Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೋಷಕರು ಮಕ್ಕಳ ಆಸಕ್ತಿಗನುಗುಣವಾಗಿ ಶಿಕ್ಷಣಕ್ಕೆ ಪ್ರಾತಿನಿಧ್ಯವನ್ನು ನೀಡಿ : ಶ್ರೀಮತಿ ಗಿರಿಜಮ್ಮ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817

ಚಿತ್ರದುರ್ಗ(ಮೇ.18) :  ಪೋಷಕರು ತಮ್ಮ ಮಕ್ಕಳ ಮುಂದಿನ ವಿದ್ಯಾಭ್ಯಾಸದಲ್ಲಿ ಅವರು ಆಸಕ್ತಿಯನ್ನು ಹೊಂದಿರುವ ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿ ನಿಮ್ಮ ಒತ್ತಾಯವನ್ನು ಮಕ್ಕಳ ಮೇಲೆ ಹೇರಬೇಡಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಗಿರಿಜಮ್ಮ ಪೋಷಕರಲ್ಲಿ ಮನವಿ ಮಾಡಿದರು.

ನಗರದ ರೋಟರಿಕ್ಲಬ್ ಆಶ್ರಯದಲ್ಲಿ ಬುಧವಾರ ಸಂಜೆ ರೋಟರಿ ಬಾಲಭವನದಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನ ನೇರವೇರಿಸಿ ಮಾತನಾಡಿದ ಅವರು, ಪರೀಕ್ಷೆಯಲ್ಲಿ ಪಾಸಾಗುವುದು ಸಾಮಾನ್ಯ ಅದರೆ ಅತಿ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾಗುವುದು ಕಷ್ಟದ ಕೆಲಸವಾಗಿದೆ ಇದನ್ನು ನಮ್ಮ ವಿದ್ಯಾರ್ಥಿಗಳು ಮಾಡಿದ್ದಾರೆ.

ಪ್ರತಿಭೆಗೆ ತಕ್ಕ ಪ್ರೋತ್ಸಾಹ ಸಿಕ್ಕಾಗ ಅವರು ಮತ್ತಷ್ಟು ಮುಂದುವರೆಯಲು ಪ್ರೇರಣೆಯಾಗುತ್ತದೆ. ಈ ರೀತಿಯ ಕಾರ್ಯಕ್ರಮದ ಮೂಲಕ ಅವರಿಗೆ ಸ್ಪೂರ್ತಿಯನ್ನು ತುಂಬುವ ಕಾರ್ಯವನ್ನು ರೋಟರಿಕ್ಲಬ್ ಮಾಡುತ್ತದೆ ಎಂದು ಕಾರ್ಯವನ್ನು ಶ್ಲಾಘಿಸಿದರು.

ವಿದ್ಯಾರ್ಥಿಗಳು ಈ ಭಾರಿಯ ಪರೀಕ್ಷೆಯಲ್ಲಿ ಉತ್ತಮವಾದ ಅಂಕಗಳನ್ನು ಪಡೆಯವುದರ ಮೂಲಕ ಚಿತ್ರದುರ್ಗ ಜಿಲ್ಲೆಯನ್ನು ರಾಜ್ಯದಲ್ಲಿಯೇ ಪ್ರಥಮ ಸ್ಥಾನಕ್ಕೆ ಕೊಂಡ್ಯೂದಿದ್ದಾರೆ.ಇದರಿಂದ ತಾವು ಓದಿದ ಶಾಲೆ ಮತ್ತು ಪೋಷಕರಿಗೆ ಕೀರ್ತಿಯನ್ನು ತಂದಿದ್ದಾರೆ. ಇದರಿಂದ ಪೋಷಕರಿಗೂ ಶಿಕ್ಷಕರಿಗೂ ಸಂತಸವಾಗಿದೆ. ಮಕ್ಕಳಾದವರು ಪೋಷಕರ ಕನಸನ್ನು ನನಸು ಮಾಡುವತ್ತ ಹೆಜ್ಜೆ ಹಾಕಬೇಕಿದೆ. ಇದಕ್ಕೆ ತಂದೆ ತಾಯಿಯವರು ಸಹಾ ಮಾದರಿಯಾಗಬೇಕಿದೆ.

ಎಸ್.ಎಸ್.ಎಲ್.ಸಿ. ಎನ್ನುವುದು ದೂಡ್ಡ ಘಟ್ಟ ಇದ್ದಂತೆ ಇದರ ನಂತರ ಅವರ ಆಯ್ಕೆ ವಿಭಿನ್ನವಾಗಿರುತ್ತವೆ. ಇದರಲ್ಲಿ ಮಕ್ಕಳ ಆಸಕ್ತಿಎಗ ಅನುಗುಣವಾಗಿ ಪೋಷಕರು ಶಿಕ್ಷಣವನ್ನು ಕೂಡಿಸುವಂತಾಗಬೇಕಿದೆ ಇಲ್ಲಿ ಪೋಷಕರ ಒತ್ತಡವನ್ನು ಮಕ್ಕಳ ಮೇಲೆ ಹೇರುವುದು ಸರಿಯಲ್ಲ ಎಂದು ಗಿರಿಜಮ್ಮ ತಿಳಿಸಿದರು.

ಮಕ್ಕಳು ತಮ್ಮ  ಶಿಕ್ಷಣವನ್ನು ಇಷ್ಟಪಟ್ಟು ಕಲಿಯುವಂತಾದಾಗ ಉತ್ತಮವಾದ ಅಂಕಗಳು ಹೊರ ಬರಲು ಸಾಧ್ಯವಿದೆ, ಕಷ್ಟದಿಂದ ವಿದ್ಯಾಭ್ಯಾಸ ಮಾಡಿದಾಗ ಅಂಕಗಳಿಕೆಯಲ್ಲಿ ವ್ಯತ್ಯಾಸವಾಗುತ್ತದೆ. ಪೋಷಕರು ಮಕ್ಕಳನ್ನು ಬೆಳಸುವ ರೀತಿಯಲ್ಲಿ ಕುಂತಿಯಂತಾಗಬೇಕಿದೆ ಗಾಂಧಾರಿಯಂತೆ ಆಗಬಾರದು.  ಮಕ್ಕಳಿಗೆ ಉತ್ತಮವಾದ ಸಂಸ್ಕಾರವನ್ನು ಕಲಿಸಿ ದೇಶಕ್ಕೆ ಉತ್ತಮವಾದ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಪೋಷಕರು ಪಾತ್ರ ಅತಿ ಮುಖ್ಯವಾಗಿದೆ. ಇತ್ತೀಚಿನ ದಿನದಲ್ಲಿ ಮಕ್ಕಳು ಮೊಬೈಲ್ ಗೀಳಿಗೆ ಹೆಚ್ಚು ಬಲಿಯಾಗಿದ್ದಾರೆ ಇದರಿಂದ ಅಪಾಯ ಹೆಚ್ಚಾಗಿದೆ, ಇದರಿಂದ ಸಾಧ್ಯವಾದಷ್ಟು ದೂರ ಇರುವಂತೆ ನೋಡಿಕೊಳ್ಳಿ ಎಂದು ಕರೆ ನೀಡಿದರು.

ರೋಟರಿ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಮಾಧುರಿ ಮಧುಪ್ರಸಾದ್ ಮಾತನಾಡಿ, ಸಾಧನೆ ಎನ್ನುವುದು ಯಾರ ಸೋತ್ತಲ್ಲ, ಯಾರು ಪರಿಶ್ರಮದಿಂದ ಕೆಲಸವನ್ನು ಮಾಡುತ್ತಾರೋ ಅವರಿಗೆ ಒಲಿಯುತ್ತದೆ. ಚಿತ್ರದುರ್ಗ ಜಿಲ್ಲೆ ಈ ಬಾರಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಗಳಿಸಿದ್ದಕ್ಕೆ ಎಲ್ಲಾ ಶಿಕ್ಷಣ ಮಂಡಳಿಯವರಿಗೂ ಶಿಕ್ಷಕರಿಗೂ ಮತ್ತು ವಿದ್ಯಾರ್ಥಿಗಳಿಗೂ ಸಹಾ ಆಭೀನಂದನೆಯನ್ನು ಸಲ್ಲಿಸಿ, ಮುಂದಿನ  ದಿನದಲ್ಲಿಯೂ ಸಹಾ ಈ ಸ್ಥಾನವನ್ನು ಬಿಟ್ಟಿಕೂಡದೇ ಮುಂದುವರೆಯಬೇಕಿದೆ ಎಂದು ಶುಭ ಹಾರೈಸಿದರು.

ಚಿತ್ರದುರ್ಗದಲ್ಲಿ ಆಶಾಕಿರಣ ಎಂಬ ಸಂಸ್ಥೆ ಕೆಲಸ ಮಾಡುತ್ತಿದ್ದು ಓದುವ ಹಂಬಲ ಇದ್ದು ಮನೆಯಲ್ಲಿ ಆರ್ಥಿಕ ಪರಿಸ್ಥಿತಿ ಸರಿಯಿಲ್ಲದವರಿಗೆ ಈ ಸಂಸ್ಥೆ ನೆರವಾಗಲಿದೆ, ಇದರ ಪ್ರಯೋಜನದಿಂದ ನಿಮ್ಮ ಮುಂದಿನ ಶಿಕ್ಷಣವನ್ನು ಪಡೆಯಬಹುದಾಗಿದೆ ಈಗಾಗಲೇ ಕಳೆದ 10 ವರ್ಷದಿಂದ ಈ ಸಂಸ್ಥೆ ಕೆಲಸ ಮಾಡುತ್ತಿದ್ದು, 800ಕ್ಕೂ ಹೆಚ್ಚು ಮಕ್ಕಳಿಗೆ ನೆರವಾಗಿದೆ ಎಂದರು.

ಕ್ಲಬ್ ನ ಕಾರ್ಯದರ್ಶೀಗಳಾದ ಶ್ರೀಮತಿ ಜಯಶ್ರೀ ಷಾ ಮಾತನಾಡಿ, ತಮ್ಮ ವಾರದ ವರದಿಯನ್ನು ವಾಚನ ಮಾಡಿ, ಈ ತಿಂಗಳ ಕೊನೆಯ ಅಥವಾ ಮುಂದಿನ ತಿಂಗಳ ಮೊದಲನೇ ವಾರದಲ್ಲಿ ಕ್ಯಾನ್ಸರ್ ಬಗ್ಗೆ ಜನ ಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಜುಲೈನಲ್ಲಿ ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಲಿದೆ ಎಂದರು.

ಇದೇ ಸಂದರ್ಭದಲ್ಲಿ ರೋಟೇರಿ ಕ್ಲಬ್‍ನಲ್ಲಿ ಉತ್ತಮವಾದ ಕೆಲಸವನ್ನು ಮಾಡಿದ ಶಿವರಾಂರವರನ್ನು ಸನ್ಮಾನಿಸಲಾಯಿತು, ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ 625ಕ್ಕೆ 623 ಅಂಕಗಳನ್ನು ಗಳಿಸಿ ಜಿಲ್ಲೆಗೆ ಪ್ರಥಮ ರಾಜ್ಯಕ್ಕೆ ಮೂರನೇ ಸ್ಥಾನವನ್ನು ಪಡೆದ ದಯಾನಿಧಿಯನ್ನು ಸೇರಿದಂತೆ ಅತಿ ಹೆಚ್ಚು ಅಂಕವನ್ನುಗಳಿಸಿದ 13 ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!