Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

13 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹೇಳಿದ `ಪವನ್ ಕಲ್ಯಾಣ್-ಅನ್ನಾ ಕೊನಿಡೇಲಾ’ ದಂಪತಿ; ವಿಚ್ಛೇದನದ ನಿರ್ಧಾರ ಪ್ರಕಟ!

Pawan Kalyan and Anna Konidela end their 13-year marriage; announce decision to divorce!
---Advertisement---

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ ಮತ್ತು ಅವರ ಪತ್ನಿ ಅನ್ನಾ ಕೊನಿಡೇಲ ಅವರು 13 ವರ್ಷಗಳ ದಾಂಪತ್ಯ ಜೀವನದ ನಂತರ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದಾರೆ.

ಪವನ್ ಕಲ್ಯಾಣ್ ಅವರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಡರಾತ್ರಿ ಜಂಟಿ ಹೇಳಿಕೆಯನ್ನು ಪ್ರಕಟಿಸಿರುವ ದಂಪತಿ, “ಪರಸ್ಪರ ಒಪ್ಪಿಗೆ ಮತ್ತು ಗೌರವ”ದೊಂದಿಗೆ ಈ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

“ನಮ್ಮ ವೈವಾಹಿಕ ಜೀವನ ಅಂತ್ಯಗೊಂಡಿದ್ದರೂ, ನಾವು ಉತ್ತಮ ಸ್ನೇಹಿತರಾಗಿ ಮತ್ತು ನಮ್ಮ ಮುದ್ದಾದ ಮಕ್ಕಳ ಜವಾಬ್ದಾರಿಯುತ ಪೋಷಕರಾಗಿ ಮುಂದುವರಿಯುತ್ತೇವೆ. ಮಕ್ಕಳ ಸಂತೋಷ ಮತ್ತು ಯೋಗಕ್ಷೇಮವು ಯಾವಾಗಲೂ ನಮ್ಮ ಆದ್ಯತೆಯಾಗಿರುತ್ತದೆ,” ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಈ ವೈಯಕ್ತಿಕ ಬದಲಾವಣೆಯ ಸಂದರ್ಭದಲ್ಲಿ ತಮ್ಮ ಖಾಸಗಿತನವನ್ನು ಗೌರವಿಸುವಂತೆ ಅವರು ಅಭಿಮಾನಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಇಷ್ಟು ದಿನ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ಇದು ಪವನ್ ಕಲ್ಯಾಣ್ ಅವರ ಮೂರನೇ ವಿವಾಹವಾಗಿತ್ತು. ಅವರು ಮೊದಲು 1997 ರಲ್ಲಿ ನಂದಿನಿ ಅವರನ್ನು ವಿವಾಹವಾಗಿದ್ದರು (1999 ರಲ್ಲಿ ಬೇರೆಯಾದರು). ಬಳಿಕ 2009 ರಲ್ಲಿ ನಟಿ ರೇಣು ದೇಸಾಯಿ ಅವರನ್ನು ವಿವಾಹವಾಗಿ, 2012 ರಲ್ಲಿ ಅವರಿಂದ ವಿಚ್ಛೇದನ ಪಡೆದಿದ್ದರು.

ನಂತರ 2013 ರಲ್ಲಿ ರಷ್ಯಾ ಮೂಲದ ಅನ್ನಾ ಅವರನ್ನು ಪವನ್ ಕಲ್ಯಾಣ್ ವಿವಾಹವಾಗಿದ್ದರು. ಈ ದಂಪತಿಗೆ ಪೋಲೆನಾ ಅಂಜನಾ ಪವನೋವಾ ಮತ್ತು ಮಾರ್ಕ್ ಶಂಕರ್ ಪವನೋವಿಚ್ ಎಂಬ ಇಬ್ಬರು ಮಕ್ಕಳಿದ್ದಾರೆ.

Join WhatsApp

Join Now

Join Telegram

Join Now