ಚಿತ್ರದುರ್ಗ,(ನ.11) : ನಗರದ ಬಿ.ವಿ.ಕೆ.ಎಸ್. ಲೇಔಟ್ ನಿವಾಸಿ ಶ್ರೀಮತಿ ಪಾರ್ವತಮ್ಮ ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ನಗರದ ಮರ್ಚೆಂಟ್ಸ್ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್. ಮಲ್ಲಿಕಾರ್ಜುನ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು, ಅಪಾರ ಬಂಧು-ಬಳಗ ಬಿಟ್ಟು ಅಗಲಿದ್ದಾರೆ.
ಅಂತ್ಯಕ್ರಿಯೆ : ಮೃತರ ಅಂತ್ಯಕ್ರಿಯೆ ಶುಕ್ರವಾರ ಸಂಜೆ ವೇಳೆಗೆ ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ವೀರಶೈವ ವಿಧಿ ವಿಧಾನಗಳಂತೆ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಮೃತರ ಕುಟುಂಬ ಮೂಲಗಳು ತಿಳಿಸಿವೆ.
ವಿದೇಶದಲ್ಲಿ ಸಂತಾಪ : ಮೃತ ಪಾರ್ವತಮ್ಮ ಅವರ ನಿಧನಕ್ಕೆ ಮಲ್ಲಿಕಾರ್ಜುನ ಅವರ ಮಿತ್ರ ವೃಂದ ದುಬೈ ಪ್ರವಾಸದಲ್ಲಿದ್ದು, ಅಲ್ಲಿಯೇ ಎರಡು ನಿಮಿಷ ಮೌನಾಚರಣೆ ಮಾಡುವ ಮೂಲಕ ಪಾರ್ವತಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.