ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 23 : ಭಾರತದ ಪ್ರವಾಸಿ ತಾಣ ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಭಯೋತ್ಪಾದಕರು ಮಂಗಳವಾರ ನಡೆಸಿರುವ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿ 26 ಮಂದಿ ಅಮಾಯಕರು ಬಲಿಯಾಗಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ದೇಶದ ಪ್ರಧಾನಿ ನರೇಂದ್ರಮೋದಿಗೆ ಮನವಿ ರವಾನಿಸಲಾಯಿತು.
ಕೇಂದ್ರ ಗೃಹ ಇಲಾಖೆ ಹಾಗೂ ಗುಪ್ತಚರ ಇಲಾಖೆ ವೈಫಲ್ಯ ಎದ್ದು ಕಾಣುತ್ತಿದೆ. ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯ ತಲೆದಂಡವಾಗಬೇಕು. 2019 ರಲ್ಲಿ ನಡೆದ ಪುಲ್ವಾಮಾ ದಾಳಿಯ ನಂತರ ಇದು ಎರಡನೆ ಅತ್ಯಂತ ಭೀಕರ ದಾಳಿಯಾಗಿದೆ. ಹಿಂದೂಗಳನ್ನು ಗುರಿಯಾಗಿಸಿಕೊಂಡಿರುವ ಉಗ್ರರನ್ನು ಸದೆ ಬಡಿಯಬೇಕು. ಆಗ ಬಲಿಯಾದವರ ಆತ್ಮಕ್ಕೆ ಶಾಂತಿ ಸಿಕ್ಕಂತಾಗುತ್ತದೆ. ದಾಳಿಯಲ್ಲಿ ಬಲಿಯಾದವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು. ಜೊತೆಗೆ ಮೃತರಿಗೆ ತಲಾ ಒಂದು ಕೋಟಿ ರೂ.ಗಳ ಪರಿಹಾರ ಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾಧ್ಯಕ್ಷೆ ವೀಣಗೌರಣ್ಣ, ಗೋಪಿನಾಥ್, ಕಮಲಮ್ಮ, ಅವಿನಾಶ್, ತಿಪ್ಪೇಸ್ವಾಮಿ, ನಾಗೇಶ್, ನಾಗರಾಜ್ ಮುತ್ತು, ಶಶಿ, ವಿಜಯಬಾಬು, ಪ್ರದೀಪ್, ಹರೀಶ್‍ಕುಮಾರ್, ಅಖಿಲೇಶ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















