Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಕಾಶವಾಣಿಯಲ್ಲಿ ಅರೆಕಾಲಿಕ ವರದಿಗಾರರ ಹುದ್ದೆ: ಅರ್ಜಿ ಆಹ್ವಾನ

Facebook
Twitter
Telegram
WhatsApp

ಬಳ್ಳಾರಿ,(ಮೇ.25):  ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು, ಶಿವಮೊಗ್ಗ, ಹಾಸನ, ವಿಜಯನಗರ, ದಕ್ಷಿಣಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅರೆಕಾಲಿಕ ವರದಿಗಾರರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಎಂದು ಆಲ್ ಇಂಡಿಯಾ ರೇಡಿಯೋದ ಉಪ ನಿರ್ದೇಶಕರಾದ ಟಿ.ಬಿ.ನಂಜುಂಡಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹತೆಗಳು: ಪಿ.ಜಿ ಡಿಪ್ಲೋಮಾ/ಪತ್ರಿಕೋದ್ಯಮ ಸಮೂಹ ಮಾಧ್ಯಮದಲ್ಲಿ ಪದವಿ ಹಾಗೂ ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಹೊಂದಿರಬೇಕು.

24 ರಿಂದ 45 ವರ್ಷ (ಜಾಹಿರಾತು ಪ್ರಕಟಣೆಯ ದಿನಾಂಕಕ್ಕೆ ಅನ್ವಯಿಸುವಂತೆ) ಹೊಂದಿರಬೇಕು. ಅಭ್ಯರ್ಥಿಗಳು ಜಿಲ್ಲಾ ಮುಖ್ಯ ಕೇಂದ್ರದಲ್ಲಿ ಅಥವಾ ಜಿಲ್ಲೆಯ ಜಿಲ್ಲಾ ಮುಖ್ಯ ಕೇಂದ್ರ ಪುರಸಭೆ ವ್ಯಾಪ್ತಿಯ 10 ಕಿಲೋಮೀಟರ್ ಅಸುಪಾಸಿನ ಪ್ರದೇಶದಲ್ಲಿ ನೆಲೆಸಿರಬೇಕು.

ಅಪೇಕ್ಷಣೀಯ: ಕಂಪ್ಯೂಟರ್ ಮತ್ತು ವರ್ಡ್ ಪ್ರಾಸೆಸಿಂಗ್ ತಿಳಿವಳಿಕೆ ಇರಬೇಕು. ಸುದ್ದಿ ಸಂಗ್ರಹ ಉಪಕರಣಗಳನ್ನು ಹೊಂದಿರಬೇಕು. ವಿದ್ಯುನ್ಮಾನ ಮಾಧ್ಯಮಕ್ಕೆ ವರದಿಗಾರಿಕೆಯಲ್ಲಿ ಅನುಭವವಿರಬೇಕು. ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಆದ್ಯತೆ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಪೂರ್ಣ ವಿವರಗಳು, ಅಗತ್ಯ ದಾಖಲಾತಿಗಳ ಪ್ರತಿಗಳು ಹಾಗೂ ಅರ್ಜಿ ಶುಲ್ಕದ ಬ್ಯಾಂಕ್ ಡ್ರಾಫ್ಟ್‍ನ್ನು ಒಳಗೊಂಡ ಅರ್ಜಿಗಳನ್ನು, ರಿಜಿಸ್ಟರ್ಡ್ ಅಂಚೆ ಮೂಲಕ ಅಥವಾ ಖುದ್ದಾಗಿ ಜೂ.10ರೊಳಗೆ ತಲುಪುವಂತೆ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ: The Deputy Director General (E) & HOO) Attn: Regional News Unit, All India Radio, Raj Bhavan Road, Bengaluru 560 001.

ಹೆಚ್ಚಿನ ಮಾಹಿತಿಗೆ ಮೊ.8317466729, 9448159726, 9482169168 ಹಾಗೂ ದೂ.080-22356344/22373000 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!