ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 21 : ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 24ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮ ಬುಧವಾರ ಸಂಜೆ ಅಯ್ಯಪ್ಪ ಸ್ವಾಮಿ ಪಡಿಪೂಜೆ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭದಲ್ಲಿ ಸತೀಶ್‍ಶರ್ಮ ರವರ ಸಂಗಡಿಗರಿಂದ , ಅಷ್ಟ ದೇವತೆಗಳಿಗೆ ಬಲಿ , ಹೋಮ ಅಯ್ಯಪ್ಪ ಸ್ವಾಮಿ ದೇವರಿಗೆ ಅಭಿಷೇಕ ಹಾರಟ್ಟು , ಅಯ್ಯಪ್ಪ ದೇವರ ಉತ್ಸವ ಮೂರ್ತಿಯ ಮೆರವಣಿಗೆ ದೇವರಿಗೆ ಅಭಿಷೇಕ ಅಲಂಕಾರ, ಚoಡೆ ಮದ್ದಾಳೆ ನಾದಸ್ವರದಿಂದ ಪೂಜಾ ನೆರವೇರಿತು .
ಅಯ್ಯಪ್ಪ ಸ್ವಾಮಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜೆಯನ್ನು ಯಶಸ್ವಿಗೊಳಿಸಿದರು . ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ ಶರಣ್ ಕುಮಾರ್, ಕಾರ್ಯದರ್ಶಿ ಎಂ. ಪಿ. ವೆಂಕಟೇಶ್, ಹಾಗೂ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ರೇಷ್ಮೆ, ಮಂಜುನಾಥ್, ಮೋಹನ್ ಕುಮಾರ್, ಚಂದ್ರಶೇಖರ್ ಇಂದ್ರಣ್ಣ ಸೂರಪ್ಪ ರಮೇಶ್ ಗುರುಸ್ವಾಮಿ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















