ ಬಾಲ್ಯ ವಿವಾಹಗಳು ಕಂಡು ಬಂದಲ್ಲಿ ಹೆಲ್ಪ್‍ಲೈನ್ 1098ಕ್ಕೆ ಮಾಹಿತಿ ನೀಡಿ ಮಕ್ಕಳ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರಲ್ಲಿ ಅರಿವು ಇರಬೇಕು. ಖಾಸಗಿ ಶಾಲೆಗಳಲ್ಲಿ ಸಿಗದಂತಹ ಸೌಲಭ್ಯ ಸರ್ಕಾರಿ ಶಾಲೆ ಮಕ್ಕಳಿಗೆ ಇಲ್ಲದಿರಬಹುದು. ಇರುವ ಮೂಲಭೂತ ಸೌಕರ್ಯವನ್ನು ಬಳಸಿಕೊಂಡು ಶಿಕ್ಷಣವಂತರಾಗಿ ಸರ್ಕಾರಿ ಶಾಲೆಗಳಲ್ಲಿ ಓದಿದವರು ಉನ್ನತ ಅಧಿಕಾರಿಗಳಾಗಿದ್ದಾರೆ ಎಂದು ಹೇಳಿದರು.

ಮೊಬೈಲ್‍ನಲ್ಲಿ ಒಳ್ಳೆಯದು ಕೆಟ್ಟದ್ದು ಎರಡೂ ಇರುತ್ತದೆ. ಒಳ್ಳೆಯದಕ್ಕೆ ಮಾತ್ರ ಮೊಬೈಲ್‍ನ್ನು ಬಳಸಿಕೊಳ್ಳಿ ಇಬ್ಬರು ಡೆಸಿಗ್ನೇಟೆಡ್ ಶಿಕ್ಷಕರಿಗೆ ತರಬೇತಿ ನೀಡುತ್ತೇವೆ ಅವರ ಬಳಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಿ. ಪೋಕ್ಸೋ ಕಾಯ್ದೆ ಇರುವುದೇ ಮಕ್ಕಳ ರಕ್ಷಣೆಗಾಗಿ ಎಂದು ತಿಳಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್‍ಕುಮಾರ್ ಮಾತನಾಡಿ, 2015 ರಿಂದಲೂ ಸಂವಿಧಾನ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಹೆಣ್ಣು ಮಕ್ಕಳು ಸಮಾಜಕ್ಕೆ, ಕುಟುಂಬಕ್ಕೆ ದೊಡ್ಡ ಆಸ್ತಿ ಇದ್ದಂತೆ. ಡಾ.ಬಿ.ಆರ್. ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಸರ್ವರಿಗೂ ಸಮಾನತೆಯನ್ನು ನೀಡಿದ್ದಾರೆ. ಎಲ್ಲಾ ರಂಗಗಳಲ್ಲಿಯೂ ಭಾರತ ವೇಗವಾಗಿ ಬೆಳೆಯುತ್ತಿದೆ. ಪೋಕ್ಸೋ ಕಾಯ್ದೆ ಬಗ್ಗೆ ಹೆಣ್ಣು ಮಕ್ಕಳಲ್ಲಿ ತಿಳುವಳಿಕೆ ಮೂಡಿಸಿ ಸಂವಿಧಾನದ ಆಶಯಗಳನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ.ಎಮ್. ವೀಣಾ ಮಾತನಾಡಿ, ಕಾನೂನು ದೃಷ್ಟಿಯಲ್ಲಿ ಎಲ್ಲರೂ ಸಮಾನರೇ. ಕಾನೂನು ಮೀರಿ ಹೋಗಬಾರದು ಪ್ರತಿಯೊಬ್ಬರು ಕಾನೂನು ಚೌಕಟ್ಟಿನಲ್ಲಿಯೇ ಜೀವಿಸಬೇಕು ಬಾಲ್ಯ ವಿವಾಹ ಶಿಕ್ಷಾರ್ಹನ್ನ ಅಪರಾಧ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ಹಾಲು ಮೊಟ್ಟೆ ಬಾಳೆಹಣ್ಣು ಪೌಷ್ಠಿಕಾಂಶ ಕಾಳುಗಳನ್ನು ನೀಡಲಾಗುತ್ತದೆ.ಇವೆಲ್ಲವನ್ನೂ ಬಳಸಿಕೊಂಡು ಶಿಕ್ಷಣವಂತರಾಗಲು ಕರೆ ನೀಡಿದರು.

ಸಿ.ಆರ್.ಪಿ. ಗೋವಿಂದಪ್ಪ, ಬಡ್ತಿಮುಖ್ಯ ಶಿಕ್ಷಕಿ ಗೀತಮ್ಮ, ಸಹ ಶಿಕ್ಷಕಿಯರುಗಳಾದ ನಾಗಮ್ಮ, ಅಪರ್ಣ, ಸರಸ್ವತಿ, ನಯನ ಹಾಗೂ ಅಂಗನವಾಡಿ ಮಕ್ಕಳು ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now