in ,

ಕ್ರೀಡಾ ಸ್ಪೂರ್ತಿಯೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಿ: ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ

suddione whatsapp group join

 

ಚಿತ್ರದುರ್ಗ, (ಏ.22) : ಸೋಲು-ಗೆಲವುಗಳ ಲೆಕ್ಕಾಚಾರವಿಲ್ಲದೆ ಕ್ರೀಡಾ ಸ್ಫೂರ್ತಿಯೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಸರ್ಕಾರಿ ನೌಕರರಿಗೆ ಸಲಹೆ ನೀಡಿದರು.

ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಕಚೇರಿ ಕೆಲಸಗಳನ್ನು ಸ್ವಲ್ಪಕಾಲ ಮರೆತು ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಸರ್ಕಾರಿ ನೌಕರರಿಗೆ ಉತ್ತಮ ಅವಕಾಶ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ ಮಾತನಾಡಿ, ಕಳೆದ ವರ್ಷ ಜಿಲ್ಲೆಯ ಹಲವು ನೌಕರರು ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಈ ವರ್ಷವೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿ ಜಿಲ್ಲೆಗೆ ಹೆಸರು ತರಬೇಕು ಎಂದರು.

ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ 100.ಮೀ ಓಟದ ಸ್ಪರ್ಧೆಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಆರ್. ಚಂದ್ರಯ್ಯ, ತಹಶೀಲ್ದಾರ್ ಸತ್ಯನಾರಾಯಣ, ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್, ತಾಲ್ಲೂಕು ಮಟ್ಟದ ಅಧ್ಯಕ್ಷರಾದ ಲೋಕೇಶ್, ಜಗನ್ನಾಥ ಡಿ.ಟಿ, ಕೆ.ಈರಣ್ಣ, ಶಿವಕುಮಾರ್, ಶಶಿಧರ ಉಪಸ್ಥಿತರಿದ್ದರು.

What do you think?

Written by suddionenews

Leave a Reply

Your email address will not be published.

GIPHY App Key not set. Please check settings

ಸರ್ಕಾರಿ ನೌಕರರು ಅಧಿಕ ಕೆಲಸ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ : ಕೆ.ಮಂಜುನಾಥ್

ಹುಬ್ಬಳ್ಳಿ ಪ್ರಕರಣ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಬಜರಂಗದಳ ಒತ್ತಾಯ