Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಜನ ಕಾತರರಾಗಿದ್ದಾರೆ : ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ

Facebook
Twitter
Telegram
WhatsApp

 

ಹೊಳಲ್ಕೆರೆ,(ಏ.30) :  ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಜನ ಕಾತರರಾಗಿದ್ದಾರೆ ಎಂದು ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಎಚ್.ಡಿ.ಪುರ, ಮಲ್ಲಾಡಿಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಭಾನುವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

2013ರಲ್ಲಿ ಸಿದ್ಧರಾಮಯ್ಯನವರ ಅಧಿಕಾರಾವಧಿ ಸುವರ್ಣಯುಗವಾಗಿತ್ತು. ರಾಜ್ಯದ ಹಿಂದುಳಿದ ಬಡವರು,  ಕೂಲಿಕಾರ್ಮಿಕರು, ಯುವಕರಿಗೆ ಅನೇಕ ಕಾರ್ಯಕ್ರಮಗಳನ್ನು ನೀಡಲಾಗಿತ್ತು ಎಂದರು.

ಈಗಿನ ಯುವಕರಿಗೆ ಇತಿಹಾಸದ ಮಾರ್ಗವನ್ನು ತಪ್ಪಿಸುವ ಕೆಲಸ ಬಿಜೆಯವರು ಮಾಡುತ್ತಿದ್ದಾರೆ. ಮೇಲು ಕೀಳು ಜನರ ಮಧ್ಯೆ ಎತ್ತಿಕಟ್ಟುವ ಕೆಲಸ ನಡೆಯುತ್ತಲೇ ಇದೆ. ಇದು ಇಂದಿಗೂ ನಿಂತಿಲ್ಲ ಎಂದು ಹೇಳಿದರು.

2014ರಲ್ಲಿ ಅಧಿಕಾರಕ್ಕೆ ಬಂದ ಕೇಂದ್ರದ ಬಿಜೆಪಿ ಸರ್ಕಾರ ರೈತ ವಿರೋಧಿ ಕಾಯ್ದೆ ಗಳನ್ನು ಜಾರಿಗೆ ತಂದಿತು. ಇದರ ವಿರುದ್ದ ಹೋರಾಟ ನಡೆಸಿದ  ರೈತರಿಗೆ ದೇಶದ್ರೋಹಿಗಳು ಎನ್ನುವ ಪಟ್ಟ ಕಟ್ಟಲಾಯಿತು. ಇದು ಇಡೀ ದೇಶದ ರೈತರಿಗೆ ಮಾಡಿದ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮನಮೋಹನ್ ಸಿಂಗ್ ಅವರ ಅಧಿಕಾರದ ಅವಧಿಯಲ್ಲಿ  72 ಸಾವಿರ ಕೋಟಿ ರೈತರ ಸಾಲ ಮನ್ನ ಮಾಡಲಾಯಿತು. ಸಿದ್ದರಾಮಯ್ಯನವರ ಕಾಲದಲ್ಲಿ ರೈತರಿಗೆ ಮತ್ತೆ ರಾಜ್ಯದ ಜನತೆಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಕೃಷಿ ಹೊಂಡ, ಬಾಡಿಗೆ ಯಂತ್ರೋಪಕರಣಗಳ‌ ವಿತರಣೆ, ಅನ್ನಭಾಗ್ಯ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ರೂಪಿಸಲಾಗಿತ್ತು ಎಂದರು.

ರೈತರ ಪರ, ಚಿಂತನೆ ಇಲ್ಲದ ಬಿಜೆಪಿಯನ್ನು ಅಧಿಕಾರದಿಂದ ಕಿತ್ತುಹಾಕಲು ದಿನಗಣನೆ ಆರಂಭವಾಗಿದೆ. ಕಾಂಗ್ರೆಸ್ ಪಕ್ಷವು ಬಡವರ ಪರವಿದೆ. ಈ ಹಿಂದೆ ಶಿಕ್ಷಣ ವ್ಯವಸ್ಥೆ ಕೇವಲ ಉಳ್ಳವರ ಪರ ಮಾತ್ರವಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಪ್ರತಿಯೊಬ್ಬರ ಅಕ್ಷರವಂತರಾಗಬೇಕು ಎನ್ನುವುದನ್ನು ಗಮನಿಸಿ ಲಕ್ಷಾಂತರ ಶಾಲೆಗಳನ್ನು ತೆರೆಯಲಾಯಿತು ಎಂದರು.

ಬಿಜೆಪಿಯವರು ಜನಪರ ಕೆಲಸ ಮಾಡಿದರೆ ನಮ್ಮದೇನೂ ತಕರಾರು ಇಲ್ಲ. ಓಟಿಗಾಗಿ ಹಿಂದು ಮುಸ್ಲಿಂರ ಮಧ್ಯಮೊದಲ ವಿಷ ಬೀಜ ಬಿತ್ತಿ ಜನರ ನೆಮ್ಮದಿ ಹಾಳು ಮಾಡುತ್ತಿದೆ. ನಾವುಗಳು ಬಸವಣ್ಣನವರ  ತತ್ವದಡಿಯಲ್ಲಿ ಕೆಲಸ ಮಾಡುವವರು ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ಅವಧಿಯೂ ಮಮತೆ, ಮಾನವೀಯ, ಕರುಣೆ, ತಾಯಿ ಹೃದಯವಂತಿಕೆಯಿಂದ ಕೂಡಿತದ್ದು ಜನಪರ ಕಾಳಜಿ ಇರುವಂತದ್ದು, ಎಲ್ಲ ಸಮಯದಾಯಗಳಿಗೆ  ನ್ಯಾಯಯುತವಾದ ಕಾರ್ಯಕ್ರಮಗಳನ್ನು ರೂಪಿಸಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ  ಅನ್ನಭಾಗ್ಯ ಯೋಜನೆ ಸೇರಿದಂತೆ ಅನೇಕ ಕಾರ್ಯಕ್ರಮಗಳಿಗೆ ಕತ್ತರಿ ಹಾಕಲಾಯಿತು. ಇದನ್ನೆಲ್ಲ ಅರಿತು ಈ ಬಾರಿ ಬಿಜೆಪಿಯ ಬೆಂಬಲವಿಲ್ಲ ಎನ್ನುವ ಆತಂಕ ಬಿಜೆಪಿ ನಾಯಕರಲ್ಲಿ ಮನೆಮಾಡಿದ್ದು. ರಾಜ್ಯದಲ್ಲಿ 150 ಕ್ಕು ಹಚ್ಚು ಸ್ಥಾನಗಳನ್ನು ಪಡೆದು ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಚ್. ಆಂಜನೇಯ ಹೋರಾಟದಿಂದ ಬಂದ ಮಾನವೀಯ ಗುಣವುಳ್ಳ ವ್ಯಕ್ತಿ ಜನರಲ್ಲೇ ದೇವರನ್ನು ಕಂಡವರು. ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದಾಗ ಎಸ್ಸಿ ಎಸ್ಟಿ‌ ಬಿಲ್ ಪಾಸ್ ಮಾಡಿದ ಧೀಮಂತ ನಾಯಕ.‌ ನೊಂದ ಜನರ ಸಂಕೇತ. ಇಂತಹ ನಾಯಕನನ್ನು ಮತ್ತೊಮ್ಮೆ ಆರಿಸಿ ವಿಧಾನಸಭೆಗೆ ಕಳಿಸುವಂತೆ ಮನವಿ ಮಾಡಿದರು.

ಈಗಾಗಲೇ ಕಾಂಗ್ರೆಸ್ ಪಕ್ಷವು ಅನ್ನಭಾಗ್ಯ, ನಿರುದ್ಯೋಗ ಯುವಕರಿಗೆ ಭತ್ಯೆ, 200 ಯುನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ನೀಡುವ ವಿನೂತನ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಸರ್ಕಾರ ಬಂದ ಕೂಡಲೇ ಈ ಕಾರ್ಯಕ್ರಮ ಜಾರಿಗೊಳ್ಳಲಿವೆ ಎಂದು ಭರವಸೆ ನೀಡಿದರು.

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ,  ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಆಸೆ, ಆಮೀಷಗಳಿವೆ ಬಲಿಯಾಗಬೇಡಿ, ಈಗಿನ ಶಾಸಕರು 300 ಕೆರೆಗಳನ್ನು ನಿರ್ಮಿಸಿದ್ದಾರೆಂದು ಸುಳ್ಳು ಹೇಳಿ ಜನರ ಹಣ ಲೂಟಿ ಹೊಡೆದಿದ್ದಾರೆ ಎಂದು ದೂರಿದರು.

ಈಚಘಟ್ಟ, ನಗರಘಟ್ಟ ಸೇರಿ ವಿವಿಧ ಗ್ರಾಮಗಳಲ್ಲಿ ನಟಿ ಉಮಾಶ್ರೀ ಅವರು, ಆಂಜನೇಯ ಪರ ಮತಯಾಚಿಸಿದರು.

ಹಿರಿಯ ನಟಿ ಆಗಮನದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಜಮಾಯಿಯಿಸಿದ್ದರು. ಅವರ ಕೈಕುಲಕಿ, ಅವರೊಂದಿಗೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಟಿ.ಹನುಮಂತಪ್ಪ, ಎಂ.ಪ್ರಕಾಶ್, ಜಿಪಂ ಮಾಜಿ ಅಧ್ಯಕ್ಷ ಆರ್.ಶಿವಕುಮಾರ್, ಸದಸ್ಯರಾದ ಇಂದಿರಾಕಿರಣ್, ಡಿ.ಕೆ.ಶಿವಮೂರ್ತಿ, ಎಸ್.ಜೆ.ರಂಗಸ್ವಾಮಿ, ಲೋಹಿತ್ ಕುಮಾರ್,  ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಕಾಟೀಹಳ್ಳಿ ಶಿವಣ್ಣ, ಕೆಪಿಸಿಸಿ ಮಾನವ ಹಕ್ಕುಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಂದು ಗೌಡ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮಜರ್ ಉಲ್ಲಾಖಾನ್, ಯೂತ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಯುವ ಕಾಂಗ್ರೆಸ್ ‌ಮಾಜಿ‌ ಜಿಲ್ಲಾಧ್ಯಕ್ಷ ಮಧುಪಾಲೆಗೌಡ,  ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಚ್.ಡಿ.ರಂಗಯ್ಯ,  ಎಚ್.ಡಿ.ಪುರ ಗ್ರಾಪಂ ಅಧ್ಯಕ್ಷೆ ಶಿಲ್ಪ ಪ್ರಕಾಶ್, ಬೋವಿ ಸಂಘದ ಜಿಲ್ಲಾಧ್ಯಕ್ಷ ಚಿಕ್ಕಂದವಾಡಿ ತಿಪ್ಪೇಸ್ವಾಮಿ,  ಮುಖಂಡರಾದ ವೈಶಾಖ್, ಮತ್ತಿಗಟ್ಟ ದಿವಾಕರ್, ಅಜ್ಜಣ್ಣ ಮಾಯಣ್ಣ, ಮಹಾರುದ್ರಣ್ಣ ವೈಶಾಖ್ ಯಾದವ್, ರಮೇಶ್,  ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!