Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಜ್ಯದಲ್ಲಿ ಪೆನ್ ಡ್ರೈವ್ ನದ್ದೇ ಸದ್ದು : ಅಷ್ಟಕ್ಕೂ ಲಕ್ಷ್ಮಣ್ ಸವದಿ ಬಳಿ ಇರೋ ಪೆನ್ ಡ್ರೈವ್ ಯಾರದ್ದು..?

---Advertisement---

 

ಮಾಜಿ ಸಿಎಂ ಕುಮಾರಸ್ವಾಮಿ ನನ್ನ ಬಳಿ ಪೆನ್ ಡ್ರೈವ್ ಇದೆ ಅಂತ ಹಲವು ಬಾರಿ ಹೇಳಿದ್ದಾರೆ. ಆದ್ರೆ ಆ ಪೆನ್ ಡ್ರೈವ್ ನಲ್ಲಿರುವ ಮಾಹಿತಿ ಏನು ಅನ್ನೋದನ್ನು ಮಾತ್ರ ತಿಳಿಸಿಲ್ಲ. ಇದೀಗ ಶಾಸಕ ಲಕ್ಷ್ಮಣ ಸವದಿ ಹೊಸ ಬಾಂಬ್ ಹಾಕಿದ್ದಾರೆ. ನನ್ನ ಬಳಿಯೂ ಪೆನ್ ಡ್ರೈವ್ ಇದೆ. ಸಮಯ ಬಂದಾಗ ರಿಲೀಸ್ ಮಾಡ್ತೇನೆ ಎಂದಿದ್ದಾರೆ.

ನನ್ನ ಬಳಿ ಪೆನ್ ಡ್ರೈವ್ ಇರುವುದು ಕಟು ಸತ್ಯ. ಸಮಯ ಬಂದಾಗ ಅದನ್ನು ರಿಲೀಸ್ ಮಾಡ್ತೀನಿ. ನನ್ನ ಮೇಲೆ ಎಷ್ಟು ಒತ್ತಡ ಹೆಚ್ಚಾಗುತ್ತದೆಯೋ ಅಷ್ಟು ಬೇಗ ಪೆನ್ ಡ್ರೈವ್ ಅನ್ನು ರಿಲೀಸ್ ಮಾಡುತ್ತೇನೆ. ಪೆನ್ ಡ್ರೈವ್ ಯಾವ ಪಕ್ಷಕ್ಕೆ ಸೇರಿದ್ದು ಎಂಬುದು ಬಹಿರಂಗವಾದ ಬಳಿಕ ಗೊತ್ತಾಗಲಿದೆ. ಅಲ್ಲಿಯವೆರೆಗೂ ಕಾದು ನೋಡಬೇಕು ಎಂದು ಲಕ್ಷ್ಮಣ ಸವದಿ ಪೆನ್ ಡ್ರೈವ್ ಬಗ್ಗೆ ಹೊಸ ಬಾಂಬ್ ಹಾಕಿದ್ದಾರೆ.

ಇದೇ ವೇಳೆ ಮಹೇಶ್ ಕುಮುಟಳ್ಳಿ ವಿರುದ್ಧ ಕಿಡಿಕಾರಿದ ಸವದಿ, ರಾಜಕೀಯವಾಗಿ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. 2700 ಕೋಟಿ ರೂ.ಗಳ ಅನುದಾನದಲ್ಲಿ ಅಥಣಿ ಮತ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನೆ ಆಗುತ್ತಿದೆ. ಇದು ಬಿಜೆಪಿ ಕಾಲಾವಧಿಯಲ್ಲಿ ಮಂಜೂರಾದ ಅನುದಾನದಿಂದ ಎಂದು ದಾಖಲೆ ಸಮೇತ ಸಾಬೀತುಪಡಿಸಿದರೆ ನಾನು ರಾಜಕೀಯದಿಂದಲೇ ನಿವೃತ್ತಿ ಹೊಂದುತ್ತೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...