ಚಿತ್ರದುರ್ಗ,( ಸೆಪ್ಟಂಬರ್ 30) : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಎಲ್ಲಾ ವರ್ಗದ ಜನರಿಗೂ ಸಿಗಬೇಕು ಇದರಿಂದ ಮುಪ್ಪಿನ ಕಾಲದಲ್ಲಿ ಆರ್ಥಿಕ ಶಕ್ತಿಯನ್ನು ತುಂಬುತ್ತವೆ ಎಂದು ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪಿಂಚಣಿ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಸರ್ಕಾರದ ಯೋಜನೆಗಳಾದ ವಿಧವಾ ವೇತನ, ಅಂಗವಿಕಲರ ವೇತನ, 60 ವರ್ಷ ಮೇಲ್ಪಟ್ಟವರಿಗೆ ಪಿಂಚಣಿ ಎಲ್ಲಾ ಫಲಾನುಭವಿಗಳಿಗೂ ತಲುಪಬೇಕು ಹಾಗಾಗಿ ನೀವು ವಯಸ್ಸಿನಲ್ಲಿ ಇರುವಂತಹ ಸಂದರ್ಭದಲ್ಲಿ ಕಾರ್ಮಿಕರಾಗಿ, ರೈತರಾಗಿ, ಸರ್ಕಾರಿ ನೌಕರರಾಗಿ ವಿವಿಧ ರೀತಿಯ ಕೆಲಸಗಳನ್ನು ಮಾಡುವುದರ ಮೂಲಕ ಈ ದೇಶಕ್ಕೆ ಸೇವೆ ಸಲ್ಲಿಸಿ ದೇಶದ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವನ್ನು ನೀಡಿದ್ದೀರಿ ನಿಮಗೆ ಗೌರವ ನೀಡುವಂಥದ್ದು ನಮ್ಮ ಕರ್ತವ್ಯ ಎಂದರು.
ದೇಶದಲ್ಲಿರುವಂತಹ ಯಾವುದೇ ಬಡವರು ಸಹ ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಗರೀಬ್ ಕಲ್ಯಾಣ್ ಯೋಜನೆಯ ಮೂಲಕ ಇನ್ನು ಮೂರು ತಿಂಗಳ ಕಾಲ ಉಚಿತ ಅಕ್ಕಿ ವಿತರಣೆಗೆ ಕ್ರಮ ಕೈಗೊಂಡಿದೆ ಎಂದರು.
ಕಂದಾಯ ಅಧಿಕಾರಿ ವರ್ಗದವರು ಮನೆ ಮನೆಗೆ ಭೇಟಿ ನೀಡಿ ಯಾರು ಈ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂಬುದನ್ನ ಗುರುತಿಸಿ ಅಂತಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯವನ್ನು ಒದಗಿಸಲಾಗಿದೆ ಎಂದರು.
ಪಿಂಚಣಿ ಅದಾಲತ್‍ನಲ್ಲಿ ಇಂದಿರಾಗಾಧಿ ವೃದಾಪ್ಯ ವೇತನ 71, ಅಂಗವಿಕಲ 15, ವಿಧವಾ ವೇತನ 25, ಹಿರಿಯ ನಾಗರಿಕರ ಪಿಂಚಣಿ 47, ಒಟ್ಟು 164 ಪಿಂಚಣಿ ಆದೇಶ ಪತ್ರಗಳನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಸತ್ಯನಾರಾಯಣ್, ಗ್ರೇಡ್-2 ತಹಶೀಲ್ದಾರ್ ಫಾತಿಮಾ, ಕಂದಾಯ ಅಧಿಕಾರಿ ಶರಣಪ್ಪ, ಮಮತಾ, ಗ್ರಾಮ ಲೆಕ್ಕಾಧಿಕಾರಿ ಪಾಂಡುರಂಗಪ್ಪ, ತಾಲ್ಲೂಕು ಕಚೇರಿಯ ಸಿಬ್ಬಂದಿಗಳು ಹಾಗೂ ಹಿರಿಯ ನಾಗರೀಕರು ಇದ್ದರು.
ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…