Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಪ್ರದಾನ ; ಯಾರಿಗೆಲ್ಲಾ ನೀಡಲಾಯ್ತು..?

---Advertisement---

ನವದೆಹಲಿ; ದೇಶದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಯನ್ನ ಇಂದು ನೀಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮಾ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ರವಿಚಂದ್ರನ್ ಅಶ್ವಿನ್, ತಮಿಳುನಾಡಿನ ಸ್ಟಾರ್ ಅಜಿತ್ ಕುಮಾರ್, ಟಾಲಿವುಡ್ ನಟ ಬಾಲಕೃಷ್ಣ ಅವರಿಗೆ ರಾಷ್ಟ್ರಪತಿ ಅವರಿಂದ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಭಾರತದ ಕ್ರಿಕೆಟ್ ಕ್ಷೇತ್ರದಲ್ಲಿ ಆರ್.ಅಶ್ವಿನ್ ಅವರು ಮಾಡಿದ ಸಾಧನೆ ಗುರುತಿಸಿ ಈ ಅತ್ಯುನ್ನತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇದೆ ವೇಳೆ ತಮಿಳುನಾಡಿನ ಸ್ಟಾರ್ ನಟ ಅಜಿತ್ ಕುಮಾರ್ ಎಸ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಂದ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕಾರ ಮಾಡಿದರು. ಅಮಾರವತಿ ಸಿನಿಮಾ ಮೂಲಕ ತಮಿಳು ಸಿನಿಮಾರಂಗಕ್ಕೆ ಎಂಟ್ರಿಕೊಟ್ಟರು. ಸಿನಿಮಾರಂಗದಲ್ಲಿಯೇ ಅಜಿತ್ ಅತ್ಯುನ್ನತ ಸ್ಥಾನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಕಲಾ ಕ್ಷೇತ್ರದಲ್ಲಿ ಅವರ ಮಹಾನ್ ಸಾಧನೆಗಳಿಗಾಗಿ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಟಾಲಿವುಡ್​ನ ಹಿರಿಯ ನಟ ಹಾಗೂ ರಾಜಕಾರಣಿ ನಂದಮೂರಿ ಬಾಲಕೃಷ್ಣ ಅವರಿಗೂ ಇದೇ ವೇಳೆ ಪದ್ಮಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೀಡಿದರು. ತೆಲುಗು ಸಿನಿಮಾ ಕ್ಷೇತ್ರದಲ್ಲಿ ನಂದಮೂರಿ ಬಾಲಕೃಷ್ಣ ಅವರ ಸಾಧನೆಯನ್ನು ಗುರುತಿಸಿ ದೇಶದ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗಿದೆ. ನಂದಮೂರಿ ಬಾಲಕೃಷ್ಣ ಅವರು ಸಿನಿಮಾ ಕ್ಷೇತ್ರವಲ್ಲದೇ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದು ಸದ್ಯ ಆಂಧ್ರಪ್ರದೇಶದ ಹಿಂದುಪುರ ಕ್ಷೇತ್ರಕ್ಕೆ ಅವರು ಶಾಸಕರಾಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment