Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀಮತಿ ಚೆನ್ನಮ್ಮ ದೇವೇಗೌಡ ನಿಧನ : ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತೀವ್ರ ಸಂತಾಪ  

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜು. 19 : ಭಾರತದ ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ  ಎಚ್.ಡಿ. ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮನವರ ನಿಧನಕ್ಕೆ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠದ ಪೀಠಾಧಿಪತಿ ಗಳಾದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ.

“ಗ್ರಾಮೀಣ ಹಿನ್ನೆಲೆಯಿಂದ ಬಂದು, ಭಾರತೀಯ ಸಂಸ್ಕೃತಿ ಮತ್ತು ಸಂಸ್ಕಾರದ ಉದಾತ್ತ ಮೌಲ್ಯಗಳನ್ನು ಬದುಕಿನುದ್ದಕ್ಕೂ ಪಾಲಿಸಿಕೊಂಡು ಬಂದಿದ್ದ ಶ್ರೀಮತಿ ಚೆನ್ನಮ್ಮನವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ. ಸರಳತೆ, ಸಜ್ಜನಿಕೆ ಹಾಗೂ ಅಪಾರ ಸಹನೆಯ ಸಾಕಾರ ಮೂರ್ತಿಯಾಗಿದ್ದ ಅವರು, ನಾಡಿನ ಜನರ ಗೌರವದ ಮಾತೃಶ್ರೀಯಾಗಿದ್ದರು. ದೇವರಲ್ಲಿ ಅಚಲ ನಂಬಿಕೆ ಮತ್ತು ಧಾರ್ಮಿಕ ಶ್ರದ್ಧೆಯನ್ನು ಹೊಂದಿದ್ದ ಅವರ ಬದುಕು ಇತರರಿಗೆ ಮಾದರಿಯಾಗಿತ್ತು.

ಎಚ್.ಡಿ. ದೇವೇಗೌಡರ ಸುದೀರ್ಘ ರಾಜಕೀಯ ಹೋರಾಟದ ಪ್ರತಿಯೊಂದು ಏಳು-ಬೀಳುಗಳಲ್ಲಿ ಬೆನ್ನೆಲುಬಾಗಿ ನಿಂತು, ಅವರು ದೇಶದ ಅತ್ಯುನ್ನತ `ಪ್ರಧಾನಮಂತ್ರಿ’ ಹುದ್ದೆಯವರೆಗೆ ಏರಲು ಶ್ರೀಮತಿ ಚೆನ್ನಮ್ಮನವರು ನೀಡಿದ ಬೆಂಬಲ ಮತ್ತು ತ್ಯಾಗ ಅವಿಸ್ಮರಣೀಯವಾದುದು. ಅಧಿಕಾರ ಎನ್ನುವುದು ಗಂಡ, ಮಕ್ಕಳು, ಅಳಿಯಂದಿರು ಹಾಗೂ ಸೊಸೆ-ಮಕ್ಕಳ ಕರಕಮಲದಲ್ಲಿದ್ದರೂ, ಅಹಂಕಾರ ಎನ್ನುವ ಲವಲೇಶವೂ ತಮ್ಮ ಸುತ್ತ ಇರದಂತೆ ಬದುಕಿ, ಸರಳತೆಗೆ ಹಾಗೂ ಸಹಜತೆಗೆ ಸಾಂಕೇತಿಕ ರೂಪವಾಗಿದ್ದರು ಆ ಮಾತೃಶ್ರೀಯವರು. ಇಡೀ ಕುಟುಂಬವನ್ನು ಪ್ರೀತಿ-ವಾತ್ಸಲ್ಯದಿಂದ ಒಗ್ಗೂಡಿಸಿಕೊಂಡು ಮುನ್ನಡೆಸಿದ ಅವರ ಮಾತೃತ್ವ ಅನನ್ಯವಾದುದು.

ಭಗವಂತನು ದಿವಂಗತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ. ಹೆಮ್ಮರವಾಗಿದ್ದ ತಾಯಿಯನ್ನು ಕಳೆದುಕೊಂಡು ದುಃಖದಲ್ಲಿರುವ ಸನ್ಮಾನ್ಯ ಶ್ರೀ ಎಚ್.ಡಿ. ದೇವೇಗೌಡರಿಗೆ, ಅವರ ಇಡೀ ಕುಟುಂಬದ ಸದಸ್ಯರಿಗೆ ಹಾಗೂ ಅಸಂಖ್ಯಾತ ಅಭಿಮಾನಿ ಬಳಗಕ್ಕೆ ಈ ತೀವ್ರ ಶೋಕವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಜಗದ್ಗುರು ಸಿದ್ಧರಾಮೇಶ್ವರರಲ್ಲಿ ಪ್ರಾರ್ಥಿಸುತ್ತೇವೆ” ಎಂದು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now