Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಾಲಿನ ದರ ಏರಿಕೆಗೆ ಆಕ್ರೋಶ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

---Advertisement---

ಬೆಂಗಳೂರು: ಸಾಮಾನ್ಯ ಜನ ಈ ಬೆಲೆ ಏರಿಕೆಯಿಂದಾನೇ ತತ್ತರಿಸಿ ಹೋಗಿದ್ದಾರೆ‌. ಮೊನ್ನೆಯಷ್ಟೇ ಪೆಟ್ರೋಲ್-ಡಿಸೇಲ್ ದರ ಏರಿಕೆಯಾಗಿದೆ. ಈಗ ಹಾಲಿನ ದರವನ್ನು ಏರಿಕೆ ಮಾಡಲಾಗಿದೆ. 2 ರೂಪಾಯಿ ಏರಿಕೆ ಮಾಡಿ 50 ML ಹಾಲನ್ನು ಜಾಸ್ತಿ ನೀಡಲಾಗುತ್ತಿದೆ. ಆದರೆ ದಿಢೀರನೇ ಎರೆಉ ರೂಪಾಯಿ ಏರಿಕೆಯಾಗಿದ್ದು ಗ್ರಾಹಕರಿಗೆ ಹೆಚ್ಚುವರಿಯಾದಂತೆಯೇ ಆಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ನಂದಿನಿ ಹಾಲಿನ ಪ್ಯಾಕೆಟ್ ನಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. 50 ಮಿಲೀ ಹೆಚ್ಚಳ ಮಾಡಿ, ಅದಕ್ಕೆ 2 ರೂಪಾಯಿ ದರ ನಿಗದಿ ಮಾಡಲಾಗಿದೆ. ಹಾಲಿನ ಬೆಲೆಯಲ್ಲು ಯಾವುದೇ ರೀತಿಯ ಏರಿಕೆ ಮಾಡಿಲ್ಲ. ಹಾಲು ಸಂಗ್ರಹಣಾ ಕೇಂದ್ರದಲ್ಲಿ ರೈತರು ಹೆಚ್ಚುವರಿಯಾಗಿ ತರುವ ಹಾಲನ್ನು ವಾಪಾಸ್ ಕಳುಹಿಸಬಾರದು ಎಂಬ ಉದ್ದೇಶಕ್ಕೆ ಈ ರೀತಿ ಹೆಚ್ಚುವರಿ ಹಾಲನ್ನು ಪಾಕೇಟ್ ನಲ್ಲಿ ಹಾಕಲಾಗುತ್ತಿದೆ.

ಈ ಬಾರಿ ಕಳೆದ ವರ್ಷಕ್ಕಿಂತ ಶೇಕಡ 15ರಷ್ಟು ಹಾಲು ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು. ಹೀಗಾಗಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡಿ, ಗ್ರಾಹಕರಿಂದ 2 ರೂಪಾಯಿ ಹೆಚ್ಚುವರಿಯಾಗಿ ಪಡೆಯುತ್ತಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ರಾಜ್ಯದಲ್ಲಿ ನಿತ್ಯ ಸರಾಸರಿ 72 ಲಕ್ಷ ಲೀಟರ್ ಗಳಷ್ಟು ಹಾಲು ಸಂಗ್ರಹವಾಗುತ್ತಿತ್ತು. ಈ ಹಿಂದೆ ಹಾಲಿನ ಬೆಲೆಯಲ್ಲಿ 3 ರೂಪಾಯಿ ಹೆಚ್ಚಳ ಮಾಡಿ ಆ ಹೆಚ್ಚಳದ ಬೆಲೆಯನ್ನು ನೇರವಾಗಿ ರೈತರಿಗೆ ವರ್ಗಾಯಿಸುವಂತೆ ಮಾಡಲಾಗಿತ್ತು. ಈ ಬಾರಿ ಉತ್ತಮ ಮಳೆಯಾಗುತ್ತಿರುವ ಕಾರಣ ಹಾಲು ಉತ್ಪಾದನೆಯೂ ಹೆಚ್ಚಾಗಲಿದೆ. ಹೀಗಾಗಿ ಈ ನಿರ್ಧಾರ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment