Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ – ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 01 : ಕಡಿಮೆ ಪ್ರಯಾಣಿಕರ ಸಂಖ್ಯೆಯಿಂದಾಗಿ, ನೈಋತ್ಯ ರೈಲ್ವೆಯು ರೈಲು ಸಂಖ್ಯೆ 17347/17348 ಎಸ್ಎಸ್ಎಸ್ ಹುಬ್ಬಳ್ಳಿ – ಚಿತ್ರದುರ್ಗ – ಎಸ್ಎಸ್ಎಸ್ ಹುಬ್ಬಳ್ಳಿ ದೈನಂದಿನ ಕಾಯ್ದಿರಿಸದ ಎಕ್ಸ್ ಪ್ರೆಸ್ ರೈಲುಗಳ ಚಿಕ್ಕಜಾಜೂರು ಮತ್ತು ಚಿತ್ರದುರ್ಗ ನಡುವಿನ ಭಾಗಶಃ ರದ್ದತಿಯನ್ನು ವಿಸ್ತರಿಸಿದೆ.

ಈ ಹಿಂದೆ ಜೂನ್ 30, 2025 ರವರೆಗೆ ಸೂಚಿಸಲಾಗಿದ್ದ ಈ ಭಾಗಶಃ ರದ್ದತಿಯು, ಈಗ ಜುಲೈ 2 ರಿಂದ ಡಿಸೆಂಬರ್ 31, 2025ರವರೆಗೆ ಜಾರಿಯಲ್ಲಿರುತ್ತದೆ. ಇದರನ್ವಯ, ರೈಲು ಸಂಖ್ಯೆ 17347 ಎಸ್ಎಸ್ಎಸ್ ಹುಬ್ಬಳ್ಳಿ – ಚಿತ್ರದುರ್ಗ ದೈನಂದಿನ ಕಾಯ್ದಿರಿಸದ ಎಕ್ಸ್ ಪ್ರೆಸ್ ರೈಲು ಚಿತ್ರದುರ್ಗದ ಬದಲು ಚಿಕ್ಕಜಾಜೂರಿನಲ್ಲಿ ತನ್ನ ಸೇವೆಯನ್ನು ಕೊನೆಗೊಳಿಸಲಿದೆ. ಅದೇ ರೀತಿ, ರೈಲು ಸಂಖ್ಯೆ 17348 ಚಿತ್ರದುರ್ಗ – ಎಸ್ಎಸ್ಎಸ್ ಹುಬ್ಬಳ್ಳಿ ದೈನಂದಿನ ಕಾಯ್ದಿರಿಸದ ಎಕ್ಸ್ ಪ್ರೆಸ್ ರೈಲು ಈಗ ಚಿತ್ರದುರ್ಗದ ಬದಲು ಚಿಕ್ಕಜಾಜೂರಿನಿಂದ ಹೊರಡಲಿದೆ.

ಈ ಅವಧಿಯಲ್ಲಿ ಚಿತ್ರದುರ್ಗ ಮತ್ತು ಚಿಕ್ಕಜಾಜೂರು ನಡುವಿನ ರೈಲು ಸೇವೆಗಳು ಭಾಗಶಃ ರದ್ದುಗೊಂಡಿರುತ್ತವೆ ಎಂದು ಹುಬ್ಬಳ್ಳಿ ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ್ ಕನಮಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...