Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡೆತ್ ನೋಟ್ ಬರೆದು ಪಿಡಿಓ ಆತ್ಮಹತ್ಯೆ: ಸಾವಿನ ಹಿಂದೆ ಅನುಮಾನ, ತನಿಖೆಗೆ ಒತ್ತಾಯ

---Advertisement---

ರೋಣ : ತಾಲೂಕಿನ ಅಸೂಟಿ ಗ್ರಾಮ ಪಂಚಾಯಿತಿಯ ವಿಸ್ತೀರ್ಣಾಧಿಕಾರಿ (ಪಿಡಿಓ) ಒಬ್ಬರು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಶ್ರೀನಗರ ಬಡಾವಣೆಯಲ್ಲಿ ಗುರುವಾರ ನಡೆದಿದೆ.

ಮಕ್ತುಹುಸೇನ್ ಕರಡಿಗುಡ್ಡ (46) ಮೃತ ಪಿಡಿಓ ಆಗಿದ್ದು, ಅವರು ವಾಸಿಸುತ್ತಿದ್ದ ಬಾಡಿಗೆ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಧಾರವಾಡ ಜಿಲ್ಲೆಯವರಾದ ಅವರು, ಪತ್ನಿ ಮತ್ತು ಮೂರು ಮಕ್ಕಳನ್ನು ಅಗಲಿದ್ದಾರೆ. ಕಳೆದ 25 ವರ್ಷಗಳಿಂದ ಪಂಚಾಯತ್ ರಾಜ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ಅವರು, ಎರಡು ತಿಂಗಳ ಹಿಂದೆ ರೋಣ ತಾಲೂಕಿನ ಅಸೂಟಿ ಗ್ರಾಮ ಪಂಚಾಯಿತಿಗೆ ವರ್ಗಾವಣೆಯಾಗಿದ್ದು, ಶ್ರೀನಗರ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಘಟನಾ ಸ್ಥಳದಲ್ಲಿ ಪತ್ತೆಯಾದ ಡೆತ್ ನೋಟ್‌ನಲ್ಲಿ ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಉಲ್ಲೇಖಿಸಲಾಗಿದೆ. ಜೊತೆಗೆ, ತಮ್ಮ ಮರಣದ ನಂತರ ದೊರೆಯುವ ಹಣದಲ್ಲಿ ಮಕ್ಕಳನ್ನು ಚೆನ್ನಾಗಿ ಓದಿಸಬೇಕೆಂದು, ಅನುಕಂಪದ ನೇಮಕಾತಿಗಾಗಿ ದಿಬ್ಬದಮನಿ ಅವರ ಸಹಾಯ ಪಡೆಯಬೇಕೆಂದು ಬರೆದುಕೊಂಡಿದ್ದಾರೆ. ತನ್ನ ಸಾವನ್ನು ಆತ್ಮಹತ್ಯೆ ಎಂದು ದಾಖಲಿಸಬಾರದು, ಹೃದಯಾಘಾತದಿಂದ ಮೃತಪಟ್ಟಿದ್ದೇನೆ ಎಂದು ದಾಖಲಿಸಬೇಕೆಂದು ಸಹ ಅವರು ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಕುರಿತು ಮೃತರ ಪತ್ನಿ ಆಸ್ಮಾ ಬಾನು ಕರಡಿಗುಡ್ಡ ಅವರು ಪೊಲೀಸರಿಗೆ ಮಾಹಿತಿ ನೀಡಿ, ಡೆತ್ ನೋಟ್‌ನಲ್ಲಿರುವ ಬರಹ ತಮ್ಮ ಪತಿಯದ್ದೇ ಆಗಿದ್ದರೂ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಅವರು ಒತ್ತಾಯಿಸಿದ್ದಾರೆ.ಈ ಸಂಬಂಧ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹಾಗೂ ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ್ಯದ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...