Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

‘ಕನ್ನಡಿಗರು ಸೂರ್ಯನೇ ಹುಟ್ಟದ ದಿನ ನೋಡಬಹುದು, ಆದ್ರೆ ಕಾಂಗ್ರೆಸ್ ಒಳಜಗಳ ಇಲ್ಲದ ದಿನ ನೋಡಲು ಸಾಧ್ಯವಿಲ್ಲ’: ಆರ್. ಅಶೋಕ್ ಲೇವಡಿ

---Advertisement---

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ಮತ್ತು ನಾಯಕರ ನಡುವಿನ ಶೀತಲ ಸಮರದ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರವಾಗಿ ವ್ಯಂಗ್ಯವಾಡಿದ್ದಾರೆ.

ಟ್ವಿಟರ್ (X) ಮೂಲಕ ಕಾಂಗ್ರೆಸ್ ನಾಯಕರ ಕಾಲೆಳೆದಿರುವ ಅವರು, “ಕನ್ನಡಿಗರು ಬಹುಶಃ ಒಂದು ದಿನ ಸೂರ್ಯನೇ ಹುಟ್ಟದ ದಿನವನ್ನಾದರೂ ನೋಡಬಹುದೇನೋ, ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಒಳಜಗಳ ಇಲ್ಲದ ದಿನವನ್ನ ನೋಡಲು ಸಾಧ್ಯವೇ ಇಲ್ಲ” ಎಂದು ಲೇವಡಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣಗಳ ನಡುವಿನ ನಿರಂತರ ಹಗ್ಗಜಗ್ಗಾಟವನ್ನು ಪ್ರಸ್ತಾಪಿಸಿರುವ ಅಶೋಕ್, ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಉಚಿತ ಸಲಹೆಯೊಂದನ್ನು ನೀಡಿದ್ದಾರೆ.

ಇನ್ನು ಎರಡು ವರ್ಷ ನಡೆಯಲಿರುವ ಡಿ.ಕೆ. ಶಿವಕುಮಾರ್ ಸರ್ಕಾರದ ಈ ನಿತ್ಯ ಕಚ್ಚಾಟಕ್ಕೆ ತೇಪೆ ಹಚ್ಚಲು ರಾಹುಲ್ ಗಾಂಧಿ ಅವರು, ಕೆ.ಸಿ. ವೇಣುಗೋಪಾಲ್ ಅವರು ಹಾಗೂ ರಣದೀಪ್ ಸಿಂಗ್ ಸೂರ್ಜೆವಾಲ ಅವರು ಬೆಂಗಳೂರಿನಲ್ಲೇ ಒಂದು ಮನೆ ಮಾಡಿಕೊಂಡು ಇಲ್ಲೇ ಇದ್ದುಬಿಟ್ಟರೆ ಒಳ್ಳೆಯದು ಎಂದು ಆರ್. ಅಶೋಕ್ ಲೇವಡಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now