ಸುದ್ದಿಒನ್, ಏಪ್ರಿಲ್. 18 : ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿದ್ದಕ್ಕಾಗಿ ದಾವೂದಿ ಬೋಹ್ರಾ ಸಮುದಾಯದ ನಿಯೋಗವು ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿತು.
ಗುರುವಾರ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ತಂಡದ ಸದಸ್ಯರು ಈ ಹೊಸ ಕಾನೂನಿನ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಇದು ತಮ್ಮ ಸಮುದಾಯದ ಪರವಾಗಿ ಬಹಳ ಹಿಂದಿನಿಂದಲೂ ಬಾಕಿ ಇರುವ ಬೇಡಿಕೆಯಾಗಿದೆ ಎಂದು ಅವರು ಹೇಳಿದರು. ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್, ಸಬ್‌ಕಾ ವಿಶ್ವಾಸ್ ಎಂಬ ಪ್ರಧಾನಿಯವರ ದೂರದೃಷ್ಟಿಯಲ್ಲಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ದೇಶಾದ್ಯಂತ ಮುಸ್ಲಿಮರು ವಕ್ಫ್ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸುತ್ತಿದ್ದರೆ, ದಾವೂದಿ ಬೊಹ್ರಾ ಸಮುದಾಯವು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸುವುದು ಗಮನಾರ್ಹವಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















