Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ್ರು ಪರಮೇಶ್ವರ್

---Advertisement---

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಅವರು ಉತ್ತರಾಧಿಕಾರಿ ಬಗ್ಗರ ಧ್ವನಿ ಎತ್ತಿದಾಗಿನಿಂದ ಕಾಂಗ್ರೆಸ್ ನಲ್ಲಿ ಪರ ವಿರೋಧ ಧ್ವನಿಯೂ ಜಾಸ್ತಿಯಾಗಿದೆ. ಉತ್ತಾರಾಧಿಕಾರಿ ಬೆನ್ನಲ್ಲೇ ದಲಿತ ಸಿಎಂ ವಿಚಾರವೂ ಚರ್ಚೆಗೆ ಬಂದಿತ್ತು. ಇದೀಗ ಡಿಕೆ ಶಿವಕುಮಾರ್ ಅವರ ಪರವಾಗಿ ಗೃಹ ಸಚಿವ ಪರಮೇಶ್ವರ್ ಅವರೇ ಬ್ಯಾಟ್ ಬೀಸಿದ್ದಾರೆ.

ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಹೈಕಮಾಂಡ್ ಭೇಟಿ ಮಾಡಿ, ಒಂದಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈ ಬೆನ್ನಲ್ಲೇ ಗೃಹ ಸಚಿವರು ಡಿಕೆ ಶಿವಕುಮಾರ್ ಪರವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಎಕ್ಲಾ ತೀರ್ಮಾನ ಮಾಡುವುದು ಹೈಕಮಾಂಡ್. ಬಿಹಾರದ ಎಲೆಕ್ಷನ್ ನಡೆಯುತ್ತಿದೆ. ಇದು ಆದ ಮೇಲೆ ಕರ್ನಾಟಕದ ಬಗ್ಗೆ ವಿಶ್ಲೇಷಣೆ ಮಾಡುತ್ತಾರೆ. ಅವಶ್ಯಕತೆ ಇದ್ದರೆ ಅವರೇ ಬದಲಾವಣೆ ಮಾಡುತ್ತಾರೆ. ಡಿಕೆ ಶಿವಕುಮಾರ್ ಅವರ ಬಗ್ಗೆ ಹೇಳುವುದಕ್ಕೆ ನನಗೆ ಸಾಮರ್ಥ್ಯ ಇಲ್ಲ. ಅವರು ನಮ್ಮ ನಾಯಕರು, ಅಧ್ಯಕ್ಷರು ಮತ್ತು ಸಮರ್ಥರಿದ್ದಾರೆ. ಶಿವಕುಮಾರ್ ಅವರಿಗೆ ಕಂಪೇರ್ ಮಾಡುವುದಕ್ಕೆ ಯಾರಿದ್ದಾರೆ ಈಗ..? ಅಷ್ಟು ಅವರಿಗೆ ಸಾಮರ್ಥ್ಯವಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಮೊದಲೇ ನವೆಂಬರ್ ಕ್ರಾಂತಿಯ ಬಗ್ಗೆ ಜೋರು ಚರ್ಚೆಯಾಗುತ್ತಿದೆ. ಅಧಿಕಾರ ಹಸ್ತಾಂತರ, ನವೆಂಬರ್ ಕ್ರಾಂತಿ, ಸಚಿವ ಸಂಪುಟ ಪುನರ್ ರಚನೆ ಈ ಎಲ್ಲಾ ಗೊಂದಲಗಳ ನಡುವೆ ರಾಹುಲ್ ಗಾಂಧಿ ನವೆಂಬರ್ 20ಕ್ಕೆ ರಾಜ್ಯಕ್ಕೆ ಬರ್ತಾ ಇದ್ದಾರೆ. ಈ ಎಲ್ಲದರ ಬಗ್ಗೆಯೂ ಚರ್ವೆಯಾಗುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಅವರ ಮೊದಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ಭೇಟಿಗೆ ತಲುಪಿದ್ದು, ಏನೆಲ್ಕಾ ಬೆಳವಣಿಗೆಯಾಗಬಹುದು ಎಂಬ ಕುತೂಹಲ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...