Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೂನ್ 09 ರಂದು ದೇಶಭಕ್ತಿಗೀತೆಗಳ ಗಾಯನ ತರಬೇತಿ ಕಾರ್ಯಕ್ರಮ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜೂನ್‌. 06 : ನಗರದ ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಕಾರ್ಯಾಗಾರ 2026-27 ಅಂಗವಾಗಿ ವಿದ್ಯಾರ್ಥಿಗಳಿಗೆ ನಾಡಗೀತೆ, ರೈತಗೀತೆ, ರಾಷ್ಟ್ರಗೀತೆ ಮತ್ತು ರಾಷ್ಟ್ರೀಯಗೀತೆ ವಂದೇ ಮಾತರಂ ಮತ್ತು ವಿವಿಧ ದೇಶಭಕ್ತಿಗೀತೆಗಳ ಗಾಯನ ತರಬೇತಿ ಕಾರ್ಯಕ್ರಮವನ್ನು ಜೂನ್ 09 ರಂದು ಮಂಗಳವಾರ ಬೆಳಿಗ್ಗೆ 10-30ಕ್ಕೆ ನಗರ ಸಮೀಪವಿರುವ ಇಂಗಳದಾಳ್ ಗ್ರಾಮದ ತಳವಾರ ಸಂಚಲಪ್ಪ ನಾಯಕರ ಪ್ರೌಢಶಾಲಾ ಆವರಣದಲ್ಲಿ ಏರ್ಪಡಿಸಲಾಗಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಸ್.ಕೆ.ಮಲ್ಲಿಕಾರ್ಜುನ್ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮುಖ್ಯಶಿಕ್ಷಕ ಜಿ.ಪಿ.ಆನಂದಕುಮಾರ್, ಸಹಶಿಕ್ಷಕರಾದ ಜಿ.ವಿ.ತೇಜಸ್ವಿ, ಆರ್.ರುದ್ರಸ್ವಾಮಿ, ಎಂ.ರಂಗನಾಥ್, ಹೆಚ್.ಧನಂಜಯಪ್ಪ, ಎಸ್.ಮಂಜುನಾಥ್, ಯೋಗಶಿಕ್ಷಕ ಎಂ.ಬಿ.ಮುರುಳಿ ಹಾಗೂ ರಂಗ ಸಂಘಟಕ ಪ್ರಕಾಶ್ ಬಾದರದಿನ್ನಿ ಉಪಸ್ಥಿತರಿರುವರು.

ನೀನಾಸಂ ಪದವೀಧರ ಹಾಗೂ ರಂಗನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ರಾಷ್ಟ್ರೀಯ ಭಾವೈಕ್ಯತಾ ಕಾರ್ಯಾಗಾರ ತರಬೇತಿಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತಳವಾರ ಸಂಚಲಪ್ಪ ನಾಯಕರ ಪ್ರೌಢಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸರ್ಕಾರ ನಿಗಧಿಪಡಿಸಿದ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಮತ್ತು ರೈತಗೀತೆ, ರವೀಂದ್ರನಾಥ ಠ್ಯಾಗೋರ್ ರಚಿಸಿದ ರಾಷ್ಟ್ರಗೀತೆ ಮತ್ತು ಬಂಕಿಮಚಂದ್ರ ಚಟರ್ಜಿ ವಿರಚಿತ ರಾಷ್ಟ್ರೀಯಗೀತೆ ವಂದೇಮಾತರಂ ಮತ್ತು ವರಕವಿ ದ.ರಾ.ಬೇಂದ್ರೆ ವಿರಚಿತ ಬಟ್ಟಯಲ್ಲ ಬಣ್ಣವಲ್ಲ ಬೆಳಕಿನ ಈಟಿ ಮುಂತಾದ ದೇಶಭಕ್ತಿಗೀತೆಗಳ ಸಂಗೀತ ಸಂಯೋಜನೆಯ ಧ್ವನಿಮುದ್ರಿತ ಪ್ರಾಯೋಗಿಕವಾಗಿ ತರಬೇತಿಯನ್ನು ನೀಡಲಿದ್ದಾರೆ ಎಂದು ಸಂಘದ ಅಧ್ಯಕ್ಷ ಡಾ.ಕೆ.ಮೋಹನ್‍ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now