ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೈಲು ಪಾಲಾಗಿರುವ ಪವಿತ್ರಾ ಗೌಡ, ಜಾಮೀನು ಅರ್ಜಿ ಇಂದು ವಜಾಗೊಂಡಿದೆ. 57ನೇ ಸೆಷನ್ಸ್ ನ್ಯಾಯಾಲಯ ಅರ್ಜಿ ವಿಚಾರಣೆಯನ್ನ ನಡೆಸಿತ್ತು. ಪವಿತ್ರಾ ಗೌಡ, ಜಾಮೀನಿಗಾಗಿ ಸಂಗಲ್ ಪೇರೆಂಟ್ ಕಾರಣವನ್ನ ನೀಡಿದ್ದರು. ಮಗಳನ್ನ ನಾನೇ ನೋಡಿಕೊಳ್ಳಬೇಕು ಎಂದಿದ್ದರು. ಆದರೆ ಕೋರ್ಟ್ ಜಾಮೀನು ನಿರಾಕರಣೆ ಮಾಡಿದೆ.
ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ರದ್ದಾಗದಂತೆ ಪ್ರಯತ್ನ ಪಟ್ಟಾಗಲು ಇದೇ ಕಾರಣ ಹೇಳಿದ್ದರು. ಮಗಳನ್ನ ನೋಡಿಕೊಳ್ಳಬೇಕು, ವಯಸ್ಸಾದ ತಂದೆ ತಾಯಿ ಇದ್ದಾರೆ ಎಂಬ ಕಾರಣ ಹೇಳಿದ್ದರು. ಆದರೂ ಸುಪ್ರೀಂ ಕೋರ್ಟ್ ನಿಂದ ಜಾಮೀನು ರದ್ದಾಗಿತ್ತು. ಇದೀಗ ಬೆಂಗಳೂರಿನ ಸೆಷನ್ಸ್ ಕೋರ್ಟ್ ನಲ್ಲೂ ಅದೇ ಆಗಿದೆ.
ಪವಿತ್ರಾ ಗೌಡ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದಾರೆ. ಮೊದಲ ಬಾರಿಗೆ ಅರೆಸ್ಟ್ ಆಗಿದ್ದಾಗ ಹೈಕೋರ್ಟ್ ಮೂಲಕ ಜಾಮೀನು ಪಡೆದುಕೊಂಡಿದ್ದರು. ಬಳಿಕ ರಾಜ್ಯ ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ ಬಳಿಕ ಏಳು ಆರೋಪಿಗಳ ಜಾಮೀನನ್ನು ರದ್ದು ಮಾಡಿತ್ತು. ಸದ್ಯ ಏಳು ಜನ ಆರೋಪಿಗಳು ಜೈಲಿನಲ್ಲಿದ್ದಾರೆ.
ಇಂದು ದರ್ಶನ್ ಅವರಿಗೆ ಸಂಬಂಧ ಪಟ್ಟಂತೆ ವಿಚಾರಣೆ ಕೂಡ ನಡೆದಿದೆ. ಅವರಿಗೆ ಹಾಸಿಗೆ, ದಿಂಬಿನ ವ್ಯವಸ್ಥೆಯ ಬಗ್ಗೆಯೂ ಕೋರ್ಟ್ ನೀರ್ಧಾರ ಮಾಡಬೇಕಿದೆ. ಅಷ್ಟೇ ಅಲ್ಲ ದರ್ಶನ್ ಅವರನ್ನು ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಸಂಬಂಧ ಅರ್ಜಿಯನ್ನು ಸಲ್ಲಿಕೆ ಮಾಡಲಾಗಿತ್ತು. ಆ ಅರ್ಜಿಯ ವಿಚಾರಣೆ ಕೂಡ ನಡೆಯುತ್ತಿದೆ. ದರ್ಶನ್ ಇಲ್ಲಿಯೇ ಇರ್ತಾರಾ ಅಥವಾ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಿದ್ದಾರಾ ನೋಡಬೇಕಿದೆ.






