ಬೆಂಗಳೂರು: ಕನ್ನಡದ ಕಣ್ಮಣಿ, ಯುವನಟ ಪುನೀತ್ ರಾಜ್‍ಕುಮಾರ್ ಅವರ ನಿಧನದ ಬಳಿಕ ನಡೆದ ಪಾರ್ಥಿವ ಶರೀರಕ್ಕೆ ಗೌರವಾರ್ಪಣೆ, ಅಂತಿಮ ವಿಧಿವಿಧಾನದ ಸಂದರ್ಭದಲ್ಲಿ ಅತ್ಯಂತ ಸಂಯಮದಿಂದ ವರ್ತಿಸಿದ ಕನ್ನಡದ ಮೇರುನಟರಾದ ಡಾ.ರಾಜ್‍ಕುಮಾರ್ ಅವರ ಕುಟುಂಬವರ್ಗದವರಿಗೆ ಮತ್ತು ಶಿಸ್ತಿನಿಂದ ವರ್ತಿಸಿ ಗೌರವ ಸಮರ್ಪಿಸಿದ ಅಭಿಮಾನಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಈ ಕಠಿಣ ಸಂದರ್ಭದಲ್ಲಿ ಆಸ್ಪತ್ರೆಗೆ ತಕ್ಷಣ ಭೇಟಿ ನೀಡಿ, ನಿರಂತರವಾಗಿ ಸ್ಥಳದಲ್ಲಿ ಹಾಜರಿದ್ದು, ಅತ್ಯಂತ ಸಮರ್ಥವಾಗಿ ಪರಿಸ್ಥಿತಿಯನ್ನು ನಿಭಾಯಿಸಿ ಸಮಸ್ತ ಕನ್ನಡಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ರಾಜ್ಯದ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ಪೊಲೀಸ್ ಇಲಾಖೆಗೆ ಸೂಕ್ತ ನಿರ್ದೇಶನಗಳನ್ನು ನೀಡಿ ಶಾಂತಿ ಕಾಪಾಡಲು ಕಾರಣಕರ್ತರಾಗಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಸನ್ನಿವೇಶವನ್ನು ನಿಭಾಯಿಸಿದ ರೀತಿಯೂ ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.