ಪವಿತ್ರಾ ಗೌಡಗೆ ಶಾಕ್ ನೀಡಿದ ಸುಪ್ರೀಂ ಕೋರ್ಟ್ : ಸಿಗಲಿಲ್ಲ ಜಾಮೀನು..!

1 Min Read

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಹಲವು ಆರೋಪಿಗಳನ್ನ ಎರಡನೇ ಬಾರಿಗೆ ಜೈಲಿಗೆ ಕಳುಹಿಸಲಾಗಿದೆ. ಈ ಮಧ್ಯೆ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಸುಪ್ರೀಂ ಕೋರ್ಟ್ ಗೆ ಜಾಮೀನಿಗಾಗಿ ಮನವಿ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ಅದಕ್ಕೆ ಸೊಪ್ಪು ಹಾಕಿಲ್ಲ.

ಸುಪ್ರೀಂ ಕೋರ್ಟ್ ಪವಿತ್ರಾ ಗೌಡ ಜಾಮೀನಿನ ವಿಚಾರಕ್ಕೆ ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರು. ಆದರೆ ಕೋರ್ಟ್ ಜಾಮೀನು ನೀಡುವುದಕ್ಕೆ ನಿರಾಕರಣೆ ಮಾಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೆಬಿ ಪರ್ದಿವಾಲ್ ಮತ್ತು ಆರ್.ಮಹಾದೇವನ್ ಅವರ ಪೀಠ ಪವಿತ್ರಾ ಗೌಎ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾ ಮಾಡಿದೆ.

ನಾವೂ ತೀರ್ಪು ಮತ್ತು ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ ಎಂದು ಹೇಳಿರುವ ದ್ವಿಸದಸ್ಯ ಪೀಠ ಎಲ್ಲವನ್ನೂ ಗಮನಿಸಿಯೇ ನಾವೂ ಆದೇಶ ನೀಡಿದ್ದೇವೆ ಎಂದು ಹೇಳಿದೆ. ಮತ್ತೊಮ್ಮೆ ಪರಿಶೀಲನೆ ನಡೆಸಿ ಆದೇಶ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಪವಿತ್ರಾ ಗೌಡಗೆ ಹೈಕೋರ್ಟ್ ಜಾಮೀನು ನೀಡಿತ್ತು. ಆದ್ರೆ ರಾಜ್ಯ ಪೊಲೀಸ್ ಇಲಾಖೆ ಈ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ನಲ್ಲಿ ವಾದ ಪ್ರತಿವಾದ ನಡೆದಿತ್ತು. ನನಗೆ ಒಬ್ಬಳು ಮಗಳಿದ್ದಾಳೆ. ನಾನು ಸಿಂಗಲ್ ಪೇರೆಂಟ್ ವಯಸ್ಸಾದ ತಂದೆ ತಾಯಿಯನ್ನ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ಪವಿತ್ರಾ ಗೌಡಗೆ ತರಾಟೆ ತೆಗೆದುಕೊಂಡು, ಜಾಮೀನನ್ನು ರದ್ದು ಮಾಡಿತ್ತು. ಇದೀಗ ಮತ್ತೆ ಪುನರ್ ಪರಿಶೀಲನಾ ಅರ್ಜಿಯನ್ನು ರದ್ದು ಮಾಡಿದೆ.

Share This Article
Enable Notifications OK No thanks