Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು : ಸಿಇಒ ಎಸ್.ಜೆ. ಸೋಮಶೇಖರ್ ಆದೇಶ

---Advertisement---

 

ಚಿತ್ರದುರ್ಗ ಸೆ. 26 :  ಜಂಟಿ ಖಾತೆಯಲ್ಲಿದ್ದ ನಿವೇಶನಗಳನ್ನು ಅಕ್ರಮವಾಗಿ ಇತರೆ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಕೊಟ್ಟು, ಇ-ಸ್ವತ್ತು ಖಾತೆ ಮಾಡಿದ ಹಿರಿಯೂರು ತಾಲ್ಲೂಕು ಯರಬಳ್ಳಿ ಗ್ರಾಮ ಪಂಚಾಯತ್ ಪಿಡಿಒ ಬಸವರಾಜು ಎಸ್. ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ.

ತಿಪ್ಪಮ್ಮ ಇವರ ಹೆಸರಿನಲ್ಲಿನ ಸೈಟ್ ನಂ. 31 ಹಾಗೂ 32 ಸ್ವತ್ತನ್ನು ವೈನ್ ಶಾಪ್ ಅಂಗಡಿ ವ್ಯವಹಾರ ನಡೆಸುವುದಕ್ಕಾಗಿ ಯರಬಳ್ಳಿ ಗ್ರಾಮ ಪಂಚಾಯತ್‍ನ ಕಂದಿಕೆರೆ ಗ್ರಾಮದ ಕೆ.ವಿ. ಉಮಾದೇವಿ ಹಾಗೂ ಆರ್. ಹೊರಕೇರಪ್ಪ ಅವರು ಹಿರಿಯೂರಿನ ಉಪನೊಂದಣಿ ಕಚೇರಿಯಲ್ಲಿ ಕಳೆದ 2017 ರ ಫೆಬ್ರವರಿ 13 ರಂದು ಜಂಟಿ ಖಾತೆಯಾಗಿ ನೊಂದಣಿ ಮಾಡಿಸಿಕೊಂಡಿದ್ದರು.

ಆದರೆ ಇದನ್ನು ಅಕ್ರಮವಾಗಿ ನಕಲಿ ಮತ್ತು ಪೋರ್ಜರಿ ದಾಖಲೆಗಳನ್ನು ಸೃಷ್ಟಿಸಿಕೊಂಡು, ಆರ್. ಹೊರಕೇರಪ್ಪ ಇವರ ಖಾತೆಗೆ ಮಾಡಿ, ಅಕ್ರಮವಾಗಿ ಮತ್ತು ಕಾನೂನು ಬಾಹಿರವಾಗಿ ಇ-ಸ್ವತ್ತು ಮಾಡಿಕೊಟ್ಟು ಅಧಿಕಾರದ ದುರುಪಯೋಗ ಮಾಡಿರುತ್ತಾರೆ ಎಂಬುದಾಗಿ ದೂರು ಬಂದ ಹಿನ್ನೆಲೆಯಲ್ಲಿ ಹಿರಿಯೂರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಂಡಿದ್ದರು.

ಈ ಬಗ್ಗೆ ಸ್ಥಳ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯವರಿಗೆ ಆದೇಶಿಸಲಾಗಿತ್ತು.  ಅದರನ್ವಯ ಜಿ.ಪಂ. ಉಪಕಾರ್ಯದರ್ಶಿ ಅವರು ಸಲ್ಲಿಸಿರುವ ವರದಿ ಆಧಾರದಲ್ಲಿ, ಯರಬಳ್ಳಿ ಗ್ರಾಮ ಪಂಚಾಯತ್ ಪಿಡಿಒ ಬಸವರಾಜು ಎಸ್. ಅವರು ಜವಾಬ್ದಾರಿಯುತ ಸರ್ಕಾರಿ ಅಧಿಕಾರಿಯಾಗಿ, ಅಕ್ರಮವಾಗಿ, ಕಾನೂನು ಬಾಹಿರವಾಗಿ ಇ-ಸ್ವತ್ತುಗಳನ್ನು ಮಾಡಿ, ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ, ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment