Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯಲ್ಲಿ 12.98 ಲಕ್ಷಕ್ಕೂ ಅಧಿಕ ಮತದಾರರ ಗಣತಿ ನಮೂನೆ ಗಣಕೀಕರಣ ಪೂರ್ಣ: ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಮಾಹಿತಿ

---Advertisement---

ಚಿತ್ರದುರ್ಗ. ಆ.12: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್ ) 2026 ರಲ್ಲಿ ಗಣಕೀಕರಣ ಪ್ರಕ್ರಿಯೆ ಭರದಿಂದ ಸಾಗಿದ್ದು, ಇದುವರೆಗೆ ಒಟ್ಟು 12,98,675 ಗಣತಿ ನಮೂನೆಗಳನ್ನು ಗಣಕೀಕರಣ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಎಸ್ ಐ ಆರ್-2026ರ ಸಂಬಂಧ ಜಿಲ್ಲೆಯ ಎಲ್ಲ ಮತಗಟ್ಟೆ ಮಟ್ಟದ ಅಧಿಕಾರಿಗಳು ಕಳೆದ ಜೂನ್ 30 ರಿಂದ ಮನೆ ಮನೆಗೆ ತೆರಳಿ ಗಣತಿ ನಮೂನೆಗಳ ವಿತರಿಸುವ ಕಾರ್ಯ ಪ್ರಾರಂಭಿಸಿದ್ದು, ಇದೇ ಆಗಸ್ಟ್ 17 ರವರೆಗೆ ಗಣತಿ ನಮೂನೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಜಿಲ್ಲೆಯಾದ್ಯಂತ ಒಟ್ಟು 1,661 ಮತಗಟ್ಟೆಗಳ ವ್ಯಾಪ್ತಿಯಲ್ಲಿ 14,40,534 ಮತದಾರರಿಗೆ ನಮೂನೆಗಳನ್ನು ವಿತರಿಸಲಾಗಿದ್ದು, ಅದರಲ್ಲಿ ಶೇ. 90ಕ್ಕೂ ಹೆಚ್ಚು ನಮೂನೆಗಳ ಗಣಕೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಕ್ಷೇತ್ರವಾರು ವಿವರ ನೋಡಬಯಸುವುದಾದರೆ, ಮೊಳಕಾಲ್ಮೂರು ಕ್ಷೇತ್ರದಲ್ಲಿ ವಿತರಿಸಲಾದ 2,51,685 ನಮೂನೆಗಳಲ್ಲಿ 2,32,691, ಚಿತ್ರದುರ್ಗದಲ್ಲಿ 2,69,332 ನಮೂನೆಗಳಲ್ಲಿ 2,31,880, ಹೊಳಲ್ಕೆರೆಯಲ್ಲಿ 2,38,935 ನಮೂನೆಗಳ ಪೈಕಿ 2,22,415, ಹಿರಿಯೂರಿನಲ್ಲಿ 2,51,482 ನಮೂನೆಗಳಲ್ಲಿ 2,21,920, ಚಳ್ಳಕೆರೆಯಲ್ಲಿ 2,25,619 ನಮೂನೆಗಳ ಪೈಕಿ 2,00,228 ಹಾಗೂ ಹೊಸದುರ್ಗ ಕ್ಷೇತ್ರದಲ್ಲಿ 2,03,481 ನಮೂನೆಗಳಲ್ಲಿ 1,89,541 ನಮೂನೆಗಳು ಗಣಕೀಕರಣಗೊಂಡಿವೆ.

ಈ ಗಣಕೀಕರಣ ಪ್ರಕ್ರಿಯೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ 70,133 ಶಾಶ್ವತ ವಲಸೆ, 30,768 ಮರಣ, 21,262 ಡಬಲ್ ಎಂಟ್ರಿ ಹಾಗೂ 18,695 ಗೈರುಹಾಜರಿ ಪ್ರಕರಣಗಳನ್ನು ಗುರುತಿಸಲಾಗಿದೆ.

ಗಣತಿ ನಮೂನೆ ಸಲ್ಲಿಸಲು ಆಗಸ್ಟ್‌ 17ರವರೆಗೆ ಅವಕಾಶ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಭರ್ತಿ ಮಾಡಿರುವ ಗಣತಿ ನಮೂನೆಗಳನ್ನು ಸಲ್ಲಿಸುವ ಅವಧಿಯನ್ನು ಆಗಸ್ಟ್‌ 17ರವರೆಗೆ ವಿಸ್ತರಿಸಲಾಗಿದೆ.

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಕಾರ್ಯ ಪ್ರಗತಿಯಲ್ಲಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಅದರಂತೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ಹಾಗೂ ದಾಖಲೆ ಸಂಗ್ರಹಿಸುವ ಕಾರ್ಯ ಜೂನ್‌ 30ರಂದು ಆರಂಭವಾಗಿದ್ದು, ಆಗಸ್ಟ್‌ 17ರವರೆಗೆ ನಡೆಯಲಿದೆ. ಈ ಹಿಂದೆ ಆಗಸ್ಟ್ 8ರವರೆಗೆ ಅವಕಾಶ ನೀಡಲಾಗಿತ್ತು.
ಪರಿಷ್ಕೃತ ವೇಳಾಪಟ್ಟಿಯಂತೆ, ಮತಗಟ್ಟೆಗಳ ಮರುಜೋಡಣೆ ಹಾಗೂ ಮರುಹೊಂದಾಣಿಕೆ ಕಾರ್ಯವನ್ನು ಆಗಸ್ಟ್‌ 17ರಂದು ಪೂರ್ಣಗೊಳಿಸಲಾಗುವುದು. ಕರಡು ಮತದಾರರ ಪಟ್ಟಿಯನ್ನು ಆಗಸ್ಟ್‌ 24ರಂದು ಪ್ರಕಟಿಸಲಾಗುತ್ತದೆ.

ಇದಾದ ಬಳಿಕ ಆಗಸ್ಟ್‌ 24ರಿಂದ ಸೆಪ್ಟೆಂಬರ್‌ 23ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಲ್ಲಿಕೆಯಾಗುವ ಅರ್ಜಿಗಳ ವಿಲೇವಾರಿಯನ್ನು ಆಗಸ್ಟ್‌ 24ರಿಂದ ಅಕ್ಟೋಬರ್‌ 22ರವರೆಗೆ ನಡೆಸಲಾಗುವುದು. ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್‌ 27ರಂದು ಪ್ರಕಟಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ‌.ವೆಂಕಟೇಶ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now