Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಂಚಭಾಗ್ಯ ಜಾರಿಯಿಂದ ಬಡವರು ಹಾಗೂ ಮಹಿಳೆಯರು ಮುಖ್ಯ ವಾಹಿನಿಗೆ : ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್

Facebook
Twitter
Telegram
WhatsApp

ಚಿತ್ರದುರ್ಗ..ಜ.26: ದೇಶದಲ್ಲಿಯೇ ಮೊದಲು ಜಾರಿಗೆ ತಂದಿರುವ ಈ ಪಂಚಭಾಗ್ಯ ಯೋಜನೆಗಳು ಬಡವರನ್ನು, ಕೆಳವರ್ಗದ ಜನರನ್ನು, ಮಹಿಳೆಯರನ್ನು ಸಬಲೀಕರಿಸಿ ಮುಖ್ಯ ವಾಹಿನಿಗೆ ತರಲು ಯಶಸ್ವಿಯಾಗುತ್ತಿವೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

 

ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿನ ಶುಕ್ರವಾರ ಜಿಲ್ಲಾಡಳಿತದಿಂದ ಆಯೋಜಿಸಲಾದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ, ಧ್ವಜಾರೋಹಣ ನೆರವೇರಿಸಿದ ಅವರು ಗಣರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿದರು.

ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಪಂಚಭಾಗ್ಯ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ, ಶಕ್ತಿಯೋಜನೆ, ಗೃಹಜ್ಯೋತಿ, ಯುವನಿಧಿ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ 4.50 ಲಕ್ಷ, ಗೃಹಜ್ಯೋತಿ ಯೋಜನೆಯಡಿ 3.71 ಲಕ್ಷ, ಗೃಹಲಕ್ಷ್ಮೀ ಯೋಜನೆಯಡಿ 3.70 ಲಕ್ಷ, ಯುವನಿಧಿ ಯೋಜನೆಯಡಿ 3040 ವಿದ್ಯಾರ್ಥಿಗಳು  ಹಾಗೂ ಶಕ್ತಿ ಯೋಜನೆಯಡಿ 1.36 ಕೋಟಿ ಮಹಿಳೆಯರು ಯೋಜನೆಗಳ ಸದುಪಯೋಗ ಪಡೆದುಕೊಂಡಿದ್ದಾರೆ. ಬಡತನವ ಬುಡಮಟ್ಟ ಕೀಳ ಬನ್ನಿ ಎಂದು ರಾಷ್ಟ್ರ ಕವಿ ಕುವೆಂಪುರವರು ಕರೆ ಕೊಟ್ಟಂತೆ ಬಡತನ ನಿರ್ಮೂಲನೆಗಾಗಿ, ಯುವಕರಿಗೆ ಉದ್ಯೋಗ ನೀಡುವುದಕ್ಕಾಗಿ ಮತ್ತು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವುದಕ್ಕಾಗಿ ಈ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ನುಡಿದಂತೆ ನಡೆದ ನಮ್ಮ ಸರ್ಕಾರ ಎಂದು  ಹೇಳಲು ಹೆಮ್ಮೆ ಎನಿಸುತ್ತದೆ.

ಚಿತ್ರದುರ್ಗ ಜಿಲ್ಲೆಯ ಬಹುದಿನಗಳ ಕನಸಾದ ಭದ್ರಾ ಮೇಲ್ದಂಡೆ ಯೋಜನೆ ಸಾಕಾರಗೊಂಡು ಬರದ ನಾಡು ಹಸಿರುನಾಡಾಗುವ ದಿನಗಳು ಕ್ಷಣಗಣನೆಯಲ್ಲಿವೆ. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿ ಪೂರ್ಣಗೊಳಿಸಲು ಇರುವ ಕೆಲವೇ ತಾಂತ್ರಿಕ ತೊಡಕುಗಳನ್ನು ಸ್ಥಳದಲ್ಲಿಯೇ ನಿವಾರಿಸಲು ಕೋರಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾ‌ರ್ ಇವರನ್ನು ಕೋರಲಾಗಿದೆ. ಈ ತಿಂಗಳಾಂತ್ಯದೊಳಗೆ ಭೇಟಿ ನೀಡಿ ಉಪಮುಖ್ಯಮಂತ್ರಿಗಳು ಪರಿವೀಕ್ಷಣೆ ಮಾಡುವರು. 2024 ರ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಚಿತ್ರದುರ್ಗದವರೆಗೆ ಭದ್ರಾ ಮೇಲ್ದಂಡೆ ನೀರು ಹರಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಐತಿಹಾಸಿಕ ಚಿತ್ರದುರ್ಗದ ಕೋಟೆಗೆ ಹೊನಲುಬೆಳಕು ವ್ಯವಸ್ಥೆ, ಚಂದ್ರವಳ್ಳ ತೋಟ ನವೀಕರಣ ಸೇರಿದಂತೆ ಚಿತ್ರದುರ್ಗ ಜಿಲ್ಲೆಯ ಪ್ರವಾಸೀ ತಾಣಗಳ ಅಭಿವೃದ್ಧಿಗೆ ಹಾಗೂ ಪ್ರವಾಸಿಗರಿಗೆ ಬೇಕಾಗುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ರೂ. 29.00 ಕೋಟಿಗಳ ಅಂದಾಜಿನಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಯೋಜನೆಗೆ ಅಂತಿಮ ರೂಪರೇಷಗಳನ್ನು ನೀಡಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯ ಬಹುದಿನದ ಕನಸಾದ ಸರ್ಕಾರಿ ಮೆಡಿಕಲ್ ಕಾಲೇಜನ್ನು 2023-24ನೇ ಸಾಲಿನಿಂದ ಪ್ರಾರಂಭವಾಗಿದೆ. 150 ವಿದ್ಯಾರ್ಥಿಗಳು ಪ್ರಥಮ ಎಂ.ಬಿ.ಬಿ.ಎಸ್. ಕೋರ್ಸ್ ತರಗತಿಗೆ ಪ್ರವೇಶ ಪಡೆದಿದ್ದಾರೆ.  ಸರ್ಕಾರಿ ಮೆಡಿಕಲ್ ಕಾಲೇಜ್ ಆಸ್ಪತ್ರೆ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಮುಂದಿನ ದಿನಗಳಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮಾಡಲಾಗುವುದು.

ಜಿಲ್ಲೆಯ 06 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದ್ದು, ಬರನಿರ್ವಹಣೆಗೆ ಸರ್ಕಾರದಿಂದ ರೂ.9.00 ಕೋಟಿಗಳ ಹಣ ಬಿಡುಗಡೆಯಾಗಿರುತ್ತದೆ. ಈ ವರ್ಷದಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ಅಂತರ್ಜಲ ಮಟ್ಟ ಕುಸಿದಿದೆ. ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಬೋರ್‌ವೆಲ್‌ಗಳನ್ನು ಕೊರೆಯಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಹಾಗೂ ದನಕರುಗಳಿಗೆ ಮೇವು ವಿತರಣೆಗೆ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿರುವ ಎಲ್ಲಾ ಹೋಬಳಿಗಳಲ್ಲಿ ಗೋಶಾಲೆ ತೆರೆಯಲು ಸಿದ್ಧತೆ ಮಾಡಿಕೊಳ್ಳಾಗಿದ್ದು, ಈಗಾಗಲೇ ಚಳ್ಳಕೆರೆ ತಾಲ್ಲೂಕಿನ ಚೌಳೂರು ಗ್ರಾಮದಲ್ಲಿ ಗೋಶಾಲೆ ಪ್ರಾರಂಭಿಸಲಾಗಿದೆ.

ಮುಂದಿನ ದಿನಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಗೋಶಾಲೆ ಪ್ರಾರಂಭಿಸಲಾಗುವುದು. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಕಂಕಣಬದ್ಧವಾಗಿದೆ. ಈ ನಿಟ್ಟಿನಿಲ್ಲಿ ಮೊಳಕಾಲ್ಕೂರು ತಾಲ್ಲೂಕಿನಲ್ಲಿ ಬಟ್ಟೆ ಉದ್ಯಮದ ಪಾರ್ಕ್ ಮತ್ತು ಚಿತ್ರದುರ್ಗ ತಾಲ್ಲೂಕಿನಲ್ಲಿ ವಿವಿಧ ಕೈಗಾರಿಕಾ ಘಟಕಗಳ ಪಾರ್ಕ್‌ಗಳನ್ನು ಸ್ಥಾಪಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆ ಮತ್ತು ನಗರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಎಲ್ಲರೂ ಸಹಕಾರ ನೀಡಬೇಕು ಎಂದು ಸಚಿವ ಡಿ.ಸುಧಾಕರ್ ಕೋರಿದರು.

12ನೇ ಶತಮಾನದಲ್ಲಿಯೇ “ ಅನುಭವ ಮಂಟಪ ” ಕಟ್ಟುವ ಮೂಲಕ ನಮ್ಮ ಇಂದಿನ ಜನತಂತ್ರ ವ್ಯವಸ್ಥೆಗೆ ಅಂದೇ ನಾಂದಿಯಾದ, ನಮ್ಮ ಸಂವಿಧಾನದ ಎಲ್ಲ ಪರಿಚ್ಛೇದಗಳನ್ನು ಕಾವ್ಯ ರೂಪದಲ್ಲಿ ಜನಸಾಮಾನ್ಯರಿಗೆ ಮನ ಮುಟ್ಟುವಂತೆ ಮಾಡಿದ ವಚನ ಸಾಹಿತ್ಯದ ಹರಿಕಾರ “ಶ್ರೀ.ಜಗಜ್ಯೋತಿ ಬಸವಣ್ಣವನವರನ್ನು”  ಸರ್ಕಾರದ ಕರ್ನಾಟಕ ರಾಜ್ಯದ “ಸಾಂಸ್ಕೃತಿಕ ನಾಯಕ” ಎಂದು ಅಧಿಕೃತವಾಗಿ ಘೋಷಿಸುವ ಮೂಲಕ ಜನಪರ ಸಂಸ್ಕೃತಿ ಮತ್ತು ಸಾಹಿತ್ಯದ ಅನುಷ್ಠಾನಕ್ಕೆ ಪ್ರೇರಣೆ ನೀಡಿದೆ. ಪರಕೀಯರ ಆಳ್ವಿಕೆ ತುತ್ತಾದ ರಾಷ್ಟ್ರವನ್ನು ಅನೇಕ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಬಲಿದಾನದ ಮೂಲಕ ದಾಸ್ಯದಲ್ಲಿದ್ದ ದೇಶವನ್ನು ಬಂಧನದಿಂದ ಬಿಡುಗಡೆಗೊಳಿಸಿದ್ದಾರೆ. ಅವರು ರಕ್ತ ಚಲ್ಲಿದ ಮಣ್ಣನಲ್ಲಿ ನಾವಿಂದು ಸುಖ, ಸಮೃದ್ಧಿಯ ಸುಸ್ಥಿರ ಬದುಕನ್ನು ಕಟ್ಟಿಕೊಳ್ಳುತ್ತಿದ್ದೇವೆ. ನಮ್ಮದೇ ಆದ ಸಂವಿಧಾನವನ್ನು ರಚಿಸಿಕೊಂಡು ಜಗತ್ತಿನ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮುಂದುವರೆದ ರಾಷ್ಟ್ರಗಳ ಜೊತೆಗೆ ಮುನ್ನಡೆ ಇಡುತ್ತಿದ್ದೇವೆ. ಜಗತ್ತಿನಲ್ಲಿಯೇ ಪ್ರಜಾಪ್ರಭುತ್ವ ಆಡಳಿತಕ್ಕೆ ಮಾದರಿ ಎನ್ನಬಹುದಾದ ಈ ಸಂವಿಧಾನದ ಮಹಾ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ, ಅವರೊಂದಿಗೆ ಕೈ ಜೋಡಿಸಿ ದುಡಿದ ಮಹಾನಿಯರಿಗೆ ಕೃತಜ್ಞತಾ ಪೂರಕ ವಂದನೆಗಳು. ಇಂದು ಭಾರತ ದೇಶ ಸದೃಢ ಭಾರತವಾಗಿ ರೂಪುಗೊಳ್ಳುತ್ತಿದೆ ಎಂದರೆ ಅದಕ್ಕೆ ಕಾರಣ ರಾಷ್ಟ್ರೀಯ ಸ್ವಾತಂತ್ರ್ಯ ಚಳುವಳಿ ಕಾರಣ ಎಂದು ಸಚಿವ ಸುಧಾಕರ್ ಹೇಳಿದರು.

ಕೂಸಿನ ಮನೆ ಅನಾವರಣ: ನರೇಗಾದಡಿ ಕೂಲಿ ಕಾರ್ಮಿಕರಾಗಿ ದುಡಿಯುವ ಹೆಣ್ಣುಮಕ್ಕಳ 3 ವರ್ಷದ ಒಳಗಿನ ಮಕ್ಕಳ ಹಾರೈಕೆಗಾಗಿ ಜಿಲ್ಲೆಯಾದ್ಯಂತ ಜಿ.ಪಂ‌.ವತಿಯಿಂದ ನಿರ್ಮಿಸಲಾಗುತ್ತಿರುವ ಕೂಸಿನ ಮನೆ ಕಾರ್ಯಕ್ರಮಕ್ಕೆ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅನಾವರಣ ಮಾಡಲಾಯಿತು.  ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿ, ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಿದ ಜಿಲ್ಲೆಯ ವಿವಿಧ 5 ಆಸ್ಪತ್ರೆಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಸಂವಿಧಾನ ಜಾಗೃತಿ ಜಾಥ ಸ್ಥಬ್ದಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಾಲನೆ :
ಭಾರತದ ಸಂವಿಧಾನ ಅಂಗೀಕರಿಸಿಕೊಂಡು 75 ವರ್ಷಗಳಾದ ಈ ಹಿನ್ನಲೆಯಲ್ಲಿ ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿರುವ  ಸಂವಿಧಾನ ಜಾಗೃತಿ ಜಾಥ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.

ಫೆಬ್ರವರಿ  25 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ರಾಷ್ಟ್ರ ಮಟ್ಟದ ಬೃಹತ್ ಸಮಾವೇಶ ಕಾರ್ಯಕ್ರಮ ಆಯೋಜಿಸಲಾಗುವುದು.  ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಸಂವಿಧಾನ ಜಾಗೃತಿ ಸ್ಥಬ್ಧಚಿತ್ರ (Tableau) ಭಾಗವಹಿಸುವುದು. ಇದಕ್ಕೂ ಮುನ್ನಾ ಜನವರಿ 26 ರಿಂದ ಫೆಬ್ರವರಿ 23 ವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ, ನಗರ ಸ್ಥಳಿಯ ಸಂಸ್ಥೆ ವ್ಯಾಪ್ತಿಯಲ್ಲಿ  ಸಂಚರಿಸಿ ಸಂವಿಧಾನದ ಕುರಿತು ಜಾಗೃತಿ ಮೂಡಿಸಲಿದೆ. ಈ ಜಾಗೃತಿ ಜಾಥದಲ್ಲಿ ಜನಪ್ರತಿನಿಧಿಗಳು, ವಿವಿಧ ಸಂಘ- ಸಂಸ್ಥೆಗಳು, ಮಹಿಳಾ ಸ್ವ-ಸಹಾಯ ಸಂಘಗಳು ಹಾಗೂ ಸಾರ್ವಜನಿಕರುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಚಿವ ಡಿ.ಸುಧಾಕರ್ ಕೋರಿದರು.

ಆಕರ್ಷಕ ಸ್ಥಬ್ಧಚಿತ್ರ: ಸಂವಿಧಾನದ ಜಿಲ್ಲೆಯ ಐತಿಹಾಸಿ ಮಹತ್ವ ಹಾಗೂ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ನಿಟ್ಟಿನಲ್ಲಿ ಸಂವಿಧಾನ ಜಾಗೃತಿ ಸ್ಥಬ್ಧಚಿತ್ರವನ್ನು ಆಕರ್ಷಕವಾಗಿ ನಿರ್ಮಿಸಲಾಗಿದೆ. ಸ್ಥಬ್ದಚಿತ್ರ ವಾಹನದಲ್ಲಿ ಅಳವಡಿಸಲಾಗಿರುವ ಎಲ್ಇಡಿ ಪರದೆ ಸಂವಿಧಾನ ಪೀಠಿಕೆ, ಸಂವಿಧಾನ ರಚನೆ ಹಾಗೂ ಸರ್ಕಾರ ಸಾಧನೆಯ ವಿಡಿಯೋ ತುಣುಕುಗಳ ಪ್ರಸಾರ ಮಾಡಲಾಗುತ್ತಿದೆ. ಸ್ಥಬ್ದಚಿತ್ರ ಚಾಲನೆ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಓದಲಾಯಿತು‌.

ಕಾರ್ಯಕ್ರಮದಲ್ಲಿ ಶಾಸಕ ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಒಓ ಎಸ್.ಜೆ.ಸೋಮಶೇಖರ್,  ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉವಿಭಾಗಧಿಕಾರಿ ವಿವೇಕ್, ತಹಶೀಲ್ದಾರ್ ಡಾ.ನಾಗವೇಣಿ, ನಗರಸಭೆ ಪೌರಾಯುಕ್ತೆ ರೇಣುಕಾ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಪಥ ಸಂಚಲನದಲ್ಲಿ ಆರಕ್ಷಕ, ಗೃಹರಕ್ಷಕ, ಅರಣ್ಯ ರಕ್ಷಕ ಪಡೆ ಒಳಗೊಂಡಂತೆ ಎನ್.ಸಿ.ಸಿ. ಸೌಟ್ಸ್ ಮತ್ತು ಗೈಡ್ಸ್, ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪಥ ಸಂಚಲನಕ್ಕೆ ಪೊಲೀಸ್ ಬ್ಯಾಂಡ್ ವಾದ್ಯವೃಂದ ಸಾಥ್ ನೀಡಿತು. ವಿವಿಧ ಶಾಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ನೃತ್ಯರೂಪಕ ಪ್ರಸ್ತುತ ಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!