ಚಿಕ್ಕಮಗಳೂರು: T20 ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸಿದೆ. ಆದ್ರೆ ಈ ಗೆಲುವನ್ನು ಜಿಲ್ಲೆಯಲ್ಲಿ ಸಂಭ್ರಮಾಚರಿಸಿದ್ದಾರೆ. ಈ ಹಿನ್ನೆಲೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಜರ್ ಅಲಿ, ಅಹಿದ್ ಉದ್ದಿನ್ ಬಂಧಿತ ಆರೋಪಿಗಳು.
ಎನ್ ಆರ್ ಪುರದ ಬಾಳೆಹೊನ್ನೂರು ಸಮೀಪದ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ. ನವೆಂಬರ್ 6ರಂದು ನ್ಯೂಜಿಲೆಂಡ್ ವಿರುದ್ಧ ಪಾಕ್ ಗೆಲುವು ಪಡೆದಿತ್ತು. ಆ ವೇಳೆ ಇಬ್ಬರು ಅಪ್ರಾಪ್ತರು ಸೇರಿದಂತೆ ಈ ನಾಲ್ಕು ಜನ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದರು.
ಈ ಘೋಷಣೆಗಳನ್ನು ಕೇಳಿಸಿಕೊಂಡ ಸ್ಥಳೀಯರು ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಮಾಲೀಕರು ಮ್ಯಾನೇಜರ್ ಗೆ ತಿಳಿಸಿದ್ದಾರೆ. ಈ ಯುವಕರು ಅಸ್ಸಾಂ ಮೂಲದವರೆಂದು ಕಾಫಿತೋಟಕ್ಕೆ ಕೆಲಸಕ್ಕೆ ಸೇರಿದ್ದರಂತೆ. ಇದೀಗ ಪಾಕ್ ಪರ ಘೋಷಣೆ ಕೂಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸದ್ಯ ಪೊಲೀಸರು ಬಂಧಿಸಿದ್ದು, ವಿಚಾರಣೆಯ ಬಳಿಕ ಅಸ್ಸಾಂನವರಂತೆ ಸೋಗಿನಲ್ಲಿದ್ದರಾ ಎಂಬುದು ತಿಳಿಯಲಿದೆ.