Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಹಲ್ಗಾಮ್ ಭಯೋತ್ಪಾದಕರ ದಾಳಿ : ರಾಜಣ್ಣ ತೀವ್ರ ಖಂಡನೆ

---Advertisement---

ಸುದ್ದಿಒನ್, ಹಿರಿಯೂರು, ಏಪ್ರಿಲ್. 23  : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದ ಪ್ರವಾಸಿಗರ ಮೇಲೆ ಮನಬಂದಂತೆ ನಡೆಸಿರುವ ಭಯೋತ್ಪಾದಕರ ದಾಳಿಯನ್ನು ರಾಜ್ಯ ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ಬಿಬಿಎಂಪಿ ರಾಜಣ್ಣ ತೀವ್ರವಾಗಿ ಖಂಡಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ರಾಜಣ್ಣ ಅವರು ಇಂತಹ ಭಯೋತ್ಪಾದಕ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು. ಕಣಿವೆ ರಾಜ್ಯದಲ್ಲಿ 370ಕಲಂ ಜಾರಿಗೆ ತಂದಿದ್ದಾರೆ ಎಂಬ ಕಾರಣದಿಂದ ಮನುಷ್ಯತ್ವ ಇಲ್ಲದ ಕ್ರೂರಿಗಳು ಮಂಗಳವಾರ ಮಧ್ಯಾಹ್ನ ಸಮಯದಲ್ಲಿ ಪ್ರವಾಸಿಗರ ಗುಂಡಿನ ಸುರಿಮಳೆಗೈದಿರುವುದು ಅತ್ಯಂತ ನೋವು ತರಿಸಿದೆ. ಅದರಲ್ಲೂ ಹಿಂದೂಗಳನ್ನು ಹುಡುಕಿ ಹುಡುಕಿಕೊಂಡು ಟಾರ್ಗೆಟ್ ಮಾಡಿರುವುದು ರಾಕ್ಷಸ ಕೃತ್ಯವಾಗಿದೆ.
ಭಯೋತ್ಪಾದಕ ಉಗ್ರಗಾಮಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಅಮೇರಿಕಾ, ರಷ್ಯಾ, ಅನೇಕ ದೇಶಗಳು ಘಟನೆಯನ್ನು ಖಂಡಿಸಿವೆ.
ಪಾಕಿಸ್ತಾನದ ಪ್ರಚೋದಿತ ಉಗ್ರಗಾಮಿಗಳ ಸಂಘಟನೆಗಳನ್ನು ಬ್ಯಾನ್ ಮಾಡಲು ವಿಶ್ವಸಂಸ್ಥೆ ಕ್ರಮ ಕೈಗೊಳ್ಳಬೇಕು. ಕನ್ನಡಿಗರು ಒಳಗೊಂಡಂತೆ ಸುಮಾರು 25ಕ್ಕೂ ಹೆಚ್ಚು ಮಂದಿ ಹುತಾತ್ಮ ರಾಗಿರುವರ ಆತ್ಮಕ್ಕೆ ಶಾಂತಿ ಸಿಗಲಿ, ಸದಸ್ಯನನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಘಟನೆಯಲ್ಲಿ ಗಾಯಗೊಂಡಿರುವರು ಬೇಗ ಚೇತರಿಸಿಕೊಳ್ಳಲಿ, ಭಯೋತ್ಪಾದನೆ ಎದುರಿಸಲು ಇಡೀ ದೇಶವೇ ಒಗ್ಗಟ್ಟಿನಿಂದ ನಿಂತಿದೆ. ಉಗ್ರರ ದಾಳಿಗಳು ಮಾನವಿಯತೆಗೆ ಕಳಂಕವಾಗಿದ್ದು, ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment