Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿ.ಎಂ. ವಿಶ್ವಕರ್ಮ ಯೋಜನೆಯ ಸೌಲಭ್ಯ ಪಡೆಯಲು ಕೂಡಲೆ ತರಬೇತಿ ಪ್ರಾರಂಭಿಸಿ : ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಸೂಚನೆ

---Advertisement---

ಚಿತ್ರದುರ್ಗ ಜ. 08 : ವಿವಿಧ ವೃತ್ತಿ ಆಧಾರಿತ ಕುಶಲಕರ್ಮಿಗಳಿಗೆ ಆರ್ಥಿಕ ನೆರವು ನೀಡಲು ಜಾರಿಗೊಂಡಿರುವ ಪಿ.ಎಂ. ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ ಸುಮಾರು 98 ಸಾವಿರ ಜನ ನೊಂದಣಿ ಮಾಡಿಕೊಂಡಿದ್ದು, ಇದರಲ್ಲಿ ಅನುಮೋದನೆಗೊಂಡ ಅರ್ಹರಿಗೆ ಕೂಡಲೆ ತರಬೇತಿ ನೀಡುವ ಕಾರ್ಯ ಪ್ರಾರಂಭವಾಗಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಸಂಸದ ಎ. ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾದ ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾನಾ ವೃತ್ತಿಗಳಲ್ಲಿ ತೊಡಗಿರುವ ಶ್ರಮಿಕ ವರ್ಗದವರು, ಬಡಗಿ, ದೋಣಿ ತಯಾರಿಕೆ, ಶಸ್ತ್ರ ತಯಾರಿಕೆ, ಕಮ್ಮಾರಿಕೆ, ಕಲ್ಲುಕುಟಿಗ, ಬಟ್ಟೆ, ಚಾಪೆ-ಕಸಪರಕೆ ತಯಾರಕರು, ಗೊಂಬೆ ಮತ್ತು ಆಟಿಕೆ ತಯಾರಿಕೆ, ಕ್ಷೌರಿಕ ವೃತ್ತಿ, ಸುತ್ತಿಗೆ ಮತ್ತು ಉಪಕರಣಗಳ ತಯಾರಿಕೆ, ಹೂಮಾಲೆ ತಯಾರಿಕೆ, ಅಗಸರು (ದೋಬಿ) ಆಭರಣ ತಯಾರಿಕೆ, ಟೈಲರಿಂಗ್, ಕುಂಬಾರಿಕೆ, ಮೀನು ಬಲೆ ಹೆಣೆಯುವವರು, ಮೂರ್ತಿ ಮತ್ತು ಕಲ್ಲಿನ ಕೆತ್ತನೆ ಮಾಡುವ ಶಿಲ್ಪಿಗಳು, ಚಮ್ಮಾರರು, ಪಾದರಕ್ಷೆ ತಯಾರಕರು, ಬೀಗ ತಯಾರಿಕೆ ಸೇರಿದಂತೆ ವಿವಿಧ ಬಗೆಯ ವೃತ್ತಿ ಮಾಡುವವರು, ತಮ್ಮ ವೃತ್ತಿ ಸುಧಾರಣೆಗೆ ಅಗತ್ಯವಿರುವ ಉಪಕರಣಗಳನ್ನು ಖರೀದಿಸಲು ಆರ್ಥಿಕ ಸಹಾಯ ನೀಡುವ ಸಲುವಾಗಿ ಸರ್ಕಾರ ವಿಶ್ವಕರ್ಮ ಯೋಜನೆ ಜಾರಿಗೊಳಿಸಿದೆ ಎಂದರು.

ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಸುಮಾರು 93 ಸಾವಿರ ಜನರು ಯೋಜನೆಯಡಿ ನೊಂದಣಿ ಮಾಡಿಕೊಂಡಿದ್ದಾರೆ.  ಈ ಪೈಕಿ ಟೈಲರಿಂಗ್ ವೃತ್ತಿಗೆ ಸಂಬಂಧಿಸಿದಂತೆಯೇ ಹೆಚ್ಚಿನವರು ನೊಂದಣಿ ಮಾಡಿಕೊಂಡಿದ್ದಾರೆ. ನೊಂದಣಿ ಮಾಡಿಕೊಂಡವರ ಪೈಕಿ 03 ಹಂತಗಳಲ್ಲಿ ಈಗಾಗಲೆ ಸುಮಾರು 16 ಸಾವಿರ ಫಲಾನುಭವಿಗಳಿಗೆ ಅನುಮೋದನೆ ನೀಡಿದ್ದು, ತರಬೇತಿಗಾಗಿಯೇ 19 ಏಜೆನ್ಸಿಗಳನ್ನು ಗುರುತಿಸಲಾಗಿದೆ.  ಒಂದು ಕೇಂದ್ರದಲ್ಲಿ ತರಬೇತಿಯನ್ನು ಕೂಡ ಪ್ರಾರಂಭಿಸಲಾಗಿದೆ.   ಕೌಶಲ್ಯ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯಲ್ಲಿ 50 ತರಬೇತಿ ಕೇಂದ್ರಗಳನ್ನು ಗುರುತಿಸಿ ವರದಿ ಸಲ್ಲಿಸುವಂತೆ ಸೂಚನೆ ಬಂದಿದ್ದು, ಗುರುತಿಸುವ ಕಾರ್ಯ ನಡೆದಿದೆ ಎಂದರು. ಅರ್ಹ ಫಲಾನುಭವಿಗಳಿಗೆ  ತಿಂಗಳ ಒಳಗೆ ತರಬೇತಿ ಪ್ರಾರಂಭಿಸಬೇಕು ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment