ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಫೆ.11) : ಸಾರಿಗೆ ನೌಕರರಿಗೆ 7ನೇ ವೇತನ ಜಾರಿಗೆ ಕಷ್ಟವಾಗಬಹುದು. ಆದರೆ ವೇತನ ಪರಿಷ್ಕರಣೆಗೆ ಈಗಾಗಲೇ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಲಾಗಿದ್ದು, ಆದಷ್ಟು ಶೀಘ್ರದಲ್ಲಿ ವೇತನ ಪರಿಷ್ಕರಣೆ ಕಾರ್ಯ ಮಾಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದರು.
ಮೊಳಕಾಲ್ಮುರು ಪಟ್ಟಣದ ಹಳೆಯ ತಾಲ್ಲೂಕು ಕಚೇರಿ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ನಿರ್ಮಿಸಲಾಗುತ್ತಿರುವ ಮೊಳಕಾಲ್ಮುರು ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಂಕು ಸ್ಥಾಪನೆ ಹಾಗೂ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಸಾರಿಗೆ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಇಲಾಖೆಯ ಚಾಲಕರು, ನಿರ್ವಾಹಕರಿಗೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ಅವರ ಬಹಳ ದಿನ ಬೇಡಿಕೆಯಾದ 7ನೇ ವೇತನ ಆಯೋಗ ಜಾರಿ, ವೇತನ ಪರಿಷ್ಕರಣೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಕೋವಿಡ್ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ನೌಕರರಿಗೆ ಯಾವುದೇ ತೊಂದರೆಯಾಗಬಾರದೆಂದು ಮುಖ್ಯಮಂತ್ರಿಗಳು ರೂ. 6 ಸಾವಿರ ಕೋಟಿ ಅನುದಾನ ನೀಡಿದ್ದಾರೆ. ಮುಷ್ಕರದಲ್ಲಿ ಪಾಲ್ಗೊಂಡ ಸಸ್ಪೆಂಡ್ ಹಾಗೂ ಡಿಸ್ ಮಿಸ್ ಆದವರನ್ನೂ ಪುನಃ ನೇಮಕ ಮಾಡಿಕೊಳ್ಳುವ ಕೆಲಸ ಮಾಡಲಾಗಿದೆ ಎಂದರು.
ಇಲಾಖೆಯು ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿಯೂ 4 ನಿಗಮಗಳಲ್ಲಿ ಸುಮಾರು 3,500 ಬಸ್ ಗಳ ಖರೀದಿ ಮಾಡಲಾಗಿದೆ. 2030ರೊಳಗೆ ಎಲ್ಲ ಹಳೆಯ ಬಸ್ ಗಳನ್ನು ತೆಗೆದು ಸುಮಾರು 28 ಸಾವಿರ ಬಸ್ ಗಳನ್ನು ಖರೀದಿ ಮಾಡುವ ಉದ್ದೇಶ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಇಲಾಖೆ ಕಾರ್ಯಪ್ರವೃತ್ತವಾಗಿದೆ ಎಂದು ಹೇಳಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್