ನವದೆಹಲಿ; ದೇಶದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಯನ್ನ ಇಂದು ನೀಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮಾ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ರವಿಚಂದ್ರನ್ ಅಶ್ವಿನ್, ತಮಿಳುನಾಡಿನ ಸ್ಟಾರ್ ಅಜಿತ್ ಕುಮಾರ್, ಟಾಲಿವುಡ್ ನಟ ಬಾಲಕೃಷ್ಣ ಅವರಿಗೆ ರಾಷ್ಟ್ರಪತಿ ಅವರಿಂದ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಭಾರತದ ಕ್ರಿಕೆಟ್ ಕ್ಷೇತ್ರದಲ್ಲಿ ಆರ್.ಅಶ್ವಿನ್ ಅವರು ಮಾಡಿದ ಸಾಧನೆ ಗುರುತಿಸಿ ಈ ಅತ್ಯುನ್ನತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇದೆ ವೇಳೆ ತಮಿಳುನಾಡಿನ ಸ್ಟಾರ್ ನಟ ಅಜಿತ್ ಕುಮಾರ್ ಎಸ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಂದ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕಾರ ಮಾಡಿದರು. ಅಮಾರವತಿ ಸಿನಿಮಾ ಮೂಲಕ ತಮಿಳು ಸಿನಿಮಾರಂಗಕ್ಕೆ ಎಂಟ್ರಿಕೊಟ್ಟರು. ಸಿನಿಮಾರಂಗದಲ್ಲಿಯೇ ಅಜಿತ್ ಅತ್ಯುನ್ನತ ಸ್ಥಾನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಕಲಾ ಕ್ಷೇತ್ರದಲ್ಲಿ ಅವರ ಮಹಾನ್ ಸಾಧನೆಗಳಿಗಾಗಿ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಟಾಲಿವುಡ್ನ ಹಿರಿಯ ನಟ ಹಾಗೂ ರಾಜಕಾರಣಿ ನಂದಮೂರಿ ಬಾಲಕೃಷ್ಣ ಅವರಿಗೂ ಇದೇ ವೇಳೆ ಪದ್ಮಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೀಡಿದರು. ತೆಲುಗು ಸಿನಿಮಾ ಕ್ಷೇತ್ರದಲ್ಲಿ ನಂದಮೂರಿ ಬಾಲಕೃಷ್ಣ ಅವರ ಸಾಧನೆಯನ್ನು ಗುರುತಿಸಿ ದೇಶದ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗಿದೆ. ನಂದಮೂರಿ ಬಾಲಕೃಷ್ಣ ಅವರು ಸಿನಿಮಾ ಕ್ಷೇತ್ರವಲ್ಲದೇ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದು ಸದ್ಯ ಆಂಧ್ರಪ್ರದೇಶದ ಹಿಂದುಪುರ ಕ್ಷೇತ್ರಕ್ಕೆ ಅವರು ಶಾಸಕರಾಗಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












