ಬೆಳಗಾವಿ: ಚಳಿಗಾಲದ ಅಧಿವೇಶನದ ನಡುವೆ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ತಟ್ಟಿದೆ. ದೊಡ್ಡಮಟ್ಟಕ್ಕೇನೆ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಸುವರ್ಣ ಸೌಧಕ್ಕೆಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಪಂಚಮಸಾಲಿ ಹೋರಾಟಗಾರರು ಹಾಗೂ ಮುಖಂಡರ ಮೇಲೆ ಲಾಠಿ ಚಾರ್ಜ್ ನಡೆದಿದೆ.
ಪಂಚಮಸಾಲಿ ಸಮುದಾಯದವರು 2A ಮೀಸಲಾತಿಗೆ ಆಗ್ರಹಿಸಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಇಂದು ಬೆಳಗಾವಿಯಲ್ಲಿ ಬೃಹತ್ ಪ್ರಮಾಣದಲ್ಲಿ ಹೋರಾಟ ನಡೆಸಿದ್ದಾರೆ. ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರಾಷ್ಟ್ರೀಯ ಹೆದ್ದಾರಿ 4 ಅನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದರು. ಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರ್ಕಾರದ ವಿರುದ್ಧ ಕೂಗಿದ ಪಂಚಮಸಾಲಿ ಮುಖಂಡರು, ಸಾವಿರಾರು ಸಂಖ್ಯೆಯ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ. ಬ್ಯಾರಿಕೇಡ್ ಗಳನ್ನು ಕಿತ್ತೆಸೆದ ಹೋರಾಟಗಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬೃಹತ್ ಮಟ್ಟದಲ್ಲಿ ಹೋರಾಟ ಮಾಡಿದ್ದಾರೆ. ಈ ವೇಳೆ ಪಂಚಮಸಾಲಿ ಹೋರಾಟಗಾರರಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿವೆ. ಒಬ್ಬ ಪ್ರತಿಭಟನಾಕಾರನ ಕೈ ಮುರಿದಿದೆ. ಮತ್ತೊಬ್ಬರ ತಲೆಗೆ ಪೆಟ್ಟಾಗಿದೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿರುವ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಜಯಮೃತ್ಯುಂಜಯ ಸ್ವಾಮೀಜಿ, ಬಿಜೆಪಿ ಶಾಸಕ ಯತ್ನಾಳ್ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಪ್ರತುಭಟನೆ ನಡೆದಿದೆ. ಇಂದಿನ ಹೋರಾಟದಲ್ಲಿ 10 ಸಾವಿರಕ್ಕೂ ಅಧಿಕ ಪಂಚಮಸಾಲಿ ಹೋರಾಟಗಾರರು ಭಾಗಿಯಾಗಿದ್ದರು.