ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಜು. 22 : ಕೇಂದ್ರ ಸರ್ಕಾರದ ಹತ್ತು ವರ್ಷದಲ್ಲಿ ವಿವಿಧ ರೀತಿಯ ಪರೀಕ್ಷೆಗಳಲ್ಲಿ ನಡೆದಿದ್ದು ಇದರಲ್ಲಿ 150ಕ್ಕೂ ಹೆಚ್ಚು ಪ್ರಶ್ನೆ ಪತ್ರಿಕೆಗಳು ಲೀಕ್ ಆಗಿವೆ ಇದನ್ನು ಪ್ರಶ್ನಿಸಲು ಹೋದ ನಮ್ಮ ನಾಯಕರನ್ನು ಕೇಂದ್ರ ಸರ್ಕಾರ ಬಂಧಿಸಿದೆ ಇದು ಪ್ರಜಾಪ್ರಭುತ್ವದ ವಿರೋಧಿಯಾಗಿದೆ ಎಂದು ಎಐಸಿಸಿ ಜನರಲ್ ಸೆಕ್ರೆಟರಿ ಸಂದೀಪ್ ಕೇಂದ್ರ ಸರ್ಕಾರದ ವಿರುದ್ದ ಹರಿ ಹಾಯ್ದಿದಿದ್ದಾರೆ.
ಹಿರಿಯೂರು ನಗರದ ಕೃಷ್ಣಪ್ಪ ರೋಟರಿ ಭವನದಲ್ಲಿ ಬುಧವಾರ ಕೇಂದ್ರ ಸರ್ಕಾರದ ಅವಧಿಯಲ್ಲಿ ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿರುವುದನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಕಾಂಗ್ರೆಸ್ ವತಿಯಿಂದ `ವಿದ್ಯಾರ್ಥಿಗಳ ಧ್ವನಿ’ ಎಂಬ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ 10 ರಿಂದ 12 ವರ್ಷಗಳ ಕೇಂದ್ರ ಸರ್ಕಾರದ ಅವಧಿಯಲ್ಲಿ ಸುಮಾರು 150ಕ್ಕೂ ಹೆಚ್ಚು ಪರೀಕ್ಷಾ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ. ಇದರಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ ಮತ್ತು ತೀವ್ರ ಮಾನಸಿಕ ಒತ್ತಡದಿಂದಾಗಿ ಇತ್ತೀಚೆಗೆ ಸುಮಾರು 20 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮುಖಂಡರು ಆತಂಕ ವ್ಯಕ್ತಪಡಿಸಿದರು.
ಪರೀಕ್ಷೆಗಳ ಪವಿತ್ರತೆಯನ್ನು ಕಾಯ್ದುಕೊಳ್ಳುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಕೂಡಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಹಾಗೂ ಪ್ರಧಾನಮಂತ್ರಿಗಳು ಈ ಕುರಿತು ದೇಶದ ಜನತೆಗೆ ಉತ್ತರ ನೀಡಬೇಕು ಎಂದು ಒತ್ತಾಯಿಸಿದ ಅವರು. ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಂಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ, ನೆನ್ನೆ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಗಿತ್ತು ನೀಟ್ ಪರೀಕ್ಷೆಯಲ್ಲಿನ ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಶಿಕ್ಷಿಸುವಂತೆ ಸೋನಂ ವಾಂಗ್ಚುಕ್ ದೆಹಲಿಯ ಜಂತರ್ ಮಂರ್ತನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದಕ್ಕೆ ಬೆಂಬಲಿಸಿ ಸೋಮವಾರ ಪ್ರತಿಭಟನೆ ನಡೆಸಿದ ಸಹಸ್ರಾರು ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಚದುರಿಸಿರುವುದನ್ನು ವಿರೋಧಿಸಿ ಮೋದಿ ನಿವಾಸದ ಎದುರು ಧರಣಿ ನಡೆಸಿದ ರಾಹುಲ್ ಗಾಂಧಿಯನ್ನು ಬಂದಿಸಿದ್ದಾರೆ, ಸಂವಿಧಾನದಲ್ಲಿ ಎಲ್ಲರಿಗೂ ಪ್ರತಿಭಟಿಸುವ ಹಕ್ಕನ್ನು ಡಾ.ಬಿ.ಆರ್.ಅಂಬೇಡ್ಕರ್ ನೀಡಿದ್ದಾರೆ. ಪ್ರಧಾನಿ ಮೋದಿ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ರಾಹುಲ್ ಗಾಂಧಿಯನ್ನು ಬಂಧಿಸಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದ್ದಾರೆ ಎಂದು ದೂರಿದರು.
ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರ ನೀಟ್ ಲೀಕ್ ಆಗಿ ಸುಮಾರು 25 ಜನ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಪರವಾಗಿ ದೇಶದ ಯುವ ಧ್ವನಿಯಾಗಿ ರಾಹುಲ್‍ಗಾಂಧೀ ಅವರು ವಿದ್ಯಾರ್ಥಿಗಳ ಪರವಾಗಿ ಹೋರಾಟವನ್ನು ರೂಪಿಸಿದ್ದಾರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಪರೀಕ್ಷಾ ಅಕ್ರಮಗಳಿಂದ ವಿದ್ಯಾರ್ಥಿಗಳು ಧೃತಿಗೆಡಬಾರದು ಮತ್ತು ಯಾವುದೇ ಕಾರಣಕ್ಕೂ ಜೀವಕ್ಕೆ ಅಪಾಯ ತಂದುಕೊಳ್ಳುವ ನಿರ್ಧಾರ ಕೈಗೊಳ್ಳಬಾರದು. ವಿದ್ಯಾರ್ಥಿಗಳ ಪರವಾಗಿ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ ಎಂದು ಭರವಸೆ ನೀಡಲಾಯಿತು.
ಸಂವಾದದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಪ್ರಧಾನಮಂತ್ರಿಯವರು ಪರೀಕ್ಷೆಯ ಮುನ್ನ `ಪರೀಕ್ಷಾ ಪೇ ಚರ್ಚಾ’ ಹಾಗೂ `ಮನ್ ಕಿ ಬಾತ್’ ಕಾರ್ಯಕ್ರಮಗಳನ್ನು ನಡೆಸುತ್ತಾರೆ, ಆದರೆ ಪರೀಕ್ಷಾ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದಾಗ ಯಾವುದೇ ಚರ್ಚೆ ಅಥವಾ ಕಠಿಣ ಕ್ರಮ ಕೈಗೊಳ್ಳುವುದಿಲ್ಲ ಏಕೆ ಎಂದು ಪ್ರಶ್ನಿಸಿದರು. ಹಿಂದೆ ಪರೀಕ್ಷಾ ಅಕ್ರಮಗಳು ನಡೆದಾಗ ಸಂಬಂಧಪಟ್ಟ ಸಚಿವರು ರಾಜೀನಾಮೆ ನೀಡುತ್ತಿದ್ದ ಉದಾಹರಣೆಗಳಿದ್ದರೂ, ಪ್ರಸ್ತುತ ಸರ್ಕಾರ ಈ ಬಗ್ಗೆ ಯಾವುದೇ ಹೊಣೆಗಾರಿಕೆ ವಹಿಸುತ್ತಿಲ್ಲ ಎಂದು ದೂರಿದರು. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಸರ್ಕಾರವು ಪರೀಕ್ಷಾ ಅಕ್ರಮಗಳ ಜವಾಬ್ದಾರಿ ಹೊರಬೇಕು ಮತ್ತು ವಿದ್ಯಾರ್ಥಿಗಳಿಗೆ ತಕ್ಷಣವೇ ಸೂಕ್ತ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ., ಮಾಜಿ ಶಾಸಕರಾದ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್‍ಪೀರ್ ಕೆಪಿಸಿಸಿ ಸದಸ್ಯರಾದ ಎಚ್ ಎಂ ಅಮೃತೇಶ್ವರ್ ಸ್ವಾಮಿ, ಕಂದಿಕೆರೆ ಸುರೇಶ್ ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ ರಮೇಶ್, ನಗರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈರೇಲೀಂಗೆ ಗೌಡ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್.,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಧುಗೌಡ್ರು ,ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕಾರಹಳ್ಳಿ ಉಲ್ಲಾಸ್.,ತಾಲ್ಲೂಕು ಕಾರ್ಮಿಕ ವಿಭಾಗದ ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ವಿ., ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ದಾದಾಪೀರ್,. ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಭಿಲಾಶ್ ಪಾಟೀಲ್ ,ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ದರ್ಶನ್ ,ಗ್ರಾಮಾಂತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ್., ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಎಂ ಅವಿನಾಶ್ ಶಾಹಿದ್ ಅನಿಲ್ ಗೌಡ ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರಾದ ಕರುಣ್ ಕುಮಾರ್ ಪೃಥ್ವಿ ಹೂಗಾರ್ ಇನ್ನೂ ಹಲವಾರು ಯುವ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.
ದೇಶಾದ್ಯಂತ ಸುಮಾರು 150ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದ ಭಾಗವಾಗಿ, ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ಮುಖಾಮುಖಿ ಸಂವಾದ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 300 ರಿಂದ 400 ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










