ಅನಧಿಕೃತ ಸ್ವತ್ತುಗಳಿಗೆ ಕಂದಾಯ ಪಾವತಿಸಿ, ಇ-ಖಾತಾ ಪಡೆಯಿರಿ : ಏನೆಲ್ಲಾ ದಾಖಲೆಗಳು ಬೇಕು ? ಇಲ್ಲಿದೆ ಸಂಪೂರ್ಣ ಮಾಹಿತಿ…!

ದಾವಣಗೆರೆ, ಮಾ.01 :  ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಇ-ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳನ್ನು ತಿದ್ದುಪಡಿ ಮಾಡಲಾಗಿರುತ್ತದೆ.

 

ಅಸ್ತಿ ಮಾಲೀಕರು ತಮ್ಮ ಅಸ್ತಿಗಳಿಗೆ ಈ ಕೆಳಕಂಡ ದಾಖಲೆಗಳನ್ನು ನೀಡಿ ಇ-ಖಾತಾ ಪಡೆದುಕೊಳ್ಳಬಹುದು.  ಇದರಿಂದ ಅನಧಿಕೃತ ಸ್ವತ್ತುಗಳ ಮಾಲೀಕರು ತಮ್ಮ ಸ್ವತ್ತಿನ ಕಂದಾಯವನ್ನು ಪಾವತಿಸಿ, ಇ-ಖಾತಾ ಪಡೆಯಬಹುದು.  ಸ್ವತ್ತಿನ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ ಅಧಿಕೃತ ಆಸ್ತಿಗಳಿಗೆ ಇ-ಖಾತಾ ಪಡೆಯಲು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಸ್ವತ್ತಿನ ಮಾಲೀಕತ್ವದ ದಾಖಲೆಗಳಾದ ನೋಂದಾಯಿತ ಪತ್ರಗಳು, ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ, ಚಾಲ್ತಿ ಸಾಲಿನವರೆಗೆ ಕಂದಾಯ ಪಾವತಿ ರಶೀದಿ,  ಋಣಭಾರ ಪ್ರಮಾಣ ಪತ್ರ ಹಾಗೂ ಮಾಲೀಕರ ಫೆÇೀಟೋ,  ಆಸ್ತಿ ಇರುವ ಸ್ಥಳದ ಪೆÇೀಟೋ,  ಮಾಲೀಕರ ಗುರುತಿನ ದಾಖಲೆ ಪ್ರತಿಯನ್ನು ಸಲ್ಲಿಸಬೇಕು.  ಅರ್ಜಿಯನ್ನು ಸಲ್ಲಿಸಿದ 7 ದಿನಗಳ ಒಳಾಗಾಗಿ ಇ-ಖಾತಾ ಪಡೆಯಬಹುದು.
ಅನಧಿಕೃತ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಸಲ್ಲಿಸಬೇಕಾದ ದಾಖಲೆಗಳು: ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕ ಸಾಬೀತುಪಡಿಸುವ ಸೆಪ್ಟೆಂಬರ್ 10,2024ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು, ದಾನಪತ್ರ, ವಿಭಾಗ ಪತ್ರಗಳು, ಹಕ್ಕು ಖುಲಾಸೆ ಪತ್ರಗಳು,  ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ,  ಚಾಲ್ತಿ ಸಾಲಿನ ಅಸ್ತಿ ತೆರಿಗೆ ಪಾವತಿ ರಶೀದಿ,  ಮಾಲೀಕರ ಫೆÇೀಟೋ ಮತ್ತು ಸ್ವತ್ತಿನ ಪೆÇೀಟೋ, ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸಬೇಕು. ಅನಧೀಕೃತ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಫೆಬ್ರವರಿ 11 ರಿಂದ 3 ತಿಂಗಳ ಅವಧಿ
ಇ-ಖಾತಾ ಪಡೆಯಲು ಅವಕಾಶವಿಲ್ಲದಿರುವ ಸ್ವತ್ತುಗಳು:  ಸರ್ಕಾರಿ ಜಾಗದಲ್ಲಿರುವ ಸ್ವತ್ತುಗಳು, ಸರ್ಕಾರದ ನಿಗಮ, ಮಂಡಳಿಗಳ ಜಾಗಗಳು,ನಗರ ಸ್ಥಳೀಯ ಸಂಸ್ಥೆಗಳ ಜಾಗದಲ್ಲಿನ ಸ್ವತ್ತುಗಳು,
ಹೆಚ್ಚಿನ ಮಾಹಿತಿಗಾಗಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಆಯಾ ಸ್ಥಳೀಯ ಸಂಸ್ಥೆಗಳ ಕಚೇರಿಯ ನೋಟೀಸ್ ನಲ್ಲಿ ಸಹಾಯವಾಣಿ ಸಂಖ್ಯೆ ಮತ್ತು ಅರ್ಜಿ ಸ್ವೀಕರಿಸಲು ನೇಮಿಸಿದ ಸಿಬ್ಬಂದಿಯ ಹೆಸರನ್ನು ನಮೂದಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ. ತಿಳಿಸಿದ್ದಾರೆ.

suddionenews

Recent Posts

ಏಕನಾಥೇಶ್ವರಿ ಸಿಡಿ ಉತ್ಸವಕ್ಕೆ ಮಳೆಯ ಸಿಂಚನ : ಸಾವಿರಾರು ಭಕ್ತರು ಭಾಗಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 12…

3 hours ago

ಅಂಬೇಡ್ಕರ್ ರವರ “ಭೀಮ ಹೆಜ್ಜೆ “ಭೀಮ ರಥಯಾತ್ರೆ : ಟಿ ಶರ್ಟ್ ಬಿಡುಗಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏಪ್ರಿಲ್. 12…

4 hours ago

ಕ್ಯಾದಿಗೆರೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭೂಮಿ ಪೂಜೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಚಿತ್ರದುರ್ಗ ಏ. 12…

4 hours ago

ಫೋನ್ ಪೇ, ಗೂಗಲ್ ಪೇ ವರ್ಕ್ ಆಗದೆ ಜನರ ಪರದಾಟ ; ಏನಾಯ್ತು..?

  ಬೆಂಗಳೂರು; ಕಳೆದ ಕೆಲವು ವರ್ಷಗಳಿಂದಾನೂ ಡಿಜಿಟಲ್ ಪೇಮೆಂಟ್ ಅನ್ನೇ ಜನ ಅನುಸರಿಸುತ್ತಿದ್ದಾರೆ. ಸಣ್ಣಪುಟ್ಟ ವ್ಯವಹಾರಕ್ಕೂ ಜನರ ಬಳಿ ಕ್ಯಾಶ್…

4 hours ago

ಚಿತ್ರದುರ್ಗ : ಏಪ್ರಿಲ್ 15 ರಂದು ಚಿಕ್ಕಪ್ಪನಹಳ್ಳಿ ಕೊಟ್ರಸ್ವಾಮಿ ರಥೋತ್ಸವ

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 12 : ತಾಲೂಕಿನ ಚಿಕ್ಕಪ್ಪನಹಳ್ಳಿ ಗ್ರಾಮದ ಶ್ರೀಗುರು ಕೊಟ್ರ ಸ್ವಾಮಿ ರಥೋತ್ಸವ ಏಪ್ರಿಲ್  15…

5 hours ago

ಚಿತ್ರದುರ್ಗಕ್ಕೆ ಆಗಮಿಸಿದ ಬಿಜೆಪಿಯ ಭೀಮನ ಹೆಜ್ಜೆ ನೂರರ ಸಂಭ್ರಮ ರಥಯಾತ್ರೆ

    ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ.…

6 hours ago