Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೋಷಕರ ಮನವಿ : ರಾಜ್ಯದ ಶಾಲೆಗಳಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ?

---Advertisement---

2026-27ನೇ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿ ಪ್ರವೇಶಕ್ಕೆ ನಿಗದಿಪಡಿಸಲಾದ ಕನಿಷ್ಠ ವಯೋಮಿತಿಯನ್ನು ಸಡಿಲಿಸುವಂತೆ ಕೋರಿ ಪೋಷಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

ಸುಮಾರು 2.30 ಲಕ್ಷಕ್ಕೂ ಹೆಚ್ಚು ಮಕ್ಕಳು ಕೇವಲ ಕೆಲವೇ ದಿನಗಳ ಅಂತರದಲ್ಲಿ 6 ವರ್ಷ ಪೂರೈಸಲು ಸಾಧ್ಯವಾಗದೆ ಪ್ರವೇಶದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ಮಕ್ಕಳ ಶೈಕ್ಷಣಿಕ ವರ್ಷ ವ್ಯರ್ಥವಾಗುವ ಆತಂಕದಲ್ಲಿ ಪೋಷಕರಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೂ ಪೋಷಕರು ಮನವಿ ಮಾಡಿದ್ದಾರೆ.

ಕಳೆದ ವರ್ಷವೂ ಇದೇ ರೀತಿಯ ಸಮಸ್ಯೆ ಎದುರಾದಾಗ ಸರ್ಕಾರವು ಮಧ್ಯಪ್ರವೇಶಿಸಿ ವಯೋಮಿತಿಯನ್ನು 5 ವರ್ಷ 5 ತಿಂಗಳಿಗೆ ಇಳಿಸಿ ರಿಯಾಯಿತಿ ನೀಡಿತ್ತು. ಆದರೆ, ಈ ನಿರ್ಧಾರವು ಕೇವಲ 2025-26ನೇ ಸಾಲಿಗೆ ಮಾತ್ರ ಸೀಮಿತ ಎಂದು ಸಚಿವರು ಈ ಹಿಂದೆಯೇ ಸ್ಪಷ್ಟಪಡಿಸಿದ್ದರು.

ಪ್ರಸ್ತುತ ಜಾರಿಯಲ್ಲಿರುವ ನಿಯಮದಂತೆ, 2026-27ನೇ ಸಾಲಿನಲ್ಲಿ ಒಂದನೇ ತರಗತಿಗೆ ಸೇರುವ ಮಗುವು ಜೂನ್ 1ಕ್ಕೆ ಕಡ್ಡಾಯವಾಗಿ 6 ವರ್ಷ ಪೂರೈಸಿರಬೇಕು. 2020ರ ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಅನ್ವಯ ಈ ಕೆಳಗಿನಂತೆ ವಯೋಮಿತಿ ನಿಗದಿಯಾಗಿದೆ:
ಎಲ್‌ಕೆಜಿ: 4 ವರ್ಷ
ಯುಕೆಜಿ: 5 ವರ್ಷ
1ನೇ ತರಗತಿ: 6 ವರ್ಷ

ಪ್ರಸ್ತುತ ನಿಯಮದಿಂದಾಗಿ ಲಕ್ಷಾಂತರ ಮಕ್ಕಳ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ. ಆದ್ದರಿಂದ, ಈ ವರ್ಷವೂ ಕನಿಷ್ಠ ಮೂರು ತಿಂಗಳ ವಯೋಮಿತಿ ಸಡಿಲಿಕೆ ನೀಡಬೇಕು ಎಂದು ಪೋಷಕರ ನಿಯೋಗವು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now